JDS Politics: ಶಿವರಾಮೇಗೌಡ ಕ್ಷಮೆ ಕೇಳಿದರೆ ಮತ್ತೆ ಪಕ್ಷ ಸೇರ್ಪಡೆ ಕುರಿತು ಯೋಚನೆ: ಎಚ್‌ಡಿಕೆ

By Kannadaprabha NewsFirst Published Feb 2, 2022, 9:59 AM IST
Highlights

*  ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಿವರಾಮೇಗೌಡ 
*  ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ HDK
*  ಪಕ್ಷ ಸಂಘಟನೆಯ ದೃಷ್ಟಿಯಿಂದ ಸರಿಯಾಗಿ ನಡೆದುಕೊಳ್ಳಬೇಕು 
 

ಮದ್ದೂರು(ಫೆ.02):  ಮಾಜಿ ಸಂಸದ ದಿವಂಗತ ಮಾದೇಗೌಡರ(G Madegowda) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಚಾಟಿಸಲ್ಪಟ್ಟಿರುವ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡರನ್ನು(LR Shivaramegowda ) ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. ಒಂದೊಮ್ಮೆ ಅವರು ಕ್ಷಮೆ ಕೇಳಿದರೆ ಆ ಬಗ್ಗೆ ಮುಂದೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವರಾಮೇಗೌಡರು ಜನತೆಯ ಕ್ಷಮೆ ಕೋರುವುದು ಮಾತ್ರವಲ್ಲ. ಪಕ್ಷ ಸಂಘಟನೆಯ ದೃಷ್ಟಿಯಿಂದ ಸರಿಯಾಗಿ ನಡೆದುಕೊಳ್ಳಬೇಕು ಎಂದರು.

Shivarame Gowda Audio Row:ನೊಟೀಸ್ ಕೊಡಲಿ, ಆಮೇಲೆ ಉತ್ತರಿಸ್ತೀನಿ: ಶಿವರಾಮೇ ಗೌಡ

ಮಾದೇಗೌಡರ ಅವಹೇಳನ: ದಳದಿಂದ ಎಲ್‌ಆರ್‌ಎಸ್‌ ಉಚ್ಚಾಟನೆ

ಬೆಂಗಳೂರು:  ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿ ದಿವಂಗತ ಜಿ.ಮಾದೇಗೌಡ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಅವರನ್ನು ಜೆಡಿಎಸ್‌(JDS) ಪಕ್ಷದಿಂದ ಉಚ್ಚಾಟನೆ(Expulsion) ಮಾಡಲಾಗಿದೆ.

ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ(HK Kumaraswamy) ಅವರು ಪಕ್ಷದ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟನೆ ಮಾಡಿ ಆದೇಶಿಸಿದ್ದಾರೆ. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಅನುಮತಿ ಪಡೆದು ಶಿವರಾಮೇಗೌಡರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.

ಶಿವರಾಮೇಗೌಡ ಅವರು ಪಕ್ಷದ ಕಾರ್ಯಕರ್ತೆಯೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆ ವೇಳೆ ಮಾದೇಗೌಡ ಅವರಿಗೆ ಶ್ರವಣಬೆಳಗೊಳದಲ್ಲಿ ಚಪ್ಪಲಿಯಲ್ಲಿ ಹೊಡೆದಿದ್ದೆ ಎಂದು ಹೇಳಿದ ಆಡಿಯೋ ವೈರಲ್‌ ಆಗಿತ್ತು.

ಅಸಭ್ಯ ಮತ್ತು ಅಕ್ಷಮ್ಯ:

ಇದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಒಕ್ಕಲಿಗ ಸಮುದಾಯದ ಹಿರಿಯ ನಾಯಕರು ಹಾಗೂ ಇಡೀ ರಾಜ್ಯವೇ(Karnataka) ಗೌರವಿಸುತ್ತಿದ್ದ ಜಿ. ಮಾದೇಗೌಡರಂತಹ ಹಿರಿಯರ ಬಗ್ಗೆ ಶಿವರಾಮೇಗೌಡರು ಅಸಭ್ಯವಾಗಿ ಮಾತನಾಡಿರುವುದು ಅಕ್ಷ್ಯಮ್ಯ. ಮಾದೇಗೌಡರ ಬಗ್ಗೆ ಅವರು ಮಾತನಾಡಿರುವ ಆಡಿಯೋವನ್ನು ನಾನೂ ಕೇಳಿದ್ದೇನೆ. ಇಂತಹ ನಡವಳಿಕೆಯನ್ನು ಸಹಿಸುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು.

Assembly Election 2023: ಸ್ಪರ್ಧಿಸಲು ಶಿವರಾಮೇ ಗೌಡ ಪೂರ್ವ ತಯಾರಿ,ಗೋ ಅಹೆಡ್ ಅಂದ್ರಾ ದೇವೇಗೌಡ್ರು.?

ಮಂಡ್ಯದ ರಾಜಕೀಯದ(Mandya Politics) ಬಗ್ಗೆ ಮಾತನಾಡುತ್ತಾ ಶಿವರಾಮೇಗೌಡರು ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಅಸಭ್ಯವಾಗಿ ಅವರು ಮಾತನಾಡಿರುವ ಮೊಬೈಲ್‌ ಕರೆಯ ಆಡಿಯೋ ಈಗ ವೈರಲ್‌ ಆಗಿದೆ. ತಮಗೆ ಸಂಬಂಧವೇ ಇಲ್ಲದ ವಿಷಯಗಳನ್ನು ಅವರು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೆ, ಮಾದೇಗೌಡರ ಬಗ್ಗೆ ಅಂತಹ ಕೆಳಮಟ್ಟದ ಭಾಷೆ ಬಳಸುವ ಅಗತ್ಯ ಇರಲಿಲ್ಲ. ಮಾದೇಗೌಡರಿಗೂ ಹಾಗೂ ನಮ್ಮ ಪಕ್ಷಕ್ಕೂ ರಾಜಕೀಯವಾಗಿ ವಿಭಿನ್ನತೆ ಇತ್ತು ನಿಜ. ಹಾಗೆಂದು ಅವರ ಬಗ್ಗೆ ಅಗೌರವದಿಂದ ನಡೆದುಕೊಳ್ಳುವುದನ್ನು ಒಪ್ಪಲಾಗದು. ಅಲ್ಲದೆ, ಮಾದೇಗೌಡರು ಇಂದು ನಮ್ಮ ನಡುವೆ ಬದುಕಿಲ್ಲ. ದಿವಂಗತ ನಾಯಕರ ಹೆಸರನ್ನು ಶಿವರಾಮೇಗೌಡರು ಯಾಕೆ ತಂದರೋ ಗೊತ್ತಿಲ್ಲ. ಇಂತಹ ಮಾತುಗಳು ಯಾರಿಗೂ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.

31 ಜಿಲ್ಲೆಯ ಅಲ್ಪಸಂಖ್ಯಾತ ನಾಯಕರ ಜತೆ ಎಚ್‌ಡಿಕೆ ಸಭೆ,  ಜೆಪಿ ಭವನದ ಸಂದೇಶ

ಬೆಂಗಳೂರು: ಮುಂದಿನ ವಿಧಾನಸಭೆ (Assembly elections) ಚುನಾವಣೆ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP)ಚುನಾವಣೆಗೆ ಪಕ್ಷವನ್ನು ಸಜ್ಜು ಮಾಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 31 ಜಿಲ್ಲೆಗಳ ಅಲ್ಪಸಂಖ್ಯಾತ ಮುಖಂಡರ ಜತೆ ಮಹತ್ವದ ಚರ್ಚೆ ನಡೆಸಿದರು. ಪಕ್ಷದ (JDS)ಕಚೇರಿ ಜೆ.ಪಿ.ಭವನದಲ್ಲಿ ಸುಮಾರು ನಾಲ್ಕು ತಾಸುಗಳ ಸಭೆ ನಡೆಸಿ ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಮುಖಂಡರಿಗೆ ಕೆಲ ಮಹತ್ವದ ಗುರಿಗಳನ್ನು ನಿಗದಿ ಮಾಡಿದರು.

click me!