ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಅಲುಗಾಡಿಸಿದರೆ ಬಿಜೆಪಿ ವಿರುದ್ಧ ರಕ್ತಕ್ರಾಂತಿ ಮಾಡಲಾಗುವುದು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದಾರೆ.
ಹಾಸನ (ಜು.31): ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಗುಮಾನಿ ಹರಡಿದೆ. ಈ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ವರದಿಗಳು ಬರುತ್ತಿದೆ. ಒಂದು ವೇಳೆ ಬಿಜೆಪಿಯವರು ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಒಂದು ಇಂಚು ಅಲುಗಾಡಿಸಿದರೂ ರಕ್ತಕ್ರಾಂತಿ ನಡೆಯುತ್ತದೆ ಎಂದು ಗೃಹಮಂಡಳಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಸುದ್ದಿ ಮಾಧ್ಯಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಗುಮಾನಿ ಸುದ್ದಿಗಳು ಬಿತ್ತರಗೊಳ್ಳುತ್ತಿವೆ. ಒಂದು ವೇಳೆ ಟಿವಿ ಮಾಧ್ಯಮಗಳಲ್ಲಿ ಬಂದಿದ್ದು ಬಹುಶಃ ನಿಜ ಆಗಬಹುದು. ಒಂದು ವೇಳೆ ಹೀಗಾದಲ್ಲಿ ಬಿಜೆಪಿ ನಾಯಕರನ್ನು ಸುಮ್ಮನೆ ಬಿಡುವುದಿಲ್ಲ. ಈಗಲೇ ನಾನು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆ: 48 ಜನರ ಸಾವು, 46 ಸಾವಿರ ಹೆಕ್ಟೇರ್ ಬೆಳೆ ನಷ್ಟವಾಗಿದೆ!
ಕರ್ನಾಟಕ ರಾಜ್ಯದಲ್ಲಿ ಒಂದು ಇಂಚು ಸಿದ್ದರಾಮಯ್ಯ ಹಾಗೂ ಸರ್ಕಾರವನ್ನು ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ ನೀವು ಎಚ್ಚರಿಕೆಯಿಂದ ಇರಿ. ನಿಮಗೆ ಏನಾದರೂ ಆ ಆಲೋಚನೆ ಇದ್ದರೆ ವಾಪಾಸ್ ತೆಗೆದುಕೊಳ್ಳಿ, ಇಲ್ಲವಾದರೆ ರಕ್ತಕ್ರಾಂತಿ ಆಗುತ್ತದೆ. ಬಿಜೆಪಿ ಸರ್ಕಾರ ಎರಡು ಬಾರಿಯೂ ನೇರವಾಗಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದಲೇ ಅಧಿಕಾರಕ್ಕೆ ಬಂದಿದೆ. ಈ ಬಾರಿ ಪುನಃ ಇದೇ ಆಟವನ್ನು ಆಡಲು ಬಿಜೆಪಿಯವರು ಹೊರಟಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಇವತ್ತು ಸತ್ಯಶೋಧನೆ ಸಮಿತಿ ಸಭೆ ನಡೆಸಿದ್ದೇವೆ. ಇಂತಹ ಕೃತ್ಯವನ್ನು ತಡೆಯುವಂತೆ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದೇವೆ ಎಂದು ತಿಳಿಸಿದರು.
ಪುನೀತ್ ಕೆರೆಹಳ್ಳಿ ಬೆತ್ತಲೆಗೊಳಿಸಿ ಹಲ್ಲೆ ಆರೋಪ; ಎಸಿಪಿ ಚಂದನ್ ಭೇಟಿಗೆ ಬಂದ ಮಾಜಿ ಸಂಸದ ಪ್ರತಾಪ್ ಸಿಂಹ
ಒಂದು ವೇಳೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಿದ ಘಟನೆ ನಡೆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ. ಇದಕ್ಕೆ ನಾವು ತಯಾರಾಗಿದ್ದೇವೆ, ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಿ. ಈ ರಾಜ್ಯದಲ್ಲಿ ಯುದ್ದನೇ ಮಾಡಬೇಕಾಗುತ್ತದೆ. 136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ದನೇ ಆಗುತ್ತದೆ. ಬಿಜೆಪಿಗೆಯವರಿಗೆ ಇದು ಎಚ್ಚರಿಕೆಯಾಗಿದೆ. ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ ಈ ಬಾರಿ ನಿಮ್ಮ ಆಟ ನಡೆಯಲ್ಲ. ಹಾಗೇನಾದರೂ ನೀವು ಅನಿವಾರ್ಯವಾಗಿ ಪ್ರಾಸಿಕ್ಯೂಷನ್‌ಗೆ ನೋಟೀಸ್ ಕೊಟ್ಟರೆ ಉಗ್ರಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.