
ಬೀಳಗಿ(ಮೇ.06): ಬಜರಂಗ ದಳ ನಿಷೇಧಿಸಿದರೆ ಕಾಂಗ್ರೆಸ್ ಪಕ್ಷ ದೇಶದಲ್ಲೇ ಸರ್ವ ನಾಶವಾಗಲಿದೆ. ಬಜರಂಗದಳವನ್ನು ನಿಷೇಧಿಸುವ ಕನಕಪುರದ ಬಂಡೆ ಜೈಲಿಗೆ ಹೋಗಲು ರೆಡಿಯಾಗಿರಬೇಕು ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕುಂದರಗಿಯಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಮುರುಗೇಶ ನಿರಾಣಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧ ಮಾಡುವ ಕಾಂಗ್ರೆಸ್ ಪಕ್ಷವೇ ನಿಷೇಧಕ್ಕೆ ಒಳಗಾಗುವ ಸಮಯ ಬಂದಿದೆ ಎಂದು ಹೇಳಿದರು.
ಬೆಂಗಳೂರು ರೋಡ್ ಶೋ ಬಳಿಕ ಚಾಲುಕ್ಯರ ನಾಡಿಗೆ ನಮೋ ಎಂಟ್ರಿ: ಬಾಗಲಕೋಟೆಯಲ್ಲಿ ಮೋದಿ ಮೇನಿಯಾ
ಜನರ ಮನಪರಿವರ್ತನೆ:
ರಾಜ್ಯದ ಜನರ ಮನಸು ಪರಿವರ್ತನೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಬಿಜೆಪಿಗೆ ಬಹುಮತ ನೀಡಲು ಮುಂದಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಹಳ್ಳಿ ಹಳ್ಳಿ ಸುತ್ತಿ ಪಕ್ಷಕ್ಕೆ ಶಕ್ತಿ ತುಂಬುವ ಜತೆಗೆ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ರಾವಣ ಸಂತತಿ: ಕಟೀಲ್ ವಿವಾದ!
ರಾವಣ ಸಂತತಿಯ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರದಲ್ಲಿ ರಾಜ್ಯದ ಅನೇಕ ರೈತರು ಆತ್ಮಹತ್ಯೆ ಮಾಡಿಕೊಂಡರು. ಹಿಂದೂ ಯುವಕರ ಮೇಲೆ ದೌರ್ಜನ್ಯ ನಡೆಸಿ ಹತ್ಯೆಗೈಯ್ಯಲಾಗಿದೆ ಎಂದು ಕಟೀಲ್ ಮಾಜಿ ಸಿಎಂಗೆ ಕುಟುಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.