ಬೇರೆ ಪಕ್ಷದ ನಾಯಕರ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ದಾಖಲೆಗಳಿದ್ದರೆ ಯಾವುದೇ ಶುಭ ಗಳಿಗೆ, ಮುಹೂರ್ತ ನೋಡದೆ ತಕ್ಷಣ ಬಿಡುಗಡೆ ಮಾಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಿರುಗೇಟು ನೀಡಿದ್ದಾರೆ.
ಬೇರೆ ಪಕ್ಷದ ನಾಯಕರ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ದಾಖಲೆಗಳಿದ್ದರೆ ಯಾವುದೇ ಶುಭ ಗಳಿಗೆ, ಮುಹೂರ್ತ ನೋಡದೆ ತಕ್ಷಣ ಬಿಡುಗಡೆ ಮಾಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಿರುಗೇಟು ನೀಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆ ಪಕ್ಷಗಳ ಜೊತೆ ಹೊಂದಾಣಿಕೆ ರಾಜಕಾರಣ ಮಾಡಬೇಕಾದ ಅವಶ್ಯಕತೆ ನನಗಿಲ್ಲ. ನಾನು ರಾಜ್ಯಾಧ್ಯಕ್ಷನಾಗಿ ಪಕ್ಷದ ಸಂಘಟನೆ ಹಾಗೂ ಬಲಪಡಿಸುವ ಬಗ್ಗೆ ಗಮನಹರಿಸಿದ್ದೇನೆ. ಯತ್ನಾಳ್ ಅವರಿಗೆ ಖಂಡಿತ ಒಳ್ಳೆಯದಾಗುವುದಿಲ್ಲ ಎಂದು ಹೇಳಿದರು.
ಈ ವಿಜಯೇಂದ್ರನ ಬದಲಾವಣೆ ಮಾಡುವುದಕ್ಕೆ ಅವರ ಜೊತೆ ಇನ್ನೂ ಹತ್ತು ಜನರನ್ನು ಸೇರಿಸಿಕೊಳ್ಳಲಿ ನನಗೇನೂ ತೊಂದರೆ ಇಲ್ಲ. ಈಗಲೂ ಮನವಿ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರಿಗೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಳ್ಳಬಾರದು. ನಮ್ಮ ನಡವಳಿಕೆ ಸಂಘಟನೆಗೆ ಪೂರಕವಾಗಿ ಇರಬೇಕು. ಅದು ಬಿಟ್ಟು ತೊಂದರೆ ಕೊಡುವ ಕೆಲಸ ಮಾಡಬಾರದು ಎಂದು ಸಲಹೆ ಮಾಡಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟ ಮಾಡಬೇಕು. ಆದರೆ ಅವರಿಗೆ ಅರ್ಥ ಆಗುತ್ತಿಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರಗೆ ಬೈಯುವುದೇ ಒಂದು ಪದವಿ ಅಂದುಕೊಂಡಿದ್ದಾರೆ. ಯತ್ನಾಳ್ ಅವರ ಉಚ್ಚಾಟನೆಗೆ ಕಾರ್ಯಕರ್ತರ ಅಪೇಕ್ಷೆ ಇದೆ. ಬಿಗಿ ಕ್ರಮ ಆಗಬೇಕು. ಇದರ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.
undefined
ಪಕ್ಷಕ್ಕೆ ಅಗೌರವ ಆಗುವಂತೆ ಯಾರೂ ಮಾಧ್ಯಮಗಳ ಮುಂದೆ ಮಾತನಾಡಬಾರದು. ನಮ್ಮ ನಡವಳಿಕೆ, ಹೇಳಿಕೆಗಳು ಸಂಘಟನೆಗೆ ಪೂರಕವಾಗಿ ಇರಬೇಕೇ ಹೊರತು
ಸಂಘಟನೆಗೆ ತೊಂದರೆ ಕೊಡುವ ಕೆಲಸವನ್ನು ನಾನೂ ಮಾಡಬಾರದು, ಮತ್ತೊಬ್ಬನೂ ಮಾಡಬಾರದು ಎಂದರು. ಚಾಡಿ ಹೇಳುವ ಅವಶ್ಯಕತೆ ನನಗಿಲ್ಲ: ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ಚಾಡಿ ಹೇಳುವುದಾಗಲಿ, ಯತ್ನಾಳರನ್ನು ಪಕ್ಷದಿಂದ ಹೊರ ಕಳಿಸಬೇಕೆಂಬ ಒತ್ತಾಯ ಮಾಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ರಾಜ್ಯದ ಜನ ಭ್ರಷ್ಟ ಕಾಂಗ್ರೆಸ್ ಸರ್ಕಾರ ಎನ್ನುತ್ತಿದ್ದಾರೆ. ಇದರ ನಡುವೆ, ನಮ್ಮ ಕೆಲ ಮುಖಂಡರು ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು ರಾಜ್ಯ ಕಂಡ ಧೀಮಂತ ನಾಯಕ, ರೈತ ಮುಂದಾಳು ಯಡಿಯೂರಪ್ಪರ ಬಗ್ಗೆ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಇನ್ನು ಕೆಲವರು ಯತ್ನಾಳ್ ಅವರ ಹೆಗಲ ಮೇಲೆ ಗನ್ ಇಟ್ಟು ಗುಂಡು ಹಾರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಒಳ್ಳೆಯದಾಗುವುದಿಲ್ಲ. ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದ ಕಾರ್ಯಕರ್ತರು ಬಹಳಷ್ಟು ನೊಂದಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ಆಡಳಿತ ಪಕ್ಷವನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು. ನನ್ನ ನಾಯಕತ್ವ ಬದಲಾವಣೆಗೆ ಮನವಿ ಮಾಡಬಾರದೆಂದು ನಾನು ಹೇಳುವುದಿಲ್ಲ. ಮನವಿಯನ್ನು ಎಲ್ಲಿ, ಯಾರ ಮುಂದೆ ಮಾಡಬೇಕು? ಅಷ್ಟಾದರೂ ಸ್ಪಷ್ಟತೆ ಇರಬೇಕಲ್ಲವೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಬಿಜೆಪಿಯಲ್ಲಿ ತಾರಕಕ್ಕೇರಿದ ಬಣ ಜಗಳ: ವಿಜಯೇಂದ್ರ ವಿರುದ್ಧ ಯತ್ನಾಳ್ ಟೀಂ ಅಬ್ಬರ
ಇದನ್ನೂ ಓದಿ: ಮುಂದುವರಿದ ವಿಜಯೇಂದ್ರ ಬಣದ ತೀರ್ಥಯಾತ್ರೆ: ಬಿಜೆಪಿಯೊಳಗೆ ಶುರುವಾಗಿದೆ ಸಂಹಾರ, ಸಮರ!