ಯಡಿಯೂರಪ್ಪನವರು ರೇಣುಕಾಚಾರ್ಯ ಜತೆಗೆ ಮಾತನಾಡಿದ್ದಾರೆ. ನಾನೂ ಸಹ ಅವರ ಜೊತೆ ಮಾತನಾಡುತ್ತೇನೆ. ನಮ್ಮ ಪಕ್ಷ ಒಂದು ಪರಿವಾರ ಇದ್ದಂತೆ ಎಂಬುದನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು.
ಧಾರವಾಡ (ಜು.03): ಯಡಿಯೂರಪ್ಪನವರು ರೇಣುಕಾಚಾರ್ಯ ಜತೆಗೆ ಮಾತನಾಡಿದ್ದಾರೆ. ನಾನೂ ಸಹ ಅವರ ಜೊತೆ ಮಾತನಾಡುತ್ತೇನೆ. ನಮ್ಮ ಪಕ್ಷ ಒಂದು ಪರಿವಾರ ಇದ್ದಂತೆ ಎಂಬುದನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು. ಮಾಜಿ ಶಾಸಕ ರೇಣುಕಾಚಾರ್ಯಗೆ ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಪಕ್ಷದ ರಾಜ್ಯಾಧ್ಯಕ್ಷರ ಅಧ್ಯಕ್ಷತೆ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸ್ವಲ್ಪ ಆಕ್ರೋಶದಲ್ಲಿ ಕೆಲವರು ಮಾತನಾಡಿದ್ದರು. ಆದರೆ, ಪಕ್ಷದ ಮೇಲೆ ಯಾರಿಗೂ ಬೇಸರವಿಲ್ಲ. ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ಅವರೆಲ್ಲರಿಗೆ ಸೂಚಿಸಲಾಗಿದೆ ಎಂದರು.
ರಾಜ್ಯ ಸರ್ಕಾರ ಹತ್ತು ಕೆಜಿ ಅಕ್ಕಿ ಹಣ ನೀಡಲಿ: ರಾಜ್ಯ ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಅಥವಾ ಹಣ ನೀಡಬೇಕು. ಇಲ್ಲವೇ ಜನರ ಕ್ಷಮೆ ಕೇಳಬೇಕು. ಜತೆಗೆ ಕೇಂದ್ರ 5 ಕೆಜಿ ಅಕ್ಕಿ ಕೊಡುತ್ತಿದೆ ಎಂಬ ಸತ್ಯವನ್ನು ಹೇಳಿ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳೆಲ್ಲವೂ ಬೋಗಸ್. ಈ ಯೋಜನೆಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
undefined
ಸೈಬರ್ ಕ್ರೈಂ ಹಾಗೂ ಫೇಕ್ ನ್ಯೂಸ್ ತಡೆಗಟ್ಟಲು ರೂಪುರೇಷೆಗೆ ಸಿದ್ಧತೆ: ಸಚಿವ ಪರಮೇಶ್ವರ್
ಮಾಜಿ ಶಾಸಕ ರೇಣುಕಾಚಾರ್ಯ ನೊಟೀಸ್ ವಿಚಾರವಾಗಿ ಪ್ರತಿಕ್ರಿಯಿಸಿ, ಪಕ್ಷದ ರಾಜ್ಯಾಧ್ಯಕ್ಷರ ಅಧ್ಯಕ್ಷತೆ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿ.ಎಸ್. ಯಡಿಯೂರಪ್ಪ ಅವರು ರೇಣುಕಾಚಾರ್ಯ ಜತೆಗೆ ಮಾತನಾಡಿದ್ದಾರೆ. ನಾನು ಸಹ ಮಾತನಾಡುವೆ. ನಮ್ಮದು ಒಂದು ಪರಿವಾರ ಇದ್ದಂತೆ ಎಂಬುದನ್ನು ಮನವರಿಕೆ ಮಾಡಿಕೊಡುವೆ. ಸ್ವಲ್ಪ ಆಕ್ರೋಶದಲ್ಲಿ ಕೆಲವರು ಮಾತನಾಡಿದ್ದರು. ಪಕ್ಷದ ಮೇಲೆ ಯಾರಿಗೂ ಬೇಸರವಿಲ್ಲ. ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದರು.
ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಕಲ್ಲೆಸೆದಿದ್ದು ವಿಕೃತ ಮನೋಭಾವ ಬಿಂಬಿಸುತ್ತದೆ. ದೇಶದ ಅನೇಕ ಭಾಗದಲ್ಲಿ ಈ ರೀತಿ ಆಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ವಂದೇ ಭಾರತ ರೈಲು ದೇಶದ ಆಸ್ತಿ. ದೇಶದಲ್ಲಿ ಆಧುನಿಕ ಸೌಲಭ್ಯ ಬೆಳೆಯಲು ಈ ರೈಲು ಆಗಿದೆ. ರೈಲುಗಳು ಭಾರತದಲ್ಲಿ ತಯಾರಾಗಬೇಕು ಎಂಬುದು ಪ್ರಧಾನಿ ಮೋದಿ ಕಾಳಜಿಯಾಗಿದೆ. ಕಿಡಿಗೇಡಿಗಳು ರಸ್ತೆ ಪಕ್ಕಕ್ಕೆ ನಿಂತು ಕಲ್ಲು ಎಸೆಯುತ್ತಿದ್ದಾರೆ. ಹೀಗಾಗಿ ರೈಲಿನ ಒಳಗೆ ಇದ್ದವರಿಗೆ ಅವರು ಯಾರೆಂದು ತಿಳಿಯುವುದಿಲ್ಲ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಬಲಪಡಿಸಬೇಕು ಎಂದರು.
ಕೇಂದ್ರ ಅಕ್ಕಿ ಕೊಡದಿದ್ದಕ್ಕೆ ವಿಧಿ ಇಲ್ಲದೇ ಹಣ ಕೊಡ್ತಿದೀವಿ: ಬಿಜೆಪಿಗರಿಗೆ ಸಚಿವ ವೆಂಕಟೇಶ್ ಟಾಂಗ್
ಉಗ್ರರ ಬಗ್ಗೆ ಡಿಕೆಶಿ ಈಗ ಏನು ಹೇಳ್ತಾರೆ?: ಶಿವಮೊಗ್ಗ, ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಚಾಜ್‌ರ್‍ಶೀಟ್ ಸಲ್ಲಿಸಿದ್ದು, ಅದರಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಧಾರವಾಡದಲ್ಲಿ ಶನಿವಾರ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಈಗ ಉತ್ತರ ಕೊಡಬೇಕು. ಅದೊಂದು ಸಣ್ಣ ವಿಷಯ. ಅದನ್ನು ಡೈವರ್ಚ್ ಮಾಡುತ್ತಿದ್ದಾರೆ ಎಂದು ಅಂದು ಡಿ.ಕೆ.ಶಿವಕುಮಾರ್ ಹೇಳಿದ್ದರು ಎಂದರು. ಭಯೋತ್ಪಾದಕರು ಹಾಗೂ ಭಯೋತ್ಪಾದಕ ಕೃತ್ಯಗಳಿಗೆ ಕಾಂಗ್ರೆಸ್ ಯಾವಾಗಲೂ ಅನುಕಂಪ ತೋರುತ್ತಲೇ ಬಂದಿದೆ. ಈಗ ಚಾಜ್‌ರ್‍ಶೀಟ್ ಸಲ್ಲಿಕೆಯಾಗಿದೆ. ಅಂದು ಡಿ.ಕೆ.ಶಿವಕುಮಾರ್ ಹೇಳಿದ ಹೇಳಿಕೆಯನ್ನು ಮಾಧ್ಯಮಗಳು ತೋರಿಸಬೇಕು. ಅದಕ್ಕೆ ಡಿ.ಕೆ.ಶಿವಕುಮಾರ್ ಮತ್ತೇನು ಹೇಳುತ್ತಾರೆ ನೋಡಿ ಎಂದರು.