ಬಿಜೆಪಿ ಭಿನ್ನಮತ ತಡೆಗೆ ನಾಳೆ ಆರೆಸ್ಸೆಸ್‌ನಿಂದ ಮಹತ್ವದ ಸಭೆ

By Kannadaprabha NewsFirst Published Sep 11, 2024, 8:49 AM IST
Highlights

ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜತೆಗೆ ಅತೃಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ ಮತ್ತಿತರರು ಉಪಸ್ಥಿತರಿರಲಿದ್ದಾರೆ. 

ಬೆಂಗಳೂರು(ಸೆ.11): ರಾಜ್ಯ ಬಿಜೆಪಿ ಭಿನ್ನಮತಕ್ಕೆ ಬ್ರೇಕ್ ಹಾಕಲು ಆರ್‌ಎಸ್ಎಸ್ ಮುಂದಾ ಗಿದ್ದು, ಗುರುವಾರ ಬಿಜೆಪಿಯ ಹಿರಿಯ ನಾಯಕರೊಂದಿಗೆ ಮಹತ್ವದ ಸಭೆ ನಡೆಯಲಿದೆ. ಮಾಗಡಿ ರಸ್ತೆಯ ಚನ್ನೇನಹಳ್ಳಿಯ ಸಂಘದ ಸಂಸ್ಥೆಯಲ್ಲಿ ಸಭೆ ಕರೆದಿದ್ದು, ಬಿಜೆಪಿಯ ಕೋರ್‌ಕಮಿಟಿ ಸದಸ್ಯರು ಹಾಗೂ ಅತೃಪ್ತರು ಸೇರಿ 40 ನಾಯಕರನ್ನು ಆಹ್ವಾನಿಸಿದೆ. 

ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜತೆಗೆ ಅತೃಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Latest Videos

ಬಿಜೆಪಿಯಲ್ಲಿ ಶುದ್ದೀಕರಣ ಆಗುವವರೆಗೂ ನನ್ನ ಹೋರಾಟ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಸುದೀರ್ಘ ಅವಧಿಯ ಬಳಿಕ ಸಂಘ ಪರಿವಾರ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಹಿಸಿ ಸಭೆ ಕರೆದಿದೆ. ಇತ್ತೀಚಿನ ವರ್ಷಗಳಲ್ಲಿ ಅದರಲ್ಲೂ ಕಳೆದ ವಿಧಾನಸಭಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಇಂಥದೊಂದು ಸಭೆ ನಡೆಸುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಸಭೆ ಆರಂಭವಾಗಲಿದ್ದು, ಮಧ್ಯಾಹ್ನದವರೆಗೂ ನಡೆಯುವ ನಿರೀಕ್ಷೆಯಿದೆ. ಪಕ್ಷದ ಎಲ್ಲ ಹಿರಿಯ ನಾಯಕರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಸಂಘ ಪರಿವಾರದ ಮುಖಂಡರು ಪ್ರಯತ್ನಿಸಲಿದ್ದಾರೆ. ಜತೆಗೆ ಪಕ್ಷ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. 

ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯ ಬಿಜೆಪಿಯಲ್ಲಿನ ಕೆಲವು ಮುಖಂಡರು ಅಸಮಾ ಧಾನ ವ್ಯಕ್ತಪಡಿಸುತ್ತಲೇ ಇದ್ದರು. ಲೋಕಸಭಾ ಚುನಾ ವಣೆ ಬಳಿಕ ಅತಪ್ತ ನಾಯಕರ ಸಂಖ್ಯೆ ಹೆಚ್ಚಿದ್ದು, ಕಳೆದ ತಿಂಗಳು ಬೆಳಗಾವಿಯಲ್ಲಿ ಪ್ರತ್ಯೇಕ ಸಭೆಯನ್ನೂ ನಡೆಸ ದ್ದರು. ಈ ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಜಿ.ಎಂ. ಸಿದ್ದೇಶ್ವರ್, ಅಣ್ಣಾಸಾಹೇಬ್ ಜೊಲ್ಲೆ, ಪ್ರತಾಪ್ ಸಿಂಹ, ಬಿ.ಪಿ.ಹರೀಶ್ ಪಾಲ್ಗೊಂಡಿದ್ದರು.

click me!