ಮಂಗಳೂರಿನ ಐವನ್ ಡಿಸೋಜಾ ಬೆನ್ನಲ್ಲೇ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಬಾಂಗ್ಲಾದೇಶದಂಥ ಪ್ರತಿಭಟನೆ ನಮ್ಮ ದೇಶದಲ್ಲೂ ನಡೆಯುವ ದಿನ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.
ಗಜೇಂದ್ರಗಡ (ಆ.28): ಮಂಗಳೂರಿನ ಐವನ್ ಡಿಸೋಜಾ ಬೆನ್ನಲ್ಲೇ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಬಾಂಗ್ಲಾದೇಶದಂಥ ಪ್ರತಿಭಟನೆ ನಮ್ಮ ದೇಶದಲ್ಲೂ ನಡೆಯುವ ದಿನ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಮೊಟಕುಗೊಳಿಸಲು ಮುಂದಾದರೆ ಬಾಂಗ್ಲಾದೇಶದಲ್ಲಿ ಪ್ರಧಾನಿ ಮನೆಗೆ ನುಗ್ಗಿ ದಂತೆ ನಮ್ಮಲ್ಲೂ ಜನ ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ನುಗ್ಗುವ ದಿನಗಳು ದೂರವಿಲ್ಲ ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಸಂಚು ರೂಪಿಸುತ್ತಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಮಂಗಳವಾರ ತಾಲೂಕು ಅಹಿಂದ ಒಕ್ಕೂಟದಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದ ಸರ್ವ ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆ ಜಾರಿಗೆ ತಂದು ಜನಪರ ಆಡಳಿತ ನೀಡುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಕೇವಲ ಬಂಡವಾಳಶಾಹಿಗಳ ಪರ ಆಡಳಿತ ನಡೆಸುತ್ತಿರುವ ಮೋದಿ ಅವರು ಈ ಲೋಕಸಭಾ ಚುನಾವಣೆಯಲ್ಲಿ ಚಾರ್ ಪಾರ್ ಎಂದಿದ್ದರು.
ಆದರೆ ದೇಶದ ಜನತೆ ಅವರಿಗೆ ಬಹುಮತ ನೀಡದೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು. ಬಿಜೆಪಿ, ಜೆಡಿಎಸ್ ನಾಯಕರ ಹಗರಣಗಳ ಕುರಿತು ಚಾರ್ಜ ಶೀಟ್ ಸಿದ್ಧವಿದ್ದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಕಾರ್ಯಕರ್ತರೊಬ್ಬರು ನೀಡಿದ ದೂರು ಆಧರಿಸಿ ಪ್ರಾಸಿಕ್ಯೂಷನ್‌ಗೆಅನುಮತಿನೀಡಿದ್ದು ಅಚ್ಚರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನಾವು ರಾಷ್ಟ್ರಪತಿಗಳನ್ನು ಭೇಟಿ ಮಾಡಲು ನಿರ್ಧರಿಸಿದ್ದೇವೆ ಎಂದರು.
ಸ್ವಯಂಕೃತ ತಪ್ಪುಗಳಿಂದ ತಾನಾಗಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪತನ: ಎಂ.ಪಿ.ರೇಣುಕಾಚಾರ್ಯ ಭವಿಷ್ಯ
ಸಿದ್ದರಾಮಯ್ಯ ಅವರ ಅಧಿಕಾರ ಮೊಟಕುಗೊಳಿಸಲು ಮುಂದಾದರೆ ಬಾಂಗ್ಲಾದೇಶದಲ್ಲಿ ಪ್ರಧಾನಿ ಮನೆಗೆ ನುಗ್ಗಿದಂತೆ ನಮ್ಮಲ್ಲೂ ಜನ ಪ್ರಧಾನಿ ಮೋದಿ ಅವರ ಮನೆಗೆ ನುಗ್ಗುವ ದಿನಗಳು ದೂರವಿಲ್ಲ.
-ಜಿ.ಎಸ್.ಪಾಟೀಲ ರೋಣ ಶಾಸಕ