2023ಕ್ಕೆ ರಾಜ್ಯದಲ್ಲಿ ಬಿಜೆಪಿ ಮತ್ತೆ ಅ​ಧಿಕಾರಕ್ಕೆ: Basavaraj Bommai ವಿಶ್ವಾಸ

Published : Jun 08, 2022, 03:58 AM ISTUpdated : Jun 08, 2022, 03:59 AM IST
2023ಕ್ಕೆ ರಾಜ್ಯದಲ್ಲಿ ಬಿಜೆಪಿ ಮತ್ತೆ ಅ​ಧಿಕಾರಕ್ಕೆ: Basavaraj Bommai  ವಿಶ್ವಾಸ

ಸಾರಾಂಶ

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ ಮತ್ತೊಮ್ಮೆ ಎಂಟಿಬಿ ನಾಗರಾಜ್‌ ಅಭಿಯಾನಕ್ಕೆ ಸೂಚನೆ  

ಹೊಸಕೋಟೆ (ಜೂ.8): ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಬಿಜೆಪಿ ಸರ್ಕಾರ ಬಡವರ ಅಭಿವೃದ್ಧಿ ಪರ ಆಡಳಿತ ನೀಡುವ ಮೂಲಕ ಹಲವು ಹೊಸ ಯೋಜನೆ ಜಾರಿಗೆ ತಂದಿದೆ. ಈ ಹಿನ್ನೆಲೆ 2023ಕ್ಕೆ ರಾಜ್ಯದಲ್ಲಿ ಬಿಜೆಪಿ ಅ​ಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಿ ಎಂ ಬಸವರಾಜ್‌ ಬೊಮ್ಮಾಯಿ (basavaraj bommai) ತಿಳಿಸಿದರು. ನಗರದ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ಮೋದಿಯವರ ಕನಸಾದ ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೋದಿಯವರ ಕೈಬಲಪಡಿಸಲು ರಾಜ್ಯದಲ್ಲಿ ಬಿಜೆಪಿ ಅ​ಧಿಕಾರಕ್ಕೆ ಬರಬೇಕು. ಬರಲಿದೆ ಕೂಡ. ಆದ್ದರಿಂದ ಕಾರ್ಯಕರ್ತರು ವಿಶ್ರಮಿಸದೆ ಬಿಜೆಪಿ ಅ​ಧಿಕಾರಕ್ಕೆ ಬರುವವರೆಗೂ ಕೆಲಸ ಮಾಡಬೇಕು. ಹೊಸಕೋಟೆಯಲ್ಲಿ ಮತ್ತೊಮ್ಮೆ ಎಂಟಿಬಿ ಎಂಬ ಅಭಿಯಾನ ಪ್ರಾರಂಭಿಸಿ ಕೆಲಸ ಮಾಡಿ ಎಂದರು. ಈ ಬಾರಿಯ ಆಯವ್ಯಯದಲ್ಲಿ ಎಲೆಮಲ್ಲಪ್ಪನ ಕೆರೆ ಸಂಪೂರ್ಣ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ಒದಗಿಸಿದೆ.

MLC ELECTION; 4 ಮಾಜಿ ಸಿಎಂಗಳಿಂದ ಭರ್ಜರಿ ಪ್ರಚಾರ

ಹೊಸಕೋಟೆಗೆ ಕೆರೆ ತುಂಬಿಸುವ ಯೋಜನೆ ಹಾಗೂ ಕುಡಿವ ನೀರಿನ ಯೋಜನೆಗಳಿಗೆ ಈ ವರ್ಷದಲ್ಲಿ ಮಂಜೂರಾತಿಯನ್ನು ನೀಡಲಾಗುವುದು. ಆನಗೊಂಡ ಹೋಬಳಿಯಲ್ಲಿ 39 ಕೆರೆ ತುಂಬುವ ಯೋಜನೆಯ ಕಾಮಗಾರಿ ನಡೆದಿದೆ. ಅದಕ್ಕೆ ಹೆಚ್ಚುವರಿಯಾಗಿ 50 ಕೋಟಿ ರು. ಒದಗಿಸಲಾಗಿದೆ. ಆದಷ್ಟುತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಸಮಗ್ರ ಅಭಿವೃದ್ಧಿಯತ್ತ ಹೊಸಕೋಟೆ ದಾಪುಗಾಲು ಹಾಕುತ್ತಿದೆ ಎಂದರು.

ಸಚಿವ ಎಂಟಿಬಿ ನಾಗರಾಜ್‌ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ನನಗೆ ಹೊಸಕೋಟೆ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಎಸ್‌ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಇದುವರೆಗೂ 250 ಕೋಟಿ ಅ​ಧಿಕ ಅನುದಾನ ನೀಡಿದ್ದಾರೆ. ಪ್ರಮುಖವಾಗಿ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಯ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಅನುದಾನ ಬಿಡುಗಡೆ ಕೆಲಸ ಮಾಡಬೇಕು. ಅಲ್ಲದೆ ಕಾವೇರಿ ನೀರು, ಮೆಟ್ರೋ ಸಂಪರ್ಕ ನಗರಕ್ಕೆ ಕೊಡುವ ಕೆಲಸವನ್ನು ನಿಮ್ಮ ಅವ​ಯಲ್ಲಿ ಆಗಲೇಬೇಕು ಎಂದು ಮನವಿ ಮಾಡಿದರು.

ಸಚಿವರಾದ ಡಾ.ಕೆ.ಸುಧಾಕರ್‌, ಸಿಸಿ ಪಾಟೀಲ್‌, ಭೈರತಿ ಬಸವರಾಜ್‌, ಬಿಬಿಎಂಪಿ ಮಾಜಿ ಸದಸ್ಯ ನಿತೀಶ್‌ ಪುರುಷೋತ್ತಮ್‌, ನಗರ ಬಿಜೆಪಿ ಅಧ್ಯಕ್ಷ ಡಾ.ಸಿ.ಜಯರಾಜ್‌, ತಾಲೂಕು ಅಧ್ಯಕ್ಷ ಸತೀಶ್‌, ನಗರಸಭೆ ಅಧ್ಯಕ್ಷ ಡಿ.ಕೆ.ನಾಗರಾಜ್‌ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.

ಚಿಕ್ಕಮಗಳೂರು ಬಿಜೆಪಿಯಿಂದ ಕೆಪಿಸಿಸಿ ಕಚೇರಿಗೆ ಚಡ್ಡಿ ರವಾನೆ

4 ಮಾಜಿ ಸಿಎಂಗಳಿಂದ ಭರ್ಜರಿ ಪ್ರಚಾರ: ರಾಜ್ಯದಲ್ಲಿ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ಚುನಾವಣೆ ರಂಗೇರುತ್ತಿದ್ದು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಮಂಗಳವಾರ ರಾಜ್ಯದ ವಿವಿಧೆಡೆ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು. ಇವರಿಗೆ ಪಕ್ಷದ ಇತರೆ ಮುಖಂಡರು ಸಾಥ್‌ ನೀಡಿದರು.

ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರು ಬಾಗಲಕೋಟೆ, ವಿಜಯಪುರ, ಬೆಳಗಾವಿಯಲ್ಲಿ ಪ್ರಚಾರ ನಡೆಸಿದರೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯ ಮತ್ತು ಮೈಸೂರಲ್ಲಿ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದರು. ಇನ್ನು ಜಗದೀಶ್‌ ಶೆಟ್ಟರ್‌ ಅವರು ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ, ಮಾಜಿ ಸ್ಪೀಕರ್‌ ಬಸವರಾಜ ಹೊರಟ್ಟಿಪರ ಪ್ರಚಾರ ಕೈಗೊಂಡರು. 

2 ಜಿಲ್ಲೆಯಲ್ಲಿ ಬಿಎಸ್‌ವೈ ಪ್ರಚಾರ: ವಾಯವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯೇ ಬೆಳಗಾವಿಗೆ ಬಂದು ಉಳಿದುಕೊಂಡಿದ್ದ ಬಿ.ಎಸ್‌.ಯಡಿಯೂರಪ್ಪ ಅವರು ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಬಾಗಲಕೋಟೆಯಲ್ಲಿ ಬೆಳಗ್ಗೆ 11ಕ್ಕೆ ಪ್ರಚಾರ ಸಭೆ ನಡೆಸಿ ನಂತರ ಅಲ್ಲಿಂದ ವಿಜಯಪುರಕ್ಕೆ ತೆರಳಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಬುಧವಾರ ಬೆಳಗಾವಿಯಲ್ಲಿ ಮತ್ತೊಂದು ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಪಕ್ಷದ ಮುಖಂಡರ ಸಭೆ ನಡೆಸಿದ್ದು, ಬಳಿಕ ಬಾಗಲಕೋಟೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್‌ ಹಾವಳಿ ತಡೆಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ