ಮುಡಾ ನಿವೇಶನ ಪಡೆದದ್ದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಶ್ರೀವತ್ಸ

By Kannadaprabha NewsFirst Published Aug 23, 2024, 9:43 PM IST
Highlights

ಶಾಸಕ ಶ್ರೀವತ್ಸ ಎಂಡಿಎನಿಂದ ಜಿ. ಕೆಟಗಿರಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ. 

ಮೈಸೂರು (ಆ.23): ಶಾಸಕ ಶ್ರೀವತ್ಸ ಎಂಡಿಎನಿಂದ ಜಿ. ಕೆಟಗಿರಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ. ನನ್ನ ವಿರುದ್ಧದ ಆರೋಪ ಸಾಬೀತಾದರೆ 24 ಗಂಟೆಗಳಲ್ಲಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ಒಂದು ಸಣ್ಣ ದಾಖಲೆ ಬಿಡುಗಡೆಗೊಳಿಸಿದರೂ ರಾಜಕೀಯ ನಿವೃತ್ತಿ ಹೊಂದುತ್ತೇನೆ. ಒಂದು ವೇಳೆ ನನ್ನ ಮೇಲಿನ ಆರೋಪ ಸುಳ್ಳಾದರೆ ಲಕ್ಷ್ಮಣ್ ರಾಜಕೀಯ ನಿವೃತ್ತಿ ಹೊಂದುತ್ತಾರಾ.? ಎಂದು ಸವಾಲು ಹಾಕಿದ್ದಾರೆ.

ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಎಲುಬಿಲ್ಲದ ನಾಲಿಗೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಬಾರದು. ನನ್ನ ಹಾಗೂ ನನ್ನ ಕುಟುಂಬದ ಹೆಸರಿನಲ್ಲಿ ಎಂಡಿಎಗೆ ಸಂಬಂಧಿಸಿದ ಒಂದು ತುಂಡು ಜಾಗವೂ ಇಲ್ಲ. ಬೇಸರತ್ ಕ್ಷಮೆಗೆ ನೋಟಿಸ್ ಕಳುಹಿಸಿದ್ದೇವೆ. ಕ್ಷಮೆಯಾಚಿಸದಿದ್ದರೆ ಕಾನೂನು ಸಂಕಷ್ಟ ಎದುರಿಸಬೇಕಾಗುತ್ತದೆ. ಅಷ್ಟು ಸುಲಭವಾಗಿ ಬಿಡುವವನಲ್ಲ ನಾನು. ಇನ್ನೂ ಮುಂದೆ ಲಕ್ಷ್ಮಣ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದೇ ಇಲ್ಲ. ಏನಿದ್ದರೂ ಕಾನೂನಿನ ಮೂಲಕ ಉತ್ತರ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

Latest Videos

ನೈತಿಕತೆಯಿದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಿಎಂ ಸದಾನಂದಗೌಡ

ಲಕ್ಷ್ಮಣ್ ಅವರು ಪ್ರತಾಪ್ ಸಿಂಹ ಅವರ ಬಗ್ಗೆ ಮಾತನಾಡಲಿ. ಪ್ರತಾಪ್ ಸಿಂಹ ವಿರುದ್ಧ ಮಾತಾನಾಡಲು ಹೆದರುತ್ತಾರೆ. ರಾಜಕೀಯದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಬರ್ಬಾದ್ ಆಗಿರುವ ಲಕ್ಷ್ಮಣ್ ಲ್ಯಾಕ್ ಅಂಡ್ ಪೇಂಟಿಂಗ್ ಮೃಗಾಲಯದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಈ ರೀತಿ ಮಾತಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ನಿವೇಶನ ಹಿಂದಿರುಗಿಸಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಅಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೇಶನ ಹಿಂದಿರುಗಿಸಿದ್ದರೆ, ಈಗ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮೊದಲು ನಾನು ದೂರು ನೀಡಿದಾಗ ನಿರ್ಲಕ್ಷ್ಯಿಸಿದ್ದಾಗಿ ಹೇಳಿದರು.

ಪ್ರಾಸಿಕ್ಯೂಷನ್ ಗೆ ನೀಡುವ ಬಗ್ಗೆ ಕಾಂಗ್ರೆಸ್ ಗೆ ಮೊದಲೇ ತಿಳಿದಿದ್ದರಿಂದ ನಿನ್ನೆ ಕೆಪಿಸಿಸಿ ವಕ್ತಾರರ ಮೂಲಕ ಸುದ್ದಿಗೋಷ್ಠಿ ನಡೆಸಿದ್ದರು. ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅಸಂಸ್ಕೃತ ಪದ ಬಳಕೆ ಮಾಡಿದ್ದಾರೆ. ಲಕ್ಷ್ಮಣ್ ಒಂದು ರಾಷ್ಟ್ರೀಯ ಪಕ್ಷದ ವಕ್ತಾರರಾಗಿದ್ದಾರೆ. ಲಂಗು ಲಗಾಮು ಇಟ್ಟುಕೊಂಡು ಮಾತನಾಡಬೇಕು. ನನ್ನ ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡಿದ್ದಾರೆ, ಟ್ರೋಲ್ ಮಾಡಿರುವವರ ಬಗ್ಗೆಯೂ ಮಾತನಾಡಿದ್ದಾರೆ. ವಕೀಲರ ಮುಖಾಂತರ ಲಕ್ಷ್ಮಣ್ ಅವರಿಗೆ ನೋಟಿಸ್ ಕೊಡಿಸುತ್ತೇನೆ ಎಂದರು.

ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ: ಮುಖ್ಯಮಂತ್ರಿ ಚಂದ್ರು

ಈ ರೀತಿ ಅಸಂಬದ್ಧ ಪದ ಬಳಕೆ ಮಾಡುವುದು ಸರಿಯಲ್ಲ. ನನ್ನ ಬಗ್ಗೆ ಮಾತನಾಡಿರುವುದಕ್ಕೆ ಬೇಜಾರಿಲ್ಲ. ಆದರೆ ಯಾರ ಬಗ್ಗೆಯೂ ಈ ರೀತಿ ಮಾತನಾಡಬಾರದು ಎಂದು ನೋಟೀಸ್ ಕೊಡಿಸಲು ಮುಂದಾಗಿದ್ದೇನೆ. ಸಿಎಂ ಮುಂದಿಟ್ಟುಕೊಂಡು ಪ್ರಕರಣದಿಂದ ಪಾರಾಗಲು ಹಲವರು ಪ್ರಯತ್ನಿಸುತ್ತಿದ್ದಾರೆ. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದರು.

click me!