ಕಾಂಗ್ರೆಸ್‌ ಗೆದ್ದರೆ ಶೇ.33 ಮಹಿಳಾ ಮೀಸಲಿಗೆ ಒತ್ತಾಯ: ಸಿದ್ದರಾಮಯ್ಯ

Published : Jan 17, 2023, 02:40 AM IST
ಕಾಂಗ್ರೆಸ್‌ ಗೆದ್ದರೆ ಶೇ.33 ಮಹಿಳಾ ಮೀಸಲಿಗೆ ಒತ್ತಾಯ: ಸಿದ್ದರಾಮಯ್ಯ

ಸಾರಾಂಶ

‘ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಿದ್ದು ಕಾಂಗ್ರೆಸ್‌ ಪಕ್ಷ. ಅದೇ ರೀತಿ ಮಹಿಳೆಯರಿಗೆ ವಿಧಾನಸಭೆ ಮತ್ತು ಲೋಕಸಭೆಯಲ್ಲೂ ಶೇ.33ರಷ್ಟು ಮೀಸಲಾತಿ ಸಿಗಬೇಕು. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಜ.17): ‘ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಿದ್ದು ಕಾಂಗ್ರೆಸ್‌ ಪಕ್ಷ. ಅದೇ ರೀತಿ ಮಹಿಳೆಯರಿಗೆ ವಿಧಾನಸಭೆ ಮತ್ತು ಲೋಕಸಭೆಯಲ್ಲೂ ಶೇ.33ರಷ್ಟು ಮೀಸಲಾತಿ ಸಿಗಬೇಕು. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ‘ನಾ ನಾಯಕಿ’ ಮಹಿಳಾ ಕಾಂಗ್ರೆಸ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನ ತಿದ್ದುಪಡಿ ಮಾಡಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಿದ್ದರು. ಮಹಿಳೆಯರಿಗೆ ವಿಧಾನಸಭೆ ಮತ್ತು ಲೋಕಸಭೆಯಲ್ಲೂ 33% ಮೀಸಲಾತಿ ನೀಡಬೇಕು ಎಂಬ ಮಸೂದೆಯನ್ನು 1995ರಲ್ಲಿ ಲೋಕಸಭೆ ಮುಂದೆ ತರಲಾಗಿದೆ. ಈ ಮಸೂದೆ ಇನ್ನೂ ಹಾಗೆ ಇದೆ. ಒಂದು ವೇಳೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ನೀಡುವ ಈ ಬಿಲ್‌ ಅನ್ನು ಪಾಸ್‌ ಮಾಡಿ ಜಾರಿ ಮಾಡುವ ಕೆಲಸ ಮಾಡಬೇಕು. ಇದು ನನ್ನ ಒತ್ತಾಯ ಎಂದು ಹೇಳಿದರು.

ಸಿದ್ದರಾಮಯ್ಯ ಬಲವಂತಕ್ಕೆ ಕೋಲಾರದಿಂದ ಸ್ಪರ್ಧಿಸಲು ಬರುತ್ತಿದ್ದಾರೆ: ಸಿ.ಎಂ.ಇಬ್ರಾಹಿಂ

ಬಿಜೆಪಿ ಶೇ.10ರಷ್ಟು ಭರವಸೆ ಈಡೇರಿಸಿಲ್ಲ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಆಗಿದೆ. ಈವರೆಗೆ ಮಹಿಳೆಯರಿಗಾಗಿ ಒಂದೇ ಒಂದು ಕಾರ್ಯಕ್ರಮ ರೂಪಿಸಿಲ್ಲ. 2018ರಲ್ಲಿ ನೀಡಿದ್ದ ಭರವಸೆಗಳ ಪೈಕಿ ಶೇ.10ರಷ್ಟನ್ನೂ ಈಡೇರಿಸಿಲ್ಲ. ಇತ್ತೀಚೆಗೆ ನಮ್ಮ ಸರ್ಕಾರ ಉಚಿತವಾಗಿ 200 ಯುನಿಟ್‌ ವಿದ್ಯುತ್‌ ಘೋಷಿಸಿದ್ದರಿಂದ ನಿದ್ದೆಯಿಂದ ಎದ್ದಿರುವ ರಾಜ್ಯ ಬಿಜೆಪಿಯು ಮಹಿಳೆಯರಿಗೆ ಪುಂಖಾನುಪುಂಕವಾಗಿ ಭರವಸೆ ನೀಡಲು ಆರಂಭಿಸಿದೆ. ನಾ ನಾಯಕಿ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಅವರು ಬರುತ್ತಿದ್ದಾರೆಂದು ತಿಳಿದ ಬಳಿಕ ದೊಡ್ಡ ದೊಡ್ಡ ಜಾಹಿರಾತು ನೀಡಿದೆ. ಆದರೆ, ಇದನ್ನು ಜನರು ನಂಬುವುದಿಲ್ಲ. ಬಿಜೆಪಿಯಂತಹ ವಚನ ಭ್ರಷ್ಟ ಸರ್ಕಾರ ಯಾವುದೂ ಇಲ್ಲ ಎಂಬುದು ಜನರಿಗೆ ಅರಿವಾಗಿದೆ ಎಂದು ಟೀಕಿಸಿದರು.

ಸವದತ್ತಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೇಳಿಲ್ಲ: ಸತೀಶ್ ಜಾರಕಿಹೊಳಿ

ಬಿಜೆಪಿ ಸಂವಿಧಾನ ಜಾರಿಯಾಗುವ ಮೊದಲಿನಿಂದಲೂ ಮಹಿಳೆಯರ ಪರವಾಗಿ ಇಲ್ಲ. ಇವರೇ ಮನುಸ್ಮೃತಿಯ ಮೂಲಕ ಮಹಿಳೆಯರನ್ನು ದಮನ ಮಾಡಿದ್ದರು. ನೆಹರು ಅವರ ಆಡಳಿತದಲ್ಲಿ ಬಾಲ್ಯ ವಿವಾಹ, ಸತಿ ಪದ್ಧತಿಗಳಂಥ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕಲು ಹಿಂದೂ ವಿವಾಹ ಕಾಯ್ದೆ ಜಾರಿಗೆ ತಂದರು. ಹಿಂದೂ ಉತ್ತರಾಧಿಕಾರಿ ಕಾಯ್ದೆ, ದತ್ತು ಸ್ವೀಕರಿಸುವ ಕಾಯ್ದೆ, ವರದಕ್ಷಿಣೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರು. 1951ರ ಜನಗಣತಿ ಪ್ರಕಾರ ದೇಶದ ಮಹಿಳಾ ಸಾಕ್ಷರತೆ ಪ್ರಮಾಣ 8.86% ಇದ್ದದ್ದು 2011ರ ಜನಗಣತಿಯ ಪ್ರಕಾರ 65.45% ಗೆ ಹೆಚ್ಚಳವಾಗಲು ಕಾಂಗ್ರೆಸ್‌ ಸರ್ಕಾರ ಕಾರಣ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ