ಅಂತಿಮವಾಗಿ ನನ್ನ ದೇಹ ಮಣ್ಣಿಗೆ ಹೋಗುವುದು ಇಲ್ಲೇ: ಎಚ್‌ಡಿಕೆ ಭಾವುಕ ಮಾತು

By Suvarna News  |  First Published Jan 21, 2021, 3:04 PM IST

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ತಮ್ಮ ಕರ್ಮಭೂಮಿ  ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.ಅಲ್ಲದೇ ಭಾವುಕರಾಗಿ ಮತನಾಡಿದ್ದಾರೆ.


ರಾಮನಗರ, (ಜ.21): ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ. ರಾಮನಗರ ಜಿಲ್ಲೆಯನ್ನು ಬಿಟ್ಟು ನಾನು ಹೊರಗೆ ಹೋಗಲ್ಲ ಎಂದು ಮಾಜಿ ಸಿಎಂ ಎಚ್‌. ​ಡಿ ಕುಮಾರಸ್ವಾಮಿ ಭಾವುಕರಾಗಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೆಲವರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ . ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ. ನಾನು ಎಂದಿಗೂ ಚನ್ನಪಟ್ಟಣ ಕ್ಷೇತ್ರ ಬಿಡುವುದಿಲ್ಲ. ಕ್ಷೇತ್ರ ಬಿಡುವುದಿದ್ದರೆ ನಾನು ಚನ್ನಪಟ್ಟಣದಲ್ಲಿ ಏಕೆ ಓಡಾಡುತ್ತಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಯತ್ನ ಪಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

Tap to resize

Latest Videos

ದೇವರಿಗೆ ತಪ್ಪು ಕಾಣಿಕೆ ಸಲ್ಲಿಸಿದ ಕುಮಾರಸ್ವಾಮಿ: ಮಾಜಿ ಸಿಎಂ ಮಾಡಿದ ತಪ್ಪಾದ್ರೂ ಏನು?

ನಾನು ಸಾಯುವುದರೊಳಗೆ ರಾಮನಗರ-ಚನ್ನಪಟ್ಟಣವನ್ನು ಅವಳಿ ನಗರ ಮಾಡುತ್ತೇನೆ. ರಾಮನಗರ-ಚನ್ನಪಟ್ಟಣ ನನ್ನ ಎರಡು ಕಣ್ಣುಗಳಿದಂತೆ. ಕಣ್ಣು‌ ಕಳೆದುಕೊಂಡರೆ ನಾನು ಕುರುಡಾಗುತ್ತೇನೆ ಎಂದರು.

ರಾಮನಗರ, ಚನ್ನಪಟ್ಟಣ ಕ್ಷೇತ್ರಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ಇಲ್ಲದಿದ್ದರೆ ಈ ಎರಡೂ ಕ್ಷೇತ್ರಗಳಲ್ಲಿ ನಿರಂತರ ಪ್ರವಾಸ ಕೈಗೊಳ್ಳುವ ಪ್ರಮೇಯವೇ ಎದುರಾಗುತ್ತಿರಲಿಲ್ಲ. ಇಂತಹ ಪುಕಾರುಗಳಿಗೆ ಕವಡೆ ಕಾಸಿನ ಕಿಮ್ಮತ್ತೂ ಕೊಡಬೇಡಿ ಎಂದು ಕ್ಷೇತ್ರದ ಜನತರಲ್ಲಿ ಮನವಿ ಮಾಡಿಕೊಂಡರು.

click me!