ನಿಖಿಲ್‌ನ ಗೆಲ್ಲಿಸಿದ್ರೆ ಮೇಕೆದಾಟು ಯೋಜನೆ ಕೇಳ್ಬಹುದು: ಎಚ್‌.ಡಿ.ದೇವೇಗೌಡ

By Kannadaprabha News  |  First Published Nov 10, 2024, 5:16 AM IST

ಚನ್ನಪಟ್ಟಣ ಕ್ಷೇತ್ರದ ಜನ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಶಪಥ ಮಾಡಬೇಕು. ನೀವು ಆ ಕೆಲಸ ಮಾಡಿದರೆ ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಪ್ರಧಾನಿ ಮೋದಿ ಅವರನ್ನು ಕೇಳಲು ಸಾಧ್ಯವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. 
 


ಚನ್ನಪಟ್ಟಣ (ನ.10): ಚನ್ನಪಟ್ಟಣ ಕ್ಷೇತ್ರದ ಜನ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಶಪಥ ಮಾಡಬೇಕು. ನೀವು ಆ ಕೆಲಸ ಮಾಡಿದರೆ ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಪ್ರಧಾನಿ ಮೋದಿ ಅವರನ್ನು ಕೇಳಲು ಸಾಧ್ಯವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. ಚನ್ನಪಟ್ಟಣ ಕ್ಷೇತ್ರದ ಎಸ್.ಎಂ.ಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸಾಧ್ಯವಿಲ್ಲ. ನಿಖಿಲ್ ಕುಮಾರಸ್ವಾಮಿ ಗೆದ್ದರೆ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಹೋರಾಟ ನಡೆಸಿ ಮೇಕೆದಾಟು ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಅವಧಿ ಪೂರ್ಣಗೊಳಿಸಲ್ಲ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ದೇವೇಗೌಡ ಇದೇ ವೇಳೆ ಭವಿಷ್ಯ ನುಡಿದರು. ಈ ಸರ್ಕಾರ ಜನರನ್ನು ಸುಲಿಗೆ ಮಾಡುತ್ತಿದೆ. ಎಲ್ಲಾ ರೀತಿಯಲ್ಲೂ ಜನರನ್ನು ಶೋಷಣೆ ಮಾಡುತ್ತಿದೆ. ಇಂಥ ಸರ್ಕಾರ ಇರಬಾರದು. ಇದ್ದರೆ ಜನರಿಗೆ ಒಳ್ಳೆಯದು ಆಗುವುದಿಲ್ಲ ಎಂದು ಗುಡುಗಿದರು. ಇದೇ ವೇಳೆ ಐಎನ್‌ಡಿಐಎ ಮೈತ್ರಿಕೂಟದ ವಿರುದ್ಧವೂ ಕಿಡಿಕಾರಿದ ಅವರು, ಆ ಒಕ್ಕೂಟದಲ್ಲಿ ಪ್ರಧಾನಿಯಾಗಬಲ್ಲ ಯಾವುದೇ ನಾಯಕ ಇದ್ದಾರೆಯೇ? ಸ್ಟಾಲಿನ್ ಅಥವಾ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬಹುದೇ? ಎಂದು ಪ್ರಶ್ನಿಸಿದರು. 

Tap to resize

Latest Videos

undefined

ಅಗ್ಗದ ಭರವಸೆಗಳನ್ನು ಕೊಟ್ಟು ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಆದರೆ ಸಾಮಾಜಿಕವಾಗಿ, ಆರ್ಥಿಕವಾಗಿ ದುರ್ಬಲರನ್ನು ಬಲಪಡಿಸಬೇಕು ಎಂದು ಹೇಳಿದರು. ನಾನು ಕಾಡುಗೊಲ್ಲ ಮತ್ತು ಬೆಸ್ತ ಸಮುದಾಯಗಳನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ಖಚಿತ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಕಾಡುಗೊಲ್ಲ ಸಮುದಾಯವನ್ನು ಈ ಪ್ರವರ್ಗಕ್ಕೆ ಸೇರಿಸಲು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದರು. 1957ರಲ್ಲಿ ಚನ್ನಪಟ್ಟಣ ರಾಜಕೀಯದಲ್ಲಿ ತಮ್ಮ ಆರಂಭಿಕ ಹೆಜ್ಜೆಗಳನ್ನು ನೆನಪಿಸಿಕೊಂಡ ಅವರು, ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲು ನಾನು ಆಗ ವರದೇಗೌಡರನ್ನು ಸಂಪರ್ಕಿಸಿದ್ದೆ ಎಂದು ದೇವೇಗೌಡರು ಹೇಳಿದರು. 

ಸಿ.ಪಿ.ಯೋಗೇಶ್ವರ್ ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್‌ಮೆನ್: ದೇವೇಗೌಡ ವಾಗ್ದಾಳಿ

ಸತತ 5ನೇ ದಿನ ಮೊಮ್ಮಗನ ಪರ ಪ್ರಚಾರ: ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಸತತ ಐದನೇ ದಿನ ಪ್ರಚಾರ ನಡೆಸಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು, ಎಸ್‌.ಎಂ.ಹಳ್ಳಿ, ಮಳೂರು ಪಟ್ಟಣ, ಚೆಕ್ಕರೆ ಹಾಗೂ ಮತ್ತಿಕೆರೆ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

click me!