ಖರ್ಗೆ ಸಿಎಂ ಸ್ಥಾನಕ್ಕೇರಿದರೆ ಪಕ್ಷದ ಎಲ್ಲರಿಂದಲೂ ಸ್ವಾಗತಃ ಗೃಹ ಸಚಿವ ಪರಮೇಶ್ವರ್

Kannadaprabha News   | Kannada Prabha
Published : May 01, 2026, 11:32 AM IST
Parameshwar on khargeIf Kharge rises to cm post he will be welcomed by everyone says parameshwar

ಸಾರಾಂಶ

ಗೃಹ ಸಚಿವ ಜಿ.ಪರಮೇಶ್ವರ್ ಅವರು, ಅನುಭವಿ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ದಲಿತ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ್ದೇನು?

ಬೆಂಗಳೂರು ಮೇ.೧): ಅನುಭವ ಹೊಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ದಲಿತ ಸಿಎಂ ವಿಚಾರ ಮುನ್ನೆಲೆಗೆ

ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ ಕುರ್ಚಿಯಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬರುತ್ತದೆ ಎಂಬ ಯತೀಂದ್ರ ಅವರ ಹೇಳಿಕೆಗೆ ಗುರುವಾರ ಪ್ರತಿಕ್ರಿಯಿಸಿದ ಗೃಹ ಸಚಿವರು, ಯತೀಂದ್ರ ಅವರು ಹೇಳಿದ ಮೇಲೆ ಆಯ್ತಲ್ಲ. ನಾನು ಮಾತನಾಡುವುದೇನಿದೆ? ಈ ವಿಚಾರದಲ್ಲಿ ಏನನ್ನೂ ಮಾತನಾಡುವುದಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು. 

ಖರ್ಗೆ ಸಿಎಂ ಆದ್ರೆ ಸಂತೋಷ, ಸ್ವಾಗತ

ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾದರೆ ನಾವು ಸ್ವಾಗತಿಸುತ್ತೇವೆ. ಖರ್ಗೆ ಅವರು ಹಿರಿಯರು, ಅವರ ಸಮಕಾಲೀನರೆಲ್ಲ ಮುಖ್ಯಮಂತ್ರಿ ಆಗಿದ್ದಾರೆ. ವೀರಪ್ಪ ಮೊಯ್ಲಿ, ಗುಂಡೂರಾವ್‌ ಎಲ್ಲರೂ ಮುಖ್ಯಮಂತ್ರಿ ಆಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಐವತ್ತು ವರ್ಷದ ಸಾಧನೆಯಲ್ಲಿ ಹೈಕಮಾಂಡ್‌ ಅವರಿಗೆ ಸ್ಥಾನ ಕೊಟ್ಟರೆ ತಪ್ಪೇನಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ, ಮೇ 2ರಂದು ಭದ್ರತೆಯಲ್ಲಿ ಆರಂಭ!
EVM Tampering: ಮಧ್ಯರಾತ್ರಿ ಸ್ಟ್ರಾಂಗ್‌ ರೂಂಗೆ ಮಮತಾ ಬ್ಯಾನರ್ಜಿ ಭೇಟಿ, EVM ತಿರುಚುವ ಆರೋಪ, ಬಂಗಾಳದಲ್ಲಿ ಬಿರುಗಾಳಿ!