ಸಂಗೀತ ಮಾಂತ್ರಿಕನನ್ನು ರಾಜ್ಯಸಭೆಗೆ ಸ್ವಾಗತಿಸಿದ ಕೇಂದ್ರ ಸಚಿವ ಜೋಶಿ

Published : Jul 25, 2022, 04:15 PM IST
ಸಂಗೀತ ಮಾಂತ್ರಿಕನನ್ನು ರಾಜ್ಯಸಭೆಗೆ ಸ್ವಾಗತಿಸಿದ ಕೇಂದ್ರ ಸಚಿವ ಜೋಶಿ

ಸಾರಾಂಶ

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿ ಸಚಿವ ಪ್ರಲ್ಹಾದ ಜೋಶಿ ಅವರನ್ನ ಭೇಟಿಯಾದರು. ರಾಜ್ಯಸಭಾ ಸದಸ್ಯರಾಗಿರುವ ಡಾ. ವಿರೇಂದ್ರೆ ಹೆಗ್ಗಡೆ ಅವರನ್ನು ಸಂಸದ ಪ್ರತಾಪ್ ಸಿಂಹ ಭೇಟಿಯಾದರು.

ನವದೆಹಲಿ (ಜು.25): ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ  ಭೇಟಿಯಾದ ಇಳಯರಾಜ ಅವರು  ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅತ್ಯಂತ ಗೌರವಯುತವಾಗಿ ಇಳಯರಾಜ  ಅವರನ್ನು ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು. ನಂತರ ಇಳಯರಾಜ ಅವರನ್ನು ಕುರಿತು ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟು ಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ದಕ್ಷಿಣ ಭಾರತದಿಂದ ರಾಜ್ಯಸಭೆಗೆ ಒಟ್ಟು 4 ಮಂದಿ ಆಯ್ಕೆಯಾಗಿದ್ದಾರೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಕ್ರೀಡಾಪಟು ಪಿ.ಟಿ.ಉಷಾ, ಚಿತ್ರಕಥೆಗಾರ, ನಿರ್ದೇಶಕ  ವಿ.ವಿಜಯೇಂದ್ರ ಪ್ರಸಾದ್ ಮತ್ತು ಸಂಗೀತ ಮಾಂತ್ರಿಕ ಇಳೆಯರಾಜಾ ನಾಮ ನಿರ್ದೇಶನಗೊಂಡಿದ್ದಾರೆ.

ಇನ್ನು ರಾಜ್ಯಸಭಾ ಸದಸ್ಯರಾಗಿರುವ ಡಾ. ವಿರೇಂದ್ರೆ ಹೆಗ್ಗಡೆ ಅವರನ್ನು ಸಂಸದ ಪ್ರತಾಪ್ ಸಿಂಹ ಅವರು ಇಂದು ನವದೆಹಲಿಯಲ್ಲಿ ಭೇಟಿಯಾಗಿದ್ದು, ಈ ಬಗ್ಗೆ ಫೋಟೋ ಹಂಚಿಕೊಂಡಿದ್ದಾರೆ. ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಗುರುವಾರ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದ ಕಾರ್ಯಕ್ರಮದಲ್ಲಿ ಡಾ. ವಿರೇಂದ್ರೆ ಹೆಗ್ಗಡೆ ಅವರನ್ನು ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಪ್ರತಾಪ್ ಸಿಂಹ ಅವರು ಎಸ್‌ಡಿಎಂ ( ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು) ಉಜಿರೆ ಕಾಲೇಜಿನ ವಿದ್ಯಾರ್ಥಿ ಅನ್ನೋದು ಗಮನಾರ್ಹ.  

 

ಕನ್ನಡದಲ್ಲೇ   ಪ್ರಮಾಣ ವಚನ ಸ್ವೀಕರಿಸಿದ್ದ ವೀರೇಂದ್ರ ಹೆಗ್ಗಡೆ
ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ, ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆಯವರು ಜು.21ರಂದು ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯಲ್ಲಿ ಸಭಾಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದರು.  ದೆಹಲಿ ಸಂಸತ್‌ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಗೌರವ ಪೂರ್ವಕವಾಗಿ ಸ್ವಾಗತಿಸಿದ್ದರು. ಈ ವೇಳೆ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಉಪಸ್ಥಿತರಿದ್ದರು. ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಡಾ.ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಕೃತಜ್ಞತೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.  

ಪಕ್ಷಾತೀತರಾಗಿ ಕೆಲಸ: ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಡಾ.ವೀರೇಂದ್ರ ಹೆಗ್ಗಡೆ ಅವರು, ಸಂಸತ್‌ ಭವನದ ಒಳಗೆ ನೋಡುವ ಆಸೆ ಮೊದಲಿನಿಂದಲೂ ಇತ್ತು. ಆದರೆ ಈಗ ಸಂಸತ್‌ ಸದಸ್ಯನಾಗಿ ಒಳ ಹೋಗುವ ಅವಕಾಶ ಸಿಕ್ಕಿತು. ಒಳಗೆ ಹೋಗಿ ನೋಡಿದ ಮೇಲೆ ತುಂಬಾ ಗೌರವ ಬಂತು. ಎಲ್ಲಾ ಭಕ್ತರು ನನ್ನ ಆಯ್ಕೆಯಿಂದ ಸಂತೋಷಪಟ್ಟಿದ್ದಾರೆ. ಎಲ್ಲರೂ ಗೌರವ ಸಲ್ಲಿಸುತ್ತಿದ್ದಾರೆ. ಈಗ ಮೊದಲ ಬಾರಿ ಕಲಾಪಕ್ಕೆ ಹಾಜರಾದೆ, ಮುಂದೆ ಕಾರ್ಯಗಳ ಬಗ್ಗೆ ಚಿಂತನೆ ಮಾಡುತ್ತೇನೆ ಎಂದರು.

ಈ ಹಿಂದೆ ನಾವು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಯಶಸ್ವಿ ಪ್ರಯೋಗಗಳನ್ನು ಬೇರೆ ರಾಜ್ಯಗಳಿಗೂ ವಿಸ್ತರಿಸಲು ಅವಕಾಶ ಇದೆ. ಸರ್ಕಾರದ ಬೆಂಬಲವೂ ಇರುವುದರಿಂದ ಇದು ಸುಲಭವಾಗಬಹುದು. ಮೊದಲು ಅರ್ಜಿ ಹಾಕಿ ಪದವಿ ಪಡೆಯುತ್ತಿದ್ದರು, ಈಗ ಕೆಲಸ ಮಾಡಿದವರನ್ನು ಗುರುತಿಸಲಾಗುತ್ತಿದೆ ಎಂದ ಅವರು, ನಾನು ಈಗಲೂ ಯಾವುದೇ ಪಕ್ಷಕ್ಕೂ ಹೊದಿಕೊಳ್ಳುವುದಿಲ್ಲ. ನಾನು ಪಕ್ಷಾತೀತವಾಗಿ, ಫಲಾಫೇಕ್ಷೆಯಿಲ್ಲದೆ ಕೆಲಸ ಮಾಡುವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌