ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕತ್ ಇದ್ದರೆ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬರಲಿ. ಈಗ ರಾಜ್ಯದಲ್ಲಿ ಚುನಾವಣೆ ನಡೆದರೂ ಬಿಜೆಪಿ ಪಕ್ಷ 140ರಿಂದ 150 ಸ್ಥಾನ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅದಮ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಜು.05): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕತ್ ಇದ್ದರೆ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬರಲಿ. ಈಗ ರಾಜ್ಯದಲ್ಲಿ ಚುನಾವಣೆ ನಡೆದರೂ ಬಿಜೆಪಿ ಪಕ್ಷ 140ರಿಂದ 150 ಸ್ಥಾನ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅದಮ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಐತಿಹಾಸಿಕ ಗೆಲುವು ಸಾಧಿಸಿದೆ.
ನೆಚ್ಚಿನ ನಾಯಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿ ಪ್ರಧಾನಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ವರ್ಷದ ಹಿಂದೆಯಷ್ಟೇ ರಾಜ್ಯದಲ್ಲಿ 135 ಸ್ಥಾನ ಗೆದ್ದ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಸಿಎಂ- ಡಿಸಿಎಂ ಪ್ರತಿನಿಧಿಸುವ ಜಿಲ್ಲೆಗಳು ಸೇರಿದಂತೆ 17 ಸಚಿವರ ಸ್ವಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಹಿನ್ನಡೆಯಾಗಿದೆ. ಇದು ಕಾಂಗ್ರೆಸ್ ಸರ್ಕಾರ ಯಾವ ರೀತಿ ಜನಪ್ರೀಯತೆ ಕಳೆದುಕೊಂಡಿದೆ ಎಂಬುದಕ್ಕೆ ನಿದರ್ಶನವಾಗಿದೆ ಎಂದರು.
ರಾಜ್ಯದ ರಸ್ತೆ ಅಭಿವೃದ್ಧಿಗೆ ಒಂದು ಲಕ್ಷ ಕೋಟಿ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಕರ್ನಾಟಕ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರ್‍ವಾಲ್ ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಐತಿಹಾಸಿಕ ಗೆಲುವಿಗಾಗಿ ಧನ್ಯವಾದ ಸಮರ್ಪಿಸಿದರು. ಕಾರ್ಯಕರ್ತರ ಪ್ರಯತ್ನ, ಸಮರ್ಪಣಾ ಮನೋಭಾವದ ಕಾರಣ ಇದು ಸಾಧ್ಯವಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. 2023ರಲ್ಲಿ ಆದ ಅಪಮಾನಕ್ಕೆ ಬದಲಿಯಾಗಿ ಈ ಗೆಲುವನ್ನು ನೀಡಿದ್ದೀರಿ ಎಂದು ಅಭಿನಂದಿಸಿದರು.
ಕಾಂಗ್ರೆಸ್ 136 ಶಾಸಕರನ್ನು ಹೊಂದಿದ್ದರೂ ದಯನೀಯ ಸೋಲು ಅನುಭವಿಸಿದೆ. ರಾಜ್ಯ ಸರಕಾರದ ವಿರುದ್ಧ ಜನರು ಮತ ನೀಡಿದ್ದಾರೆ. ಕಾಂಗ್ರೆಸ್‍ಗೆ ಐತಿಹಾಸಿಕ ಪರಾಜಯಕ್ಕಾಗಿ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಎಲ್ಲ ಕ್ಷೇತ್ರಗಳಲ್ಲೂ ಕರ್ನಾಟಕ ಸರಕಾರ ಸೋತಿದೆ. ಮತ್ತೆ ಚುನಾವಣೆ ನಡೆಸಿಕೊಡಲು ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರು ಸಂಪೂರ್ಣ ಸೋಲು ಒಪ್ಪಿಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
2025ರ ಡಿಸೆಂಬರ್ ವೇಳೆಗೆ ಸೆನ್ಸೆಕ್ಸ್ 1 ಲಕ್ಷದ ಗಡಿಯನ್ನು ಮುಟ್ಟಲಿದೆಯೇ?
ಭ್ರಷ್ಟಾಚಾರದ ಕಾರಣಕ್ಕೆ ಕಾಂಗ್ರೆಸ್ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ. ಈ ಸಂಬಂಧ ಪ್ರತಿಭಟನೆ ಸಂಘಟಿಸಿದ ವಿಜಯೇಂದ್ರರ ತಂಡಕ್ಕೆ ಅಭಿನಂದನೆಗಳು ಎಂದು ರಾಧಾಮೋಹನ್‍ದಾಸ್ ಅಗರ್‍ವಾಲ್ ಅವರು ತಿಳಿಸಿದರು. ಮೈಸೂರು ಮೂಡಾದ 4 ಸಾವಿರ ಕೋಟಿಯ ಹಗರಣವನ್ನೂ ಅವರು ಪ್ರಸ್ತಾಪಿಸಿದರು. ಇದರ ವಿರುದ್ಧ ತೀವ್ರ ಹೋರಾಟ ನಡೆಸಲು ಸೂಚಿಸಿದರು. 3ನೇ ಬಾರಿ ಬಿಜೆಪಿ ತನ್ನ ಮತಪ್ರಮಾಣವನ್ನು ಹೆಚ್ಚಿಸಿಕೊಂಡು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಅಧಿಕಾರ ಪಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು. 14 ರಾಜ್ಯಗಳಲ್ಲಿ ಕಾಂಗ್ರೆಸ್ ಸಂಸದರೇ ಇಲ್ಲ ಎಂದು ವಿವರ ನೀಡಿದರು.