ಗೆಲ್ಲುವ ಸಾಮರ್ಥ್ಯವಿದ್ದರೆ ಒಂದೇ ಕುಟುಂಬಕ್ಕೆ ಎರಡ್ಮೂರು ಟಿಕೆಟ್ ಕೊಡಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಬೆಳಗಾವಿ (ಡಿ.10): ಗೆಲ್ಲುವ ಸಾಮರ್ಥ್ಯವಿದ್ದರೆ ಒಂದೇ ಕುಟುಂಬಕ್ಕೆ ಎರಡ್ಮೂರು ಟಿಕೆಟ್ ಕೊಡಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಅವರು ಕುಟುಂಬ ರಾಜಕಾರಣವನ್ನು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಂತ್ರಗಾರಿಕೆ ಮಾಡದೆ ರಾಜ್ಯದಲ್ಲಿ ನಾವು ಚುನಾವಣೆ ಗೆಲ್ಲಲು ಆಗಲ್ಲ. ಆದರೆ ನಮ್ಮಲ್ಲಿ ಸೋಲುತ್ತಾರೆ ಎಂದು ಗೊತ್ತಿದ್ದರೂ ಟಿಕೆಟ್ ನೀಡುತ್ತಾರೆ.
ಹಿರಿಯರು ಅಂತಲೂ ಟಿಕೆಟ್ ನೀಡುತ್ತೇವೆ. ಗೆಲ್ಲುವ ಹಾಗಿದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡಲಿ. ಜಾತಿ ಯುಗ ಮುಗಿದಿದೆ, ಕೆಲಸ ಮಾಡುತ್ತಾರೋ ಇಲ್ವೋ ಎಂಬುದನ್ನು ಜನ ನೋಡುತ್ತಾರೆ. ರಾಜ್ಯ ಕಾಂಗ್ರೆಸ್ ಪಕ್ಷ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು. ಅಭ್ಯರ್ಥಿ ಆಯ್ಕೆ ವಿಚಾರ ಬದಲಾವಣೆ ಮಾಡಬೇಕು ಎನ್ನುವುದು ನನ್ನ ಅನಿಸಿಕೆ. ಇದರಿಂದ 20 ಸೀಟ್ ಹೆಚ್ಚು ಗೆಲ್ಲಬಹುದು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಜನ ನೋಡುತ್ತಿದ್ದಾರೆ. ಸಿದ್ದರಾಮಯ್ಯ ಕಾಲದ ಸಾಕಷ್ಟುಯೋಜನೆ ಸ್ಥಗಿತ ಮಾಡಿದ್ದು ಜನರಿಗೆ ಗೊತ್ತಿದೆ ಎಂದು ದೂರಿದರು.
undefined
ಕಾಂಗ್ರೆಸ್‌ನಲ್ಲಿ ಸೈದ್ಧಾಂತಿಕ ಬದಲಾವಣೆ ಬೇಕು: ಸತೀಶ್ ಜಾರಕಿಹೊಳಿ
ಇನ್ನು ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದಂತೆ ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ಗೆ ಸ್ಪರ್ಧೆ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಜೆಡಿಎಸ್ ಇದೆ. ಜೆಡಿಎಸ್ ಸೀಮಿತ ಕ್ಷೇತ್ರದಲ್ಲಿದೆ. ಗುಜರಾತ್‌ನಲ್ಲಿ ಆಪ್‌ನಿಂದ ಆದಂಥ ಪರಿಸ್ಥಿತಿ ಕರ್ನಾಟಕದಲ್ಲಿಲ್ಲ. ಜೆಡಿಎಸ್ ಅವರು ಗೆಲ್ಲುವ ಸ್ಥಾನದಲ್ಲಿ ಗೆಲ್ಲುತ್ತಾರೆ. ನಾವು ಎಲ್ಲಿ ಗೆಲ್ಲಬೇಕು ಅಲ್ಲಿ ಗೆಲ್ಲುವಂತಹ ಪ್ರಯತ್ನವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.
ಡಿಕೆಶಿ ಆ್ಯಕ್ಟಿವ್ ಇದ್ದಾರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿ.ಕೆ.ಶಿವಕುಮಾರ್ ಒದ್ದಾಡುತ್ತಿದ್ದಾರೆಂಬ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿಕೆಯನ್ನು ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ರಾತ್ರಿ-ಹಗಲು ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಆ್ಯಕ್ಟಿವ್ ಆಗಿದ್ದಾರೆ. ಕೆಲವೊಂದು ಸಾರಿ ಲೆಕ್ಕಾಚಾರಗಳೂ ತಪ್ಪಾಗುವುದುಂಟು. ಹೀಗಾಗಿ ಬೆಂಬಲ ಮಾಡಬೇಕಾಗುತ್ತದೆ. ಒಂದೊಂದು ಸಾರಿ ಏನೋ ತಪ್ಪಾಗಿರಬಹುದು. ನಾವೆಲ್ಲರೂ ನಿಮ್ಮ ಜೊತೆಗೆ ಇರುತ್ತೇವೆ, ಕೆಲಸ ಮಾಡಿ ಅಂತ ಹೇಳಬೇಕಾಗುತ್ತದೆ. ಅದನ್ನು ಮುಂದಿಟ್ಟುಕೊಂಡು ಡಾ.ಜಿ.ಪರಮೇಶ್ವರ್ ಆ ರೀತಿ ಹೇಳಿರಬಹುದು ಎಂದು ತಿಳಿಸಿದರು.
Belagavi: ಪೊಲೀಸರು ವರ್ತನೆ ಬದಲಿಸಿಕೊಳ್ಳಬೇಕು: ಸತೀಶ ಜಾರಕಿಹೊಳಿ
ಇನ್ನು ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದಂತೆ ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ಗೆ ಸ್ಪರ್ಧೆ ನೀಡುವ ಬಗ್ಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಜೆಡಿಎಸ್ ಇದೆ. ಜೆಡಿಎಸ್ ಸೀಮಿತ ಕ್ಷೇತ್ರದಲ್ಲಿದೆ. ಗುಜರಾತ್‌ನಲ್ಲಿ ಆಪ್‌ನಿಂದ ಆದಂತಹ ಪರಿಸ್ಥಿತಿ ಕರ್ನಾಟಕದಲ್ಲಿಲ್ಲ. ಜೆಡಿಎಸ್ ಅವರು ಗೆಲ್ಲುವ ಸ್ಥಾನದಲ್ಲಿ ಗೆಲ್ಲುತ್ತಾರೆ. ನಾವು ಎಲ್ಲಿ ಗೆಲ್ಲಬೇಕು ಅಲ್ಲಿ ಗೆಲ್ಲುವಂತಹ ಪ್ರಯತ್ನವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.