ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಾಂಧವ್ಯ ಮುಂದುವರೆದ ಬೆನ್ನಲ್ಲೇ ಅತ್ತ ಹಾಸನದಲ್ಲಿ ದೋಸ್ತಿ ಪಕ್ಷಗಳ ನಡುವೆ ಕುಸ್ತಿ ಜೋರಾಗಿದೆ. ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಕಾಂಗ್ರೆಸ್ ನಾಯಕ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕೊಡಗು, (ಫೆ.17): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಮುಸುಕಿನ ಕಿತ್ತಾಟ ಜೋರಾಗಿದೆ.
ಅದರಲ್ಲೂ ಹಾಸನ ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿಗಳ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಎಚ್.ಡಿ. ದೇವೇಗೌಡ ಅವರು ತಮ್ಮ ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಸ್ಥಳೀಯ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
undefined
ಟಿಕೆಟ್ ಫೈಟ್ : ಹಾಸನದಲ್ಲಿ ಪ್ರಜ್ವಲ್ ಎದುರು ಬಿಜೆಪಿ ಸ್ಪರ್ಧಿ ಯಾರು..?
ಈ ಬಗ್ಗೆ ಇಂದು (ಭಾನುವಾರ) ಕೊಡಗು ಜಿಲ್ಲೆ ಸೋಮವಾರಪೇಟೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು, 'ದೇವೇಗೌಡರು ಹಾಸನ ಕ್ಷೇತ್ರದಿಂದ ನಿಂತರೆ ಬೆಂಬಲಿಸುತ್ತೇನೆ, ಆದ್ರೆ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣರನ್ನ ಅಭ್ಯರ್ಥಿಯಾಗಿಸಿದರೆ ಸಹಕಾರ ನೀಡೋದಿಲ್ಲ' ಎಂದು ಪುನರುಚ್ಚಾರಿಸಿದರು.
ನಾನು ದೇವೇಗೌಡರ ಕುಟುಂಬದ ರಾಜಕೀಯ ವಿರೋಧಿಯಷ್ಟೇ, ವೈಯಕ್ತಿಕ ವಿರೋಧಿಯಲ್ಲ. ನಾನು ಇಲ್ಲಿವರೆಗೂ ಬಿಜೆಪಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ.
ಆದರೆ ರಾಜಕೀಯ ನಿಂತ ನೀರಲ್ಲ ಅನ್ನೋ ಮೂಲಕ ಒಂದು ವೇಳೆ ಟಿಕೇಟ್ ಪ್ರಜ್ವಲ್ ಗೆ ಟಿಕೇಟ್ ನೀಡಿದ್ರೆ ಬಿಜೆಪಿಗೆ ಹೋಗೋದಾಗಿ ತಮ್ಮ ನಾಯಕರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.