ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ. ಒಂದು ವೇಳೆ ಬದಲಾವಣೆ ಅನಿವಾರ್ಯವಾದರೆ ಡಿ.ಕೆ.ಶಿವಕುಮಾರ್‌ಗೆ ನಮ್ಮ ಬೆಂಬಲವಿದೆ ಎಂದು ಶಾಸಕ ಕೆ.ಎಂ.ಉದಯ್ ಗುರುವಾರ ಹೇಳಿದರು.
ಮದ್ದೂರು (ನ.03): ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ. ಒಂದು ವೇಳೆ ಬದಲಾವಣೆ ಅನಿವಾರ್ಯವಾದರೆ ಡಿ.ಕೆ.ಶಿವಕುಮಾರ್‌ಗೆ ನಮ್ಮ ಬೆಂಬಲವಿದೆ ಎಂದು ಶಾಸಕ ಕೆ.ಎಂ.ಉದಯ್ ಗುರುವಾರ ಹೇಳಿದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಬಣ ರಾಜಕೀಯದ ಬಗ್ಗೆ ಪಕ್ಷದ ವರಿಷ್ಠರು ಶಾಸಕರ ಹೇಳಿಕೆಗೆ ಬ್ರೇಕ್ ಹಾಕಿರುವ ಬಗ್ಗೆ ಅವರು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಬಹಳ ವರ್ಷಗಳಿಂದ ಪಕ್ಷ ಸಂಘಟನೆಗೆ ದುಡಿದಿದ್ದಾರೆ. ಹೀಗಾಗಿ ಅವರು ಮುಖ್ಯಮಂತ್ರಿಯಾಗಬೇಕು ಎನ್ನುವುದು ನನ್ನ ಬಯಕೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
undefined
ಬರ್ತಾ ಬರ್ತಾ ಬಿಗ್‌ಬಾಸ್‌ನಲ್ಲಿ ಅವಾಚ್ಯ ಶಬ್ದಗಳ ಬಳಕೆ ಹೆಚ್ಚುತ್ತಿದೆ: ಮಾಜಿ ಸ್ಪರ್ಧಿ ಕಾವ್ಯಾ ಶಾಸ್ತ್ರಿ!
ಪಟ್ಟಣ ಅಭಿವೃದ್ಧಿಯಲ್ಲಿ ಹಿನ್ನಡೆ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಂತರ ಅಧಿಕಾರಕ್ಕೆ ಬಂದವರು ಪಟ್ಟಣದ ಅಭಿವೃದ್ಧಿಯನ್ನು ಕಡೆಗಣಿಸಿರುವುದರಿಂದ ಸಮಸ್ಯೆಗಳು ಬೃಹದಾಕಾರವಾಗಿ ಬೆಳೆಯಲು ಕಾರಣವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಆರೋಪಿಸಿದರು. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಪಟ್ಟಣಕ್ಕೆ ಕಾವೇರಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ಹಲವು ಸರ್ಕಾರಿ ಕಚೇರಿಗಳ ನಿರ್ಮಾಣ ಹಾಗೂ ನೀರಾವರಿ ಯೋಜನೆಗಳಿಗೆ ಅಗತ್ಯ ಕ್ರಮ ವಹಿಸಿದ್ದರು. ಆ ನಂತರ ಕ್ಷೇತ್ರದಲ್ಲಿ ಆಧಿಕಾರಕ್ಕೆ ಬಂದವರು ಅಭಿವೃದ್ಧಿಗೆ ನಿರ್ಲಕ್ಷ್ಯ ತೋರಿದ್ದರಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಮಾಜಿ ಶಾಸಕರಾದ ಡಿ.ಸಿ.ತಮ್ಮಣ್ಣ ಮತ್ತು ಕಲ್ಪನಾ ಸಿದ್ದರಾಜು ಅವರುಗಳನ್ನು ಪರೋಕ್ಷವಾಗಿ ಟೀಕಿಸಿದರು.
ಸಚಿವರಾದ ಮೇಲೆ ಮೊದಲ ಬಾರಿಗೆ ಹುಬ್ಬಳ್ಳಿಗೆ ಮುನಿಯಪ್ಪ ಭೇಟಿ: ನುಡಿದಂತೆ ನಡೆದಿದ್ದೇವೆಂದು ಹೇಳಿದ್ಯಾಕೆ?
ಅಭಿವೃದ್ಧಿಯಲ್ಲಿ ಪಟ್ಟಣ 20 ವರ್ಷಗಳ ಹಿಂದೆ ಬಿದ್ದಿದೆ. ಶಾಸಕರಾದವರು ಹಂತ ಹಂತವಾಗಿ ಅಭಿವೃದ್ಧಿ ಪಡಿಸಿದ್ದರೆ ಇಂತಹ ಸಮಸ್ಯೆಗಳು ಎದುರಾಗುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅಗತ್ಯ ಅನುದಾನ ತಂದು ಅಭಿವೃದ್ಧಿಗೆ ಒತ್ತು ನೀಡುವ ಭರವಸೆ ನೀಡಿದರು. ಕೆಪಿಸಿಸಿ ಸದಸ್ಯ ಕದಲೂರು ರಾಮಕೃಷ್ಣ, ಪುರಸಭೆ ಸದಸ್ಯರಾದ ಸಚಿನ್, ಸಿದ್ದರಾಜು, ಮನೋಜ್, ಕೋಕಿಲಾ ಅರುಣಾ, ಪ್ರಿಯಾಂಕ, ಪ್ರಮೀಳಾ, ಮಾಜಿ ಆಧ್ಯಕ್ಷರಾದ ಎಂ.ಸಿ.ಬಸವರಾಜು, ಇಮ್ತಿಯಾಜ್ ಉಲ್ಲಾಖಾನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹೊಂಬಯ್ಯ, ಮುಖಂಡರಾದ ಸಿದ್ದರಾಜು, ಅವಿನಾಶ್ ಇದ್ದರು.