ತಾಕತ್ತಿದ್ದರೆ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸಿ: ಸಿಎಂಗೆ ಡಿಕೆಶಿ ಸವಾಲು

By Govindaraj SFirst Published Nov 1, 2022, 3:20 AM IST
Highlights

ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಅಕ್ರಮ, ಭ್ರಷ್ಟಾಚಾರಗಳಾಗಿವೆ, ಎಲ್ಲವನ್ನೂ ತನಿಖೆಗೆ ನೀಡುತ್ತೇವೆ ಎನ್ನುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ ನಮ್ಮ ಕಾಂಗ್ರೆಸ್‌ ಸರ್ಕಾರ ಮತ್ತು ಅವರ ಬಿಜೆಪಿ ಸರ್ಕಾರ ಎರಡೂ ಅವಧಿಯಲ್ಲಿನ ಪ್ರಕರಣಗಳ ತನಿಖೆಗೆ ಆಯೋಗ ರಚಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

ಬೆಂಗಳೂರು (ನ.01): ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಅಕ್ರಮ, ಭ್ರಷ್ಟಾಚಾರಗಳಾಗಿವೆ, ಎಲ್ಲವನ್ನೂ ತನಿಖೆಗೆ ನೀಡುತ್ತೇವೆ ಎನ್ನುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ ನಮ್ಮ ಕಾಂಗ್ರೆಸ್‌ ಸರ್ಕಾರ ಮತ್ತು ಅವರ ಬಿಜೆಪಿ ಸರ್ಕಾರ ಎರಡೂ ಅವಧಿಯಲ್ಲಿನ ಪ್ರಕರಣಗಳ ತನಿಖೆಗೆ ಆಯೋಗ ರಚಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ. ನಗರದ ಸಿ.ವಿ.ರಾಮನ್‌ ನಗರದ ಕಗ್ಗದಾಸಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 38ನೇ ಪುಣ್ಯಸ್ಮರಣೆ ಹಾಗೂ ಮಾಜಿ ಉಪಪ್ರಧಾನಿ ವಲ್ಲಭಬಾಯಿ ಪಟೇಲ್‌ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನಿಮ್ಮ ಸರ್ಕಾರದ 40 ಪರ್ಸೆಂಟ್‌ ಕಮಿಷನ್‌ ಭ್ರಷ್ಟಾಚಾರಕ್ಕೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಬಲಿಯಾಗಿದ್ದಾರೆ. ಗುತ್ತಿಗೆದಾರರೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ. ಇನ್ಸ್‌ಪೆಕ್ಟರ್‌ ಸಾವಿನ ಬಗ್ಗೆ ಸಚಿವ ಎಂಟಿಬಿ ನಾಗರಾಜ್‌ ಅವರು ವರ್ಗಾವಣೆಗೆ 70- 80 ಲಕ್ಷ ರು. ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ? ಎಂದು ಹೇಳಿದ್ದಾರೆ. ಹಾಗಾಗಿ ಇದು ಸರ್ಕಾರವೇ ಮಾಡಿರುವ ಕೊಲೆ. ಸರ್ಕಾರದಲ್ಲಿ ಪ್ರತಿಯೊಂದು ನೇಮಕಾತಿ, ವರ್ಗಾವಣೆಯಲ್ಲೂ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನೆಲ್ಲಾ ಮುಚ್ಚಿಕೊಂಡು ಜನರನ್ನು ತಪ್ಪು ದಾರಿಗೆ ಎಳೆಯಲು ಕಾಂಗ್ರೆಸ್‌ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದೀರಿ. 

ಇಂಗ್ಲೀಷ್ ಹಿಂದಿಯಲ್ಲಿ ಮಾತ್ರ ಪರೀಕ್ಷೆಗೆ ಅವಕಾಶ: ಕೇಂದ್ರದ ವಿರುದ್ಧ ಹೆಚ್‌ಡಿಕೆ, ಡಿಕೆಶಿ ಆಕ್ರೋಶ

ಸರ್ಕಾರ ನಿಮ್ಮದೇ ಇದೆ. ತನಿಖೆಗೆ ನಾವು ಸಿದ್ಧರಿದ್ದೇವೆ. ತಾಕತ್ತಿದ್ದರೆ ನಮ್ಮ ಮತ್ತು ಅವರ ಎರಡು ಸರ್ಕಾರಗಳ ಪ್ರಕರಣಗಳ ತನಿಖೆಗೆ ಆಯೋಗ ರಚಿಸಲಿ ಎಂದರು. ಮುಖ್ಯಮಂತ್ರಿ ಅವರನ್ನೂ ಒಳಗೊಂಡು ಬಿಜೆಪಿಯವರು ಚುನಾವಣೆ ವೇಳೆ ಕೊಟ್ಟಆಶ್ವಾಸನೆಗಳಲ್ಲಿ ಎಷ್ಟನ್ನು ಈಡೇರಿಸಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳ ಮುಂದೆ ಚರ್ಚೆಗೆ ಬರಲಿ. ನಾವು ನಮ್ಮ ಸರ್ಕಾರದಲ್ಲಿ ಜನರಿಗೆ ಕೊಟ್ಟಎಷ್ಟುಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳುತ್ತೇವೆ. ತಾಕತ್ತಿದ್ದರೆ ಇಂತಹ ಚರ್ಚೆ ನಡೆಸಲಿ ಅದನ್ನು ಬಿಟ್ಟು ಬೊಗಳೆ ಬಿಡುವುದಲ್ಲ ಎಂದರು.

ಬೀಗ ಹಾಕಿದ ಇಂದಿರಾ ಕ್ಯಾಂಟೀನ್‌ ಮುಂದೆ ಕಾಂಗ್ರೆಸ್‌ ಧರಣಿ: ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿರುವ 40 ಇಂದಿರಾ ಕ್ಯಾಂಟೀನ್‌ಗಳಿಗೆ ಬೀಗ ಹಾಕುತ್ತಿದೆ. ಸರ್ಕಾರ ಎಲ್ಲೆಲ್ಲಿ ಇಂದಿರಾ ಕ್ಯಾಂಟೀನ್‌ ಮುಚ್ಚುತ್ತಿದೆಯೋ ಅಲ್ಲೆಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಧರಣಿ ನಡೆಸಬೇಕು. ತನ್ಮೂಲಕ ಬಡವರ ಹೊಟ್ಟೆಮೇಲೆ ಹೊಡೆಯಲು ಮುಂದಾಗಿರುವ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕರೆ ನೀಡಿದ್ದಾರೆ. ಈ ವಿಚಾರವಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧ್ಯಕ್ಷರಿಂದ ವರದಿ ತರಿಸಿಕೊಂಡು ಹೋರಾಟ ರೂಪಿಸುತ್ತೇವೆ. ಜನರ ಹಸಿವು ನೀಗಿಸಲು ಕಾಂಗ್ರೆಸ್‌ ಪಕ್ಷ ಈ ಯೋಜನೆ ಜಾರಿಗೆ ತಂದಿದ್ದು, ಇದನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಜನರ ಸಂಕಲ್ಪದಿಂದ ಕಾಂಗ್ರೆಸ್‌ಗೆ ಅಧಿಕಾರ: ಡಿ.ಕೆ.ಶಿವಕುಮಾರ್‌

ಸೋಮವಾರ ಬೆಂಗಳೂರಿನ ಸಿ.ವಿ.ರಾಮನ್‌ ನಗರದಲ್ಲಿ ನಡೆದ ಇಂದಿರಾಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವೆಲ್ಲರೂ ಇಂದಿರಾ ಗಾಂಧಿ ಅವರ ಸ್ಮರಣೆ ಮಾಡುತ್ತಿದ್ದರೆ ಈ ಸರ್ಕಾರ ಬೆಂಗಳೂರಿನಲ್ಲಿರುವ 40 ಇಂದಿರಾ ಕ್ಯಾಂಟೀನ್‌ಗಳಿಗೆ ಬೀಗ ಹಾಕುತ್ತಿದೆ. ಆಟೋ ಚಾಲಕರು, ಕಾರ್ಮಿಕರು, ಬಡ ಜನರು .10ಕ್ಕೆ ಹೊಟ್ಟೆತುಂಬಾ ಊಟ ಮಾಡಿ ಬದುಕುತ್ತಿದ್ದರು. ಅವರ ಹೊಟ್ಟೆಮೇಲೆ ಕಲ್ಲು ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಹೇಳಿದರು.

click me!