
ಬೆಂಗಳೂರು : ‘ಈಗ ನಡೆದಿರುವ ವಿದ್ಯಮಾನಗಳ ಬಗ್ಗೆ ಹೇಳಲು ನನ್ನ ಹತ್ತಿರ ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನೀವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಧಿಕಾರ ಹಂಚಿಕೆ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭಾನುವಾರವೂ ಹಲವು ಸಚಿವರು, ನಾಯಕರು ಭೇಟಿ ನೀಡಿ ಚರ್ಚಿಸಿದರು. ಖರ್ಗೆ ಅವರು ಬೆಂಗಳೂರು ನಿವಾಸದಲ್ಲೇ ಇದ್ದರೂ ಡಿ.ಕೆ. ಶಿವಕುಮಾರ್ ಅವರು ಖರ್ಗೆ ಅವರನ್ನು ಭೇಟಿ ಮಾಡಿರಲಿಲ್ಲ.
ಇದರ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ವಿಷಯವೂ ಇಲ್ಲದೆ ನಾನು ಏನಾದರೂ ಹೇಳಿದರೆ ಸರಿ ಇರುವುದಿಲ್ಲ. ನನ್ನ ಹತ್ತಿರ ಹೇಳಲು ಏನೂ ಇಲ್ಲ. ನೀವು ಇಲ್ಲಿ ನಿಂತು ಪದೇ ಪದೇ ಕೇಳಿದರೆ ನನಗೂ ಬೇಜಾರಾಗುತ್ತದೆ’ ಎಂದರು.
‘ನನ್ನ ವಿಶೇಷ ವಿನಂತಿ ಏನೆಂದರೆ, ನನ್ನ ಹತ್ತಿರ ಹೇಳಲು ಏನೂ ಇಲ್ಲ. ಈಗ ನಡೆದಿರುವ ವಿದ್ಯಮಾನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ದಯವಿಟ್ಟು ಈ ಬಗ್ಗೆ ನನ್ನ ಬಳಿ ಕೇಳಬೇಡಿ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನೀವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’ ಎಂದು ಸ್ಪಷ್ಟಪಡಿಸಿದರು.
ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಅಥವಾ ಮಂಗಳವಾರ ದೆಹಲಿಗೆ ವಾಪಸಾಗುವ ಸಾಧ್ಯತೆಯಿದೆ.
ದೆಹಲಿಗೆ ವಾಪಸಾಗಿ ನ.26 ರ ನಂತರ ರಾಹುಲ್‌ಗಾಂಧಿ ಅವರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ. ಬಳಿಕ ರಾಜ್ಯ ರಾಜಕೀಯದ ಬಗ್ಗೆ ಸ್ಪಷ್ಟತೆ ಸಿಗಲಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.