
ಬೆಂಗಳೂರು(ಜು.29): ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಪಕ್ಷದ ಹೈ ಕಮಾಂಡ್ ಆಯ್ಕೆ ಮಾಡಿದ್ದು ನಾನು ಸೂಪರ್ ಸಿಎಂ ಟ್ಯಾಗ್‌ನಿಂದ ಹೊರಬಂದಿದ್ದೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.
ಬೊಮ್ಮಾಯಿ ಅವರು ನುರಿತ ರಾಜಕಾರಣಿ, ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರದೇ ಅದ ಕೊಡುಗೆ ನೀಡಿರುವುದನ್ನು ಗಮನಿಸಿದ ಹೈ ಕಮಾಂಡ್ ಸಿಎಂ ಮಾಡಿದೆ.
ವಿಜಯೇಂದ್ರನನ್ನು ಸಿಎಂ ಮಾಡಲು ಬೊಮ್ಮಾಯಿ ಆಯ್ಕೆ: ಮಾಜಿ ಸಚಿವ ಅಚ್ಚರಿ ಹೇಳಿಕೆ
ಯಡಿಯೂರಪ್ಪ ನಿವಾಸ ಕೇಂದ್ರೀಕೃತವಾಗಿರಲಿದೆ ಎಂಬುದೆಲ್ಲಾ ಸುಳ್ಳು ಅದಕ್ಕೆಲ್ಲಾ ಕಿವಿಗೊಡಬಾರದು ಎಂದು ತಿಳಿಸಿದರು.
ಬಿಜೆಪಿಗೆ ವಲಸೆ ಬಂದವರು ಯಡಿಯೂರಪ್ಪ ಬಿಜೆಪಿಯನ್ನು ನಂಬಿ ಬಂದಿದ್ದಾರೆ. ಅವರನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತದೆ. ಸಂಪುಟದಲ್ಲಿ ಯುವಕರಿಗೆ ಆದ್ಯತೆ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.