ಯಡಿಯೂರಪ್ಪ ತಮ್ಮ ಮಾತಿನಂತೆ ರಾಜಕೀಯ ನಿವೃತ್ತಿ ಪಡೆಯಲಿ: ಪರಂ

Published : Feb 10, 2019, 12:08 PM IST
ಯಡಿಯೂರಪ್ಪ ತಮ್ಮ ಮಾತಿನಂತೆ ರಾಜಕೀಯ ನಿವೃತ್ತಿ ಪಡೆಯಲಿ: ಪರಂ

ಸಾರಾಂಶ

ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಆಡಿಯೋ ವಿಚಾರ ಭಾರೀ ಸೌಂಡ್ ಮಾಡುತ್ತಿದೆ. ಈಗಾಗಲೇ ಬಿಎಸ್‌ವೈ ತಾನು ಶರಣುಗೌಡ ಜೊತೆ ಮಾತನಾಡಿದ್ದು ನಿಜ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಯಡಿಯೂರಪ್ಪ ತಮ್ಮ ಮಾತಿನಂತೆ ರಾಜಕೀಯ ನಿವೃತ್ತಿ ಪಡೆಯಲಿ ಎಂದಿದ್ದಾರೆ.

ತುಮಕೂರು[ಫೆ.10]: ಕರ್ನಾಟಕ ರಾಜಕೀಯ ವಲಯದಲ್ಲಿ ಆಪರೇಷನ್ ಕಮಲದ ಆಡಿಯೋ ವಾರ್ ಜೋತರಾಗಿದೆ. ಈಗಾಗಲೇ ಬಿ. ಎಸ್ ಯಡಿಯೂರಪ್ಪ ತಾನು ಶರಣುಗೌಡ ಜೊತೆ ಮಾತನಾಡಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್ ಆಡಿಯೋದಲ್ಲಿರುವುದು ತನ್ನದೇ ಧ್ವನಿ ಎಂದು ಯಡಿಯೂರಪ್ಪ ಒಪ್ಪಿಕೊಂಡರೆ ತಮ್ಮ ಮಾತಿನಂತೆ ರಾಜಕೀಯ ನಿವೃತ್ತಿ ಘೋಷಿಸಲಿ ಎಂದಿದ್ದಾರೆ. 

ಸಿಎಂ ಶಪಥದ ಬೆನ್ನಲ್ಲೇ ಶರಣಗೌಡ ಜೊತೆ ಮಾತನಾಡಿದ್ದು ನಿಜ ಎಂದ್ರು ಬಿಎಸ್ ವೈ ಆದರೆ...

ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ 'ಯಡಿಯೂರಪ್ಪ ಒಪ್ಪಿಕೊಂಡರೆ ಸ್ಪೀಕರ್ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡುತ್ತೇನೆ. ಆಡಿಯೋ ತನ್ನದು ಎಂದು ಸಾಬೀತಾದರೆ ರಾಜಕೀಯವಾಗಿ ನಿವೃತ್ತಿ ಹೊಂದುತ್ತೇನೆ ಎಂದು ಹೇಳಿದ್ದರು. ಈಗ ಅವರು ರಾಜಕೀಯ ನಿವೃತ್ತಿಯಾಗಲಿ. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸದನದಲ್ಲಿ ಒತ್ತಾಯಿಸುತ್ತೇವೆ. ಅವರ ಶಾಸಕತ್ವವನ್ನು ವಜಾಗೊಳಿಸಬೇಕು' ಎಂದಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿ ಕಾರಿದ ಪರಮೇಶ್ವರ್ ' ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿಲ್ಲ ಅನ್ನೋದಕ್ಕೆ ಇದೆ ಉದಾಹರಣೆ. ಅವರು ಒಪ್ಪಿಕೊಂಡರೆ ಅದಕ್ಕಿಂತ ಕೀಳು ಮಟ್ಟದ ರಾಜಕಾರಣ ಇನ್ನೊಂದಿಲ್ಲ' ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!