ಜನರಿಗೆ ತೊಂದರೆಯಾದರೆ, ಕಾನೂನು ಬಾಹಿರ ಕೆಲಸ ಮಾಡಿದರೆ ಸುಮ್ಮನಿರಲ್ಲ: ಸಚಿವ ಪರಮೇಶ್ವರ್

By Kannadaprabha News  |  First Published Jul 31, 2024, 11:29 PM IST

ಬಿಜೆಪಿ ಪಾದಯಾತ್ರೆಯಿಂದ ಜನರಿಗೆ ತೊಂದರೆ ಉಂಟಾದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. 


ಬೆಂಗಳೂರು (ಜು.31): ಬಿಜೆಪಿ ಪಾದಯಾತ್ರೆಯಿಂದ ಜನರಿಗೆ ತೊಂದರೆ ಉಂಟಾದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಆದರೆ, ಅವರ ಪಾದಯಾತ್ರೆ ಅವರು ಮಾಡಿಕೊಳ್ಳಲಿ. ಇದರಿಂದ ಜನರಿಗೆ ತೊಂದರೆಯಾಗಬಾರದು. ಕಾನೂನು ಬಾಹಿರ ಕೆಲಸ ಮಾಡಿದರೆ ಮಾತ್ರ ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಪಾಡಿಗೆ ಅವರು ನಡೆದುಕೊಂಡು ಹೋಗಲು ನಮ್ಮದೇನೂ ಅಭ್ಯಂತರ ಇಲ್ಲ ಎಂದರು.

ಬಿಜೆಪಿ ಪಾದಯಾತ್ರೆಗೆ ಪರ್‍ಯಾಯವಾಗಿ ನಾವು ಪಾದಯಾತ್ರೆ ಮಾಡುವುದಿಲ್ಲ. ಆದರೆ ಜನರಿಗೆ ಸಮಾವೇಶದ ಮಾದರಿಯಲ್ಲಿ ಏನು ತಿಳಿಸಬೇಕೋ ಅದನ್ನು ತಿಳಿಸುತ್ತೇವೆ. ಮುಡಾ ಅಕ್ರಮದ ವಿಚಾರದಲ್ಲಿ ಮುಖ್ಯಮಂತ್ರಿಯವರು ಈಗಾಗಲೇ ದಾಖಲೆ ಸಮೇತ ಸ್ಪಷ್ಟನೆ ನೀಡಿದ್ದಾರೆ. ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದ ಈ ಪಾದಯಾತ್ರೆ ನಡೆಯುತ್ತಿದೆ ಎಂದು ಹೇಳಿದರು.

Tap to resize

Latest Videos

ಶರಾವತಿ ನದಿಪಾತ್ರದ ಜನರ ಬಗ್ಗೆ ಎಚ್ಚರ ವಹಿಸಿ: ಸಚಿವ ಮಂಕಾಳು ವೈದ್ಯ ಸೂಚನೆ

ಅಕ್ರಮ ವಲಸಿಗರ ವಿರುದ್ಧ ಕ್ರಮ: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು. ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಾಂಗ್ಲಾದೇಶದಿಂದ ಕರ್ನಾಟಕಕ್ಕೆ ಬರುವವರನ್ನು ಪೊಲೀಸರು ಗುರುತಿಸಲಿದ್ದಾರೆ. ಅವರು ಪಾಸ್‌ಪೋರ್ಟ್, ವೀಸಾದಂತಹ ಮಾನ್ಯ ದಾಖಲೆಗಳನ್ನು ಹೊಂದಿಲ್ಲದಿದ್ದರೆ ಅವರನ್ನು ತಕ್ಷಣ ಬಂಧಿಸಿ ಬಂಧನ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಅದರ ನಂತರ, ನಾವು ಅವರ ಪ್ರಜೆಗಳ ಬಂಧನದ ಬಗ್ಗೆ ಬಾಂಗ್ಲಾದೇಶ ಹೈಕಮಿಷನ್ ಅಥವಾ ರಾಯಭಾರಿಗೆ ತಿಳಿಸುತ್ತೇವೆ. ನಂತರ ಅವರನ್ನು ಗಡೀಪಾರು ಮಾಡಲು ಅನುಮತಿ ಪಡೆಯುತ್ತೇವೆ ಎಂದು ಹೇಳಿದರು.

click me!