ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ, ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲೂ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು (ಸೆ.10): ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ, ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲೂ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎರಡು ಬಾರಿ ಸಂಸದನಾಗಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದೇನೆ. ನನ್ನ ಅಭಿವೃದ್ದಿ ಕಾರ್ಯಗಳನ್ನು ನೋಡಿರುವ ಮೈಸೂರು, ಕೊಡಗಿನ ಜನರು ಮತ ನೀಡುತ್ತಾರೆ. ಜನರು ಹಾಗೂ ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲೂ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿದರು.
ಚುನಾವಣೆ ರಾಜಕೀಯ ಮಾಡಬೇಡಿ: ಬಿಜೆಪಿ- ಜೆಡಿಎಸ್ ಮೈತ್ರಿಯ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರೆ ಸುಮ್ಮನಿರಿ. ಪದೇ ಪದೇ ಯಾಕೆ ಅದೇ ವಿಚಾರ ಮಾತನಾಡುತ್ತೀರಿ. ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಬಸ್ಸಿನಲ್ಲಿ ಸ್ಟಿಕ್ಕರ್ ಅಂಟಿಸಿಕೊಂಡು ಇರಬೇಡಿ. ಯಾವಾಗಲೂ ಚುನಾವಣೆ ರಾಜಕೀಯ ಮಾಡಿಕೊಂಡು ಇರಬೇಡಿ ಎಂದು ತಿರುಗೇಟು ನೀಡಿದರು.
undefined
ಮಾಂಗಲ್ಯಧಾರಣೆಯಾದ ನಂತರ ವಧುವನ್ನು ಪರೀಕ್ಷೆ ಕೇಂದ್ರಕ್ಕೆ ಕರೆತಂದ ವರ: ಮದುವೆ ವಸ್ತ್ರದಲ್ಲೇ ಪರೀಕ್ಷೆ!
ಹೈಕಮಾಂಡ್ ತೀರ್ಮಾನವೇ ಅಂತಿಮ: ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಯಡಿಯೂರಪ್ಪನವರು ನಮ್ಮ ಪ್ರಶ್ನಾತೀತ ನಾಯಕರು. ಅವರು ಏಕಾಂಗಿಯಾಗಿ ರಾಜ್ಯ ಪ್ರವಾಸ ಮಾಡಿ ಪಕ್ಷ ಕಟ್ಟಿದವರು. ಅವರು ಏನೇ ತೀರ್ಮಾನ ಮಾಡಿದ್ದರೂ ಪಕ್ಷದ ಒಳತಿಗಾಗಿ ಮಾಡಿರುತ್ತಾರೆ ಎಂದು ಅವರು ತಿಳಿಸಿದರು. ರಾಜ್ಯದ ಜನ ಕಳೆದ 40 ವರ್ಷಗಳಿಂದಲೂ ಪ್ರತಿ 5 ವರ್ಷಕ್ಕೊಮ್ಮೆ ರಾಜ್ಯ ಸರ್ಕಾರವನ್ನು ಬದಲಿಸುತ್ತಾ ಬಂದಿದ್ದಾರೆ. ಆದರೆ, 2004ರ ಲೋಕಸಭಾ ಚುನಾವಣೆಯಿಂದ 2019ರವರೆಗೂ ನಿರಂತರವಾಗಿ ಬಿಜೆಪಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು- ನಂಜನಗೂಡು ರಸ್ತೆ ವಿಸ್ತರಣೆ ಕಾಮಗಾರಿ ಪರಿಶೀಲನೆ: ಮೈಸೂರು- ನಂಜನಗೂಡು ಹೆದ್ದಾರಿ ವಿಭಾಗದ ಎನ್ಎಚ್- 766 ಯೋಜನೆಗೆ ಸಂಬಂಧಿಸಿದ ಅಭಿವೃದ್ದಿ ಕಾರ್ಯವನ್ನು ಸಂಸದ ಪ್ರತಾಪ್ ಸಿಂಹ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಜೆಎಸ್ಎಸ್ ಕಾಲೇಜು ಬಳಿ ಶನಿವಾರ ಸ್ಥಳ ಪರಿಶೀಲಿಸಿದರು. ಈ ಬಾರಿಯ ದಸರಾ ವೇಳೆಗೆ ಈ ರಸ್ತೆ ವಿಸ್ತರಣೆ ಕಾಮಗಾರಿ ಮುಗಿಸಲು ಆಗುವುದಿಲ್ಲ. ಮುಂದಿನ ವರ್ಷದ ದಸರಾ ವೇಳೆಗಾದರೂ ರಸ್ತೆ ವಿಸ್ತರಣೆ ಕಾಮಗಾರಿ ಮುಗಿಸುವುದಾಗಿ ಸಂಸದರು ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ಬರಪೀಡಿತ ಜಿಲ್ಲೆಯೆಂದು ಘೋಷಿಸಲಿ: ಸಂಸದ ಬಚ್ಚೇಗೌಡ
ವೇಗ ಹೆಚ್ಚಳಕ್ಕೆ ಚಿಂತನೆ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸ್ಪೀಡ್ ಲಿಮಿಟ್ ಹೆಚ್ಚಳಕ್ಕೆ ಹೆದ್ದಾರಿ ಪ್ರಾಧಿಕಾರ ಚಿಂತನೆ ಕುರಿತು ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ ಅವರು, 120 ಕಿ.ಮೀ ವೇಗದಲ್ಲಿ ಚಲಿಸಬಹುದಾದ ಹೈವೇ ಮಾಡಿದ್ದೇವೆ. ಮೊದಲು ಜನರನ್ನು ಶಿಸ್ತುಬದ್ಧಗೊಳಿಸೋಣ. ಈಗ ಟ್ರಕ್ ಲೈನ್ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣಪುಟ್ಟ ಕಾರುಗಳನ್ನು ಇಟ್ಟುಕೊಂಡು 120 ಕಿ.ಮೀ. ವೇಗದಲ್ಲಿ ಹೋದರೆ ಅಪಘಾತ ಆಗುತ್ತದೆ. ಲೈನ್ ಡಿಸಿಪ್ಲೀನ್ ಬರಲಿ, ಅಪಘಾತಗಳ ಸಂಖ್ಯೆ ಕಡಿಮೆಯಾಗಲಿ. ಅದೆಲ್ಲವನ್ನೂ ನೋಡಿಕೊಂಡು ವೇಗದ ಮಿತಿ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ತಿಳಿಸಿದರು.