
ಬೆಂಗಳೂರು(ಆ.22): ಪ್ರತಿಪಕ್ಷಗಳ ನಾಯಕರ ವಿರುದ್ಧ ಇರುವ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಭಿಯೋಜನೆ(ಪ್ರಾಸಿಕ್ಯೂಷನ್) ಅನುಮತಿ ನೀಡದೆ ಬಾಕಿ ಉಳಿಸಿಕೊಂಡಿರುವ ರಾಜ್ಯಪಾಲರ ನಡೆಯನ್ನು ಪ್ರಶ್ನಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ರಾಜ್ಯಪಾಲರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಭಿಯೋಜನೆಗೆ ಅನುಮತಿ ನೀಡದೆ ಬಾಕಿ ಉಳಿಸಿಕೊಂಡಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಲವೇ ಗಂಟೆಗಳಲ್ಲಿ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆ ಇದೆ.
ರಾಜ್ಯಪಾಲರಿಗೆ ಬೆದರಿಕೆ ಇರೋ ವಿಚಾರ ನನಗೆ ಗೊತ್ತಿಲ್ಲ: ಗೃಹ ಸಚಿವ
ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಸಾಯಿ ವೆಂಕಟೇಶ್ವರ ಗಣಿ ಕಂಪನಿಗೆ ಅಕ್ರಮ ಜಮೀನು ಮಂಜೂರು, ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಕೈಗಾರಿಕೆ ಇಲಾಖೆಯಲ್ಲಿ ಅಕ್ರಮ ನೇಮಕಾತಿ ಆರೋಪ ಸೇರಿದಂತೆ ಆರು ಮಂದಿಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡದೆ ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬಳಿಕ ಬುಲೆಟ್ ಪ್ರೂಫ್ ಕಾರಿನಲ್ಲಿ ರಾಜ್ಯಪಾಲರ ಓಡಾಟ!
ರಾಜ್ಯಪಾಲರು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಹಲವು ಸಚಿವರು, ಶಾಸಕರು ಈಗಾಗಲೇ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಜೆಡಿಎಸ್‌ನ ನಾಯಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಭಿಯೋಜನೆಗೆ ಅನುಮತಿ ನೀಡಿಲ್ಲ. ಆದರೆ, ಮುಖ್ಯಮಂತ್ರಿಗಳ ವಿಚಾರದಲ್ಲಿ ಮಾತ್ರ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂಬುದು ಈ ಆಕ್ರೋಶಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲೂ ಇಂತಹುದೇ ನಿರ್ಣಯ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯುವ ಸಂಭವವಿದೆ ಎನ್ನಲಾಗಿದೆ.
ಕೆಲ ಸಚಿವರ ಒತ್ತಾಯ ಮೇರೆಗೆ ಸಚಿವ ಸಂಪುಟದಲ್ಲಿ ರಾಜ್ಯಪಾಲರ ತಾರತಮ್ಯ ಧೋರಣೆ ಕುರಿತು ಚರ್ಚಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿಗಳ ವಿರುದ್ಧ ಅಭಿಯೋಜನೆ ನೀಡಲು ಇದ್ದ ಆತುರತೆ ಬಾಕಿ ಇರುವುದಕ್ಕೆ ಯಾಕೆ ಇಲ್ಲ ಎಂದು ಪ್ರಶ್ನಿಸಲು ಚಿಂತನೆಯಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.