Karnataka Politics: ಬಿಜೆಪಿ ಬಿಡಲ್ಲ, ಕಾಂಗ್ರೆಸ್‌ ಸೇರಲ್ಲ: ಬೆಲ್ಲದ

By Kannadaprabha News  |  First Published Feb 1, 2022, 4:09 AM IST

*   ನನ್ನ ಏಳ್ಗೆ, ಕ್ಷೇತ್ರದ ಅಭಿವೃದ್ಧಿ ಸಹಿಸದ ಜನರಿಂದ ಸುಳ್ಳು ಸುದ್ದಿ: ಶಾಸಕರ ಸ್ಪಷ್ಟನೆ
*   ಕ್ಷೇತ್ರದಲ್ಲಿ ನಾನೂ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ
*   ನಾನು ಪಕ್ಷದಲ್ಲಿ ಕಾರ್ಯಕರ್ತರನ್ನು ಬೆಳೆಸಿಲ್ಲ ಎಂಬುದು ಕೂಡ ಸುಳ್ಳು ಸುದ್ದಿ


ಧಾರವಾಡ(ಫೆ.01): ನಾನು ಬಿಜೆಪಿ(BJP) ತೊರೆದು ಕಾಂಗ್ರೆಸ್‌(Congress) ಸೇರುತ್ತಿದ್ದೇನೆ ಎಂಬ ವದಂತಿ ಮಾಧ್ಯಮಗಳಲ್ಲಿ ಹರಡುತ್ತಿದ್ದು, ಇದು ಸತ್ಯಕ್ಕೆ ದೂರ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ, ಕಾಂಗ್ರೆಸ್‌ ಸೇರಲ್ಲ ಎಂದು ಶಾಸಕ ಅರವಿಂದ ಬೆಲ್ಲದ(Aravind Bellad) ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ನನ್ನ ಏಳಿಗೆ ಮತ್ತು ಕ್ಷೇತ್ರದ ಅಭಿವೃದ್ಧಿ ಸಹಿಸದ ಕೆಲವರು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಈ ಹಿನ್ನೆಲೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಸುದ್ದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ರಾಷ್ಟ್ರೀಯತೆ ಮತ್ತು ಹಿಂದುತ್ವದ(Hindutva) ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿರುವ ನನಗೆ ಬಿಜೆಪಿ ವರಿಷ್ಠರು ಟಿಕೆಟ್‌ ನೀಡಿ ಎರಡು ಬಾರಿ ಶಾಸಕನಾಗಲು ಅವಕಾಶ ಕಲ್ಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದಲ್ಲಿ ಕೇಂದ್ರ ಸರ್ಕಾರ(Central Government) ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಿಕೊಂಡು ಹೋಗುತ್ತಿದೆ. ಇದೇ ವೇಳೆ ಕ್ಷೇತ್ರದಲ್ಲಿ ನಾನೂ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ವಾಸ್ತವ ಹೀಗಿದ್ದರೂ ನಾನು ಬಿಜೆಪಿ ತೊರೆಯುತ್ತೇನೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಆದರೆ, ತಾವು ಪಕ್ಷ ತೊರೆಯುವ ವಿಚಾರ ಮಾಡಿಲ್ಲ. ಆದ್ದರಿಂದ ಪಕ್ಷ ತೊರೆಯುವ ಸುದ್ದಿಯನ್ನು ಕ್ಷೇತ್ರದ ಜನರು ಮತ್ತು ಪಕ್ಷದ ಕಾರ್ಯಕರ್ತರು ನಂಬಬಾರದು ಎಂದರು.

Tap to resize

Latest Videos

Karnataka Congress ಪಾಟೀಲ್ ಜೊತೆಗಿನ ಮಿಟಿಂಗ್ 100%. ಸಕ್ಸಸ್ ಫುಲ್, ಸಂಚಲನ ಮೂಡಿಸಿದ ಇಬ್ರಾಹಿಂ ಹೇಳಿಕೆ

ಹುಬ್ಬಳ್ಳಿ- ಧಾರವಾಡ(Hubballi-Dharwad) ಮಹಾನಗರ ಪಾಲಿಕೆಯ ಮೇಯರ್‌ ಸ್ಥಾನ ಧಾರವಾಡಕ್ಕೆ ಕಳೆದ ಎರಡು ಅವಧಿ​ಯಲ್ಲಿ ಮೂರು ಜನರಿಗೆ ಮಾತ್ರ ಸಿಕ್ಕಿದೆ. ಇನ್ನೂ ಧಾರವಾಡ ಕ್ಷೇತ್ರಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇನೆ. ನಾನು ಪಕ್ಷದಲ್ಲಿ ಕಾರ್ಯಕರ್ತರನ್ನು ಬೆಳೆಸಿಲ್ಲ ಎಂಬುದು ಕೂಡ ಸುಳ್ಳು ಸುದ್ದಿ. ನನ್ನ ಕ್ಷೇತ್ರದಲ್ಲಿಯೇ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಅ​ಧಿಕಾರ ಕಲ್ಪಿಸಿಕೊಟ್ಟಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಸ್ತುವಾರಿ ಬದಲಾವಣೆ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಹೊಸ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಜಿಲ್ಲೆಗಳ ಅಭಿವೃದ್ಧಿ ಸಾಧ್ಯ ಎಂಬ ದೃಷ್ಟಿಕೋನವನ್ನು ಮುಖ್ಯಮಂತ್ರಿಗಳು ಹೊಂದಿದ್ದಾರೆ ಎಂದರು.

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮೊದಲನೇ ಕಂತಿನಲ್ಲಿ ಹಣ ಬಿಡುಗಡೆಯಾಗಿತ್ತು. ಆ ಹಣದಲ್ಲಿ ಕಾಮಗಾರಿ ಆರಂಭಿಸಿದ್ದೆವು. ಎರಡನೇ ಹಂತದಲ್ಲಿ .13 ಕೋಟಿ ಒಂದು ವಾರದಲ್ಲಿ ಬಿಡುಗಡೆಯಾಗಲಿದ್ದು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುತ್ತೇವೆ. ಕರ್ನಾಟಕ ಕಾಲೇಜಿನ ಬಳಿ ಫುಡ್‌ಕೋರ್ಟ್‌ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಲೋಕೋಪಯೋಗಿ ಕೆಲಸಗಳಿಗಾಗಿ ಮುಖ್ಯಮಂತ್ರಿಯವರು .52 ಕೋಟಿ ನೀಡಿದ್ದಾರೆ. ರಸ್ತೆ ಹಾಗೂ ಉದ್ಯಾನವನಗಳ ಅಭಿವೃದ್ಧಿಗಾಗಿ .30 ಕೋಟಿ, ಸಮುದಾಯ ಭವನಗಳ ಅಭಿವೃದ್ಧಿಗಾಗಿ .20 ಕೋಟಿ, ವಸತಿನಿಲಯಗಳ ಅಭಿವೃದ್ಧಿಗಾಗಿ .20 ಕೋಟಿ ಅನುದಾನ ಬಿಡುಗಡೆಯಾಗಿರುವುದಾಗಿ ಬೆಲ್ಲದ ಮಾಹಿತಿ ನೀಡಿದರು.

Karnataka Congress ಇಬ್ರಾಹಿಂ ಜೊತೆ ಲಿಂಗಾಯತ ಪ್ರಭಾವಿ ನಾಯಕ ಕಾಂಗ್ರೆಸ್‌ ಬಿಡ್ತಾರಾ?

ಅವಳಿ ನಗರಗಳಲ್ಲಿ ಜಯದೇವ ಹೃದಯ ಆಸ್ಪತ್ರೆ ನಿರ್ಮಾಣ ಮಾಡಲು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಈ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಆಶ್ರಯ ಮನೆಗಳಿಗೆ ನೀರಿನ ಹಾಗೂ ವಿದ್ಯುತ್‌ ಕಾಮಗಾರಿಗಳು ನಡೆದಿರುವುದರಿಂದ ಫಲಾನುಭವಿಗಳಿ ಮನೆಗಳನ್ನು ಹಸ್ತಾಂತರಿಸಿಲ್ಲ. ಕಾಮಗಾರಿಗಳು ಪೂರ್ಣಗೊಂಡ ಬಳಿಕ ಮನೆಗಳನ್ನು ಹಸ್ತಾಂತರಿಸುತ್ತೇವೆ ಎಂದೂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಕಪಟಕರ, ಪಾಲಿಕೆ ಸದಸ್ಯರಾದ ಜ್ಯೋತಿ ಪಾಟೀಲ, ಮಂಜುನಾಥ ಬಟ್ಟೆಣ್ಣವರ, ಶಿವು ಹಿರೇಮಠ, ಮುಖಂಡರಾದ ಮೋಹನ ರಾಮದುರ್ಗ, ರಾಜೇಶ ಕೋಟೆಣ್ಣವರ, ದೇವರಾಜ ಶಹಪುರ ಇದ್ದರು.
 

click me!