ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿಯೇ ಬೆಂಕಿ ಎಬ್ಬಿಸಿದೆ. ಮಾತ್ರವಲ್ಲ ಹೈಕಮಾಂಡ್ ಹಾಗೂ ಡಿ.ಕೆ ಶಿವಕುಮಾರ್ ಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟಿದ್ದಾರಾ ಎಂದು ಪ್ರಶ್ನೆ ಎದ್ದಿದೆ.
ಕೋಲಾರ (ಏ.2): ರಾಜ್ಯ ರಾಜಕಾರಣದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾರ್ಯಕರ್ತರ ಸಭೆಯ ಭಾಷಣದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಆಪ್ತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಿದ್ದರಾಮಯ್ಯರನ್ನ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪು ಮಾಡಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಇರೋದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಕರ್ಣಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಮುನಿಸಿಕೊಂಡು ಪಕ್ಕಕ್ಕೆ ಹೋದರೆ ಕಷ್ಟ. ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಂದಿರುವ ಗತಿ ಕರ್ನಾಟಕದ ಕಾಂಗ್ರೆಸ್ ಗೆ ಬರುತ್ತದೆ. ಸಿದ್ದರಾಮಯ್ಯ ಕೋಲಾರಕ್ಕೆ ಬಾರದೆ ಹೋದರೆ ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಳುಗಿ ಹೋಗುತ್ತದೆ. ಕಸರತ್ತು ಮಾಡಿ ರಾಹುಲ್ ಗಾಂಧಿ ಮನಸ್ಸು ಪರಿವರ್ತನೆ ಮಾಡಿಸಿ ಸಿದ್ದರಾಮಯ್ಯರನ್ನ ಕರ್ನಾಟಕದಲ್ಲಿ ಮತ್ತೆ ವಿರೋಧ ಪಕ್ಷದಲ್ಲಿ ಕೂರಿಸಬೇಕಾಗುತ್ತದೆ ಎಂದು ಕೋಲಾರದ ಶ್ರೀನಿವಾಸಪುರದಲ್ಲಿ ನಡೆದ ಕುರುಬರ ಸಂಘದ ಸಭೆಯಲ್ಲಿ ಶಾಸಕ ಕೆ.ಆರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
undefined
ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ರಮೇಶ್ ಕುಮಾರ್ ರವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿಯೇ ಬೆಂಕಿ ಎಬ್ಬಿಸಿದೆ. ಮಾತ್ರವಲ್ಲ ಹೈಕಮಾಂಡ್ ಹಾಗೂ ಡಿ.ಕೆ ಶಿವಕುಮಾರ್ ಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟರಾ? ರಮೇಶ್ ಕುಮಾರ್ ಎಂದು ಪ್ರಶ್ನೆ ಎದ್ದಿದೆ.
ಏಪ್ರಿಲ್ 4 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ!
ಮೀಟಿಂಗ್ ಬಳಿಕ ಎರಡನೇ ಪಟ್ಟಿ ಬಿಡುಗಡೆ
ಚಾಮರಾಜ, ಚಾಮುಂಡೇಶ್ವರಿ ಟಿಕೆಟ್ ನಾಳಿದ್ದು ಇತ್ಯರ್ಥವಾಗಲಿದೆ. ನಾಳಿದ್ದು ಮೀಟಿಂಗ್ ಬಳಿಕ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ಕೋಲಾರಕ್ಕೆ ಹೋಗುವುದು ಹೈಕಮಾಂಡ್ ತೀರ್ಮಾನವಾಗಿದೆ ಎಂದು ಮೈಸೂರಲ್ಲಿ ಇರುವ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್- ಜೆಡಿಎಸ್ ಬೆಂಬಲಿಗರ ನಡುವೆ ಮಾರಾಮಾರಿ: ದೊಣ್ಣೆ, ಕಲ್ಲುಗಳಿಂದ ಹಲ್ಲೆ
ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮತ್ತು ವರುಣಾದಲ್ಲಿ ಸಿದ್ದರಾಮಯ್ಯರನ್ನ ಕಟ್ಟಿ ಹಾಕುವ ಪ್ಲಾನ್ ವಿಚಾರವಾಗಿ ಮಾತನಾಡಿದ್ದ ಸಿದ್ದರಾಮಯ್ಯ ಅವರು ಯಾರು, ಯಾರನ್ನೂ ಕಟ್ಟಿಹಾಕಲು ಸಾಧ್ಯವಿಲ್ಲ. ಸೋಲಿಸುವುದು, ಗೆಲ್ಲಿಸುವುದು ಜನರ ಕೈಯ್ಯಲ್ಲಿದೆ. ನಾನು ವರುಣಾಕ್ಕೆ ಪ್ರಚಾರಕ್ಕೆ ಈಗಲೂ ಹೋಗುವುದಿಲ್ಲ. ನಾಮಪತ್ರ ಸಲ್ಲಿಕೆಗೆ ಮಾತ್ರ ಹೋಗುತ್ತೇನೆ. ಎಲ್ಲವನ್ನೂ ನನ್ನ ಮಗ ಶಾಸಕ ಯತೀಂದ್ರ ನೋಡಿಕೊಳ್ತಾನೆ ಎಂದಿದ್ದಾರೆ.