ಹೆಬ್ಬಾಳಕರ್‌ ದೂರು ಕೊಟ್ಟರೆ ಮಾತ್ರ ಪರಿಶೀಲಿಸಿ ಕ್ರಮ: ಸಭಾಪತಿ ಬಸವರಾಜ ಹೊರಟ್ಟಿ

By Kannadaprabha News  |  First Published Jan 2, 2025, 8:14 AM IST

ರವಿ ನಿಂದಿಸಿರುವ ಬಗ್ಗೆ ತಮ್ಮಲ್ಲಿ ಸಾಕ್ಷ್ಯ ಇವೆ. ಸಭಾಪತಿಗಳಿಗೆ ದೂರು ನೀಡುವುದಾಗಿ ಸಚಿವೆ ಲಕ್ಷ್ಮೀಹೆಬ್ಬಾಳಕರ್ ಹೇಳಿಕೆ ನೀಡಿದ್ದರು. ಆದರೆ, ಈ ವರೆಗೆ ಯಾವುದೇ ದೂರನ್ನು ಕೊಟ್ಟಿಲ್ಲ. ದೂರು ಕೊಟ್ಟರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಸಾಕ್ಷ್ಯ ಕೊಟ್ಟರೆ ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ಪರಿಶೀಲಿಸಲಾಗುವುದು. ಈ ವರೆಗೂ ದೂರನ್ನು ಮಾತ್ರ ಕೊಟ್ಟಿಲ್ಲ ಎಂದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ


ಹುಬ್ಬಳ್ಳಿ(ಜ.02): ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಮತ್ತೊಮ್ಮೆ ತಮಗೆ ದೂರು ಕೊಡದೇ ನಾವೇನೂ ಮಾಡುವುದಕ್ಕೆ ಬರುವುದಿಲ್ಲ. ಅವರು ದೂರು ಕೊಟ್ಟರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿರುವ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಈಗಲೂ ಮಾತುಕತೆ ಮಾಡಿ ಪ್ರಕರಣ ಇತ್ಯರ್ಥ ಪಡಿಸಲು ಸಿದ್ಧ ಎಂದು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ. 19ರಂದು ಸದಸ್ಯ ಸಿ.ಟಿ. ರವಿ ತಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಆಗ ದೂರು ಕೊಟ್ಟಿದ್ದರು. ಅದರಂತೆ ರವಿ ಕೂಡ ಕೊಟ್ಟಿದ್ದರು. ಆ ದೂರಿಗೆ ಸಂಬಂಧಪಟ್ಟಂತೆ ಈಗಾಗಲೇ ತಾವು ರೂಲಿಂಗ್‌ ಕೊಟ್ಟಾಗಿದೆ. ಮತ್ತೇನೂ ಮಾಡುವುದಕ್ಕೆ ಬರುವುದಿಲ್ಲ ಎಂದರು.

Tap to resize

Latest Videos

ರವಿ ಕೇಸ್ ಬಗ್ಗೆ ಮಹಜರ್ ಹೇಗೆ ಮಾಡ್ತೀರಿ?: ಸಿಐಡಿಗೆ ಪರಿಷತ್

ರವಿ ನಿಂದಿಸಿರುವ ಬಗ್ಗೆ ತಮ್ಮಲ್ಲಿ ಸಾಕ್ಷ್ಯ ಇವೆ. ಸಭಾಪತಿಗಳಿಗೆ ದೂರು ನೀಡುವುದಾಗಿ ಸಚಿವೆ ಲಕ್ಷ್ಮೀಹೆಬ್ಬಾಳಕರ್ ಹೇಳಿಕೆ ನೀಡಿದ್ದರು. ಆದರೆ, ಈ ವರೆಗೆ ಯಾವುದೇ ದೂರನ್ನು ಕೊಟ್ಟಿಲ್ಲ. ದೂರು ಕೊಟ್ಟರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಸಾಕ್ಷ್ಯ ಕೊಟ್ಟರೆ ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ಪರಿಶೀಲಿಸಲಾಗುವುದು. ಈ ವರೆಗೂ ದೂರನ್ನು ಮಾತ್ರ ಕೊಟ್ಟಿಲ್ಲ ಎಂದರು.

ಆದರೆ ಸಿ.ಟಿ. ರವಿ ಅವರು ಈ ವರೆಗೆ ಡಿ. 19, 24 ಹಾಗೂ 27ರಂದು ಹೀಗೆ ಮೂರು ದೂರು ಕೊಟ್ಟಿದ್ದಾರೆ. ಇದರಲ್ಲಿ ಒಂದು ತಮ್ಮ ವಿರುದ್ಧದ ಆರೋಪ ಸತ್ಯಕ್ಕೆ ದೂರ ಎಂಬುದಾಗಿದ್ದರೆ, ಅವಾಚ್ಯ ಶಬ್ದಗಳಿಂದ ಬೈದಿಲ್ಲ ಎಂಬುದಾಗಿತ್ತು. ಮತ್ತೊಂದು ಹಕ್ಕು ಚ್ಯುತಿಯದ್ದಾಗಿತ್ತು ಎಂದು ಸ್ಪಷ್ಟಪಡಿಸಿದರು. ಹಕ್ಕುಚ್ಯುತಿಗೆ ಸಂಬಂಧಪಟ್ಟಂತೆ ಮುಂದಿನ ಕ್ರಮಕ್ಕೆ ಕಳುಹಿಸಲಾಗಿದೆ ಎಂದರು.

ಮಹಜರ್‌:

ಸಿಒಡಿ ಹಾಗೂ ಬೆಳಗಾವಿ ಕಮಿಷನರೇಟ್‌ ಎರಡು ಕಡೆಗಳಿಂದಲೂ ಮಹಜರ್‌ ಮಾಡಲು ಅನುಮತಿ ಕೊಡಿ ಎಂದು ಪತ್ರ ಬಂದಿವೆ. ಯಾವ ರೀತಿ ಮಹಜರ್‌ ಮಾಡುತ್ತೀರಿ? ಏನೇನು ಮಹಜರ್‌ ಮಾಡುತ್ತೀರಿ ಎಂಬ ಪ್ರಶ್ನೆಗಳನ್ನು ಕೇಳಿದ್ದೇವೆ. ಆದರೆ ಈ ಬಗ್ಗೆ ಅಲ್ಲಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ. ಅಲ್ಲೇನು ಮಹಜರು ಮಾಡುತ್ತಾರೆ ಎಂಬುದು ನಮಗೆ ಗೊತ್ತಾಗಬೇಕು. ಇದಕ್ಕಾಗಿ ಈ ಪ್ರಶ್ನೆ ಕೇಳಿದ್ದೇವೆ. ಒಂದು ವೇಳೆ ಅವರು ಸ್ಪಷ್ಟನೆ ನೀಡಿದರೂ ಪರಿಷತ್‌ನಲ್ಲಿ ಮಹಜರ್‌ ನಡೆಸಲು ಕೊಡಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವ ಅಧಿಕಾರ ನಮ್ಮದೇ ಇರುತ್ತದೆ ಎಂದರು.

ಇಬ್ಬರನ್ನೂ ಕರೆದು ಮಾತನಾಡಿಸಿ ಪ್ರಕರಣವನ್ನು ಇತ್ಯರ್ಥ ಪಡಿಸಲು ಸಿದ್ಧವಿರುವುದಾಗಿ ತಿಳಿಸಿದ ಅವರು, ವಿಧಾನಪರಿಷತ್‌ ಇತಿಹಾಸದಲ್ಲೇ ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಇದೇ ಮೊದಲು, ಇದನ್ನು ಇತ್ಯರ್ಥ ಪಡಿಸಬೇಕು ಎಂಬುದಾಗಿದೆ ಎಂದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ಯಾರೂ ಒತ್ತಡವನ್ನೂ ಹೇರುವುದೂ ಇಲ್ಲ. ಒಂದು ವೇಳೆ ಒತ್ತಡ ಹೇರಿದರೂ ನಡೆಯಲ್ಲ. ಕಾನೂನು ಬದ್ಧವಾಗಿ ಏನು ಮಾಡಬೇಕೋ ಅದನ್ನೇ ಮಾಡುತ್ತೇನೆ. ಮೂರು ಸಲ ಸಭಾಪತಿಯಾಗಿದ್ದೇನೆ. 45 ವರ್ಷದಿಂದ ಪರಿಷತ್‌ನಲ್ಲಿದ್ದೇನೆ. ಇಂಥ ಘಟನೆ ಮಾತ್ರ ನೋಡಿಲ್ಲ ಎಂದರು.

ರವಿ-ಲಕ್ಷ್ಮಿ ಕೇಸ್‌ ಮಹಜರು ಹೇಗೆ?: ಸಿಐಡಿಗೆ ಪರಿಷತ್‌ ಪತ್ರ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುರಿತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ್ದಾರೆನ್ನಲಾದ ಆಕ್ಷೇಪಾರ್ಹ ಪದ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರು ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಯಾವ ರೀತಿಯಲ್ಲಿ ಮಹಜರು ಮಾಡಲಾಗುತ್ತದೆ ಎಂಬುದನ್ನು ವಿವರಿಸುವಂತೆ ವಿಧಾನಪರಿಷತ್‌ ಸಚಿವಾಲಯವು ಸಿಐಡಿಗೆ ಪತ್ರ ಬರೆದಿದೆ.

ಹೆಬ್ಬಾಳ್ಕರ್‌ ಕೇಸಲ್ಲಿ ಅಮಾನವೀಯ ನಡೆ: ಪೊಲೀಸರ ವಿರುದ್ಧ ಗವರ್ನ‌ರ್‌ಗೆ ಸಿ.ಟಿ.ರವಿ ದೂರು

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ವೇಳೆ ನಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮತ್ತು ಸಿ.ಟಿ.ರವಿ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಪತ್ರ ಬರೆದಿರುವ ಸಿಐಡಿಗೆ ವಿಧಾನಪರಿಷತ್‌ ಸಚಿವಾಲಯ ಈ ಮರು ಪತ್ರ ಬರೆದಿದೆ ಎಂದು ತಿಳಿದು ಬಂದಿದೆ.

ವಿಧಾನಪರಿಷತ್‌ ಕಾರ್ಯದರ್ಶಿ ಮಹಾಲಕ್ಷ್ಮೀ ಅವರು ಸಿಐಡಿಗೆ ಪತ್ರ ಬರೆದು ಯಾವ ರೀತಿ ಮಹಜರು ಮಾಡಲಾಗುತ್ತದೆ ಎಂಬುದರ ಕುರಿತು ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಸ್ಥಳ ಮಹಜರು ಯಾವ ರೀತಿ ಇರಲಿದೆ ಎಂಬುದರ ಜತೆಗೆ ಯಾರನ್ನು ಮಹಜರು ಸ್ಥಳಕ್ಕೆ ಕರೆದೊಯ್ಯಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಕೇಳಲಾಗಿದೆ. ಸಭಾಪತಿ ಬಸವರಾಜ ಹೊರಟ್ಟಿ ನಿರ್ದೇಶನ ಮೇರೆಗೆ ಸಿಐಡಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

click me!