ಡಿ.ಕೆ.ಶಿವಕುಮಾರ್‌ಗೆ ಮತ್ತೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್‌!

Published : Mar 31, 2024, 04:49 AM IST
ಡಿ.ಕೆ.ಶಿವಕುಮಾರ್‌ಗೆ ಮತ್ತೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್‌!

ಸಾರಾಂಶ

ಆದಾಯ ತೆರಿಗೆ ಇಲಾಖೆಯಿಂದ ತಮಗೆ ಇನ್ನೊಂದು ನೋಟಿಸ್‌ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಆದರೆ ಅದು ಯಾವ ಪ್ರಕರಣಕ್ಕೆ ಸಂಬಂಧಿಸಿದ ನೋಟಿಸ್‌ ಮತ್ತು ಅದರಲ್ಲಿ ಯಾವ ಮಾಹಿತಿ ಕೇಳಿದ್ದಾರೆ ಎಂಬುದನ್ನು ಅವರು ತಿಳಿಸಿಲ್ಲ.

ಬೆಂಗಳೂರು (ಮಾ.31): ಆದಾಯ ತೆರಿಗೆ ಇಲಾಖೆಯಿಂದ ತಮಗೆ ಇನ್ನೊಂದು ನೋಟಿಸ್‌ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಆದರೆ ಅದು ಯಾವ ಪ್ರಕರಣಕ್ಕೆ ಸಂಬಂಧಿಸಿದ ನೋಟಿಸ್‌ ಮತ್ತು ಅದರಲ್ಲಿ ಯಾವ ಮಾಹಿತಿ ಕೇಳಿದ್ದಾರೆ ಎಂಬುದನ್ನು ಅವರು ತಿಳಿಸಿಲ್ಲ. ‘ಕರ್ನಾಟಕದಿಂದ ಆಯ್ಕೆಯಾಗಿ ಹಾಲಿ ಕೇಂದ್ರ ಸಚಿವರಾಗಿರುವ ಸಂಸದರೂ ಸೇರಿದಂತೆ ಬಿಜೆಪಿಯ ಹಲವು ನಾಯಕರ ವಿರುದ್ಧ ಕಳೆದ ನಾಲ್ಕೈದು ವರ್ಷಗಳಿಂದ ಪ್ರಕರಣವಿದೆ. ಅವರಿಗೆ ನೋಟಿಸ್‌ ನೀಡಿಲ್ಲ. ಆದರೆ, ನನ್ನ ವಿರುದ್ಧದ ಪ್ರಕರಣ ಮುಕ್ತಾಯವಾಗಿದ್ದರೂ ನೋಟಿಸ್‌ ನೀಡಿದ್ದಾರೆ’ ಎಂದು ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

‘ನಿನ್ನೆ ರಾತ್ರಿ ನೋಟಿಸ್‌ ಬಂದಿದೆ. ಅದೇ ಕರ್ನಾಟಕದಿಂದ ಆಯ್ಕೆಯಾಗಿ ಹಾಲಿ ಕೇಂದ್ರ ಸಚಿವರಾಗಿರುವ ಸಂಸದರೂ ಸೇರಿದಂತೆ ಬಿಜೆಪಿಯ ಹಲವು ನಾಯಕರ ವಿರುದ್ಧ ಪ್ರಕರಣಗಳಿವೆ. ಕಳೆದ ನಾಲ್ಕೈದು ವರ್ಷಗಳಿಂದ ಅವರ ವಿರುದ್ಧ ಯಾವುದೇ ವಿಚಾರಣೆ, ನೋಟಿಸ್‌, ಆರೋಪಪಟ್ಟಿ ಸಲ್ಲಿಕೆ ಸೇರಿದಂತೆ ಯಾವುದೇ ಕ್ರಮವಾಗಿಲ್ಲ. ಐಟಿಗೆ ಕಾಂಗ್ರೆಸ್ ನಾಯಕರೇ ಗುರಿ ಎಂಬುದು ಇದನ್ನು ನೋಡಿದರೆ ತಿಳಿಯುತ್ತದೆ’ ಎಂದು ಹೇಳಿದ್ದಾರೆ.

ಸೋಲಿನ ಭೀತಿಯಿಂದ ದೇವೇಗೌಡರಿಂದ ಪಕ್ಷಾತೀತ ಹೋರಾಟಕ್ಕೆ ಕರೆ: ಡಿ.ಕೆ.ಶಿವಕುಮಾರ್

ಲೋಕಸಭೆ ಚುನಾವಣೆ ಭೀತಿಯಿಂದ ಬಿಜೆಪಿ ಸರ್ಕಾರ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ಕಿರುಕುಳ ನೀಡುತ್ತಿದೆ. ಕಾಂಗ್ರೆಸ್‌ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಬಿಜೆಪಿ ಸರ್ಕಾರ ಹೆದರಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅರಿವಾಗಿದ್ದು, ಅದಕ್ಕಾಗಿಯೇ ಕಿರುಕುಳ ನೀಡಲಾಗುತ್ತಿದೆ. ಇಲ್ಲಿ ಯಾವುದೂ ಶಾಶ್ವತವಲ್ಲ. ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಬಿಜೆಪಿ ಸರ್ಕಾರ ಬೆದರಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅವರಿಗೆ ಅರಿವಾಗಿದೆ. ಹೀಗಾಗಿ ಅವರು ಎಲ್ಲರಿಗೂ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಎಚ್ಡಿಕೆ ಪಕ್ಕದ ಕ್ಷೇತ್ರಕ್ಕೆ ಹೋಗ್ತಿದ್ದಾರೆ: ನೀವು ಯಾರಿಗೆ ಅಧಿಕಾರ ಕೊಟ್ಟಿದ್ದೀರೊ ಅವರು ನಿಮ್ಮನ್ನು ನಂಬದೇ ಪಕ್ಕದ ಕ್ಷೇತ್ರಕ್ಕೆ ಹೋಗುತ್ತಿದ್ದಾರೆ. ನಿಮ್ಮ ಪರ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಅವರಿಗೆ ಟಾಟಾ ಬೈ ಬೈ ಹೇಳಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ದಳದ ಅಭ್ಯರ್ಥಿಯನ್ನು ಬಿಜೆಪಿ ಚಿಹ್ನೆಯಲ್ಲಿ ನಿಲ್ಲಿಸಿದ್ದಾರೆ. ದಳ ಈಗ ಎಲ್ಲಿದೆ ಕುಮಾರಣ್ಣ. ಇದೇ ಜಿಲ್ಲೆಯಿಂದ 2 ಬಾರಿ ಮುಖ್ಯಮಂತ್ರಿಯಾಗಿ ಈಗ ಈ ಜಿಲ್ಲೆ ಬಿಟ್ಟು ಮಂಡ್ಯಕ್ಕೆ ಹೋಗುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ಆ ಪಕ್ಷದ ನಾಯಕರಿಗೇ ನಂಬಿಕೆ ಇಲ್ಲ.

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ, ಡಿಕೆಶಿ ಈಗೇನು ಹೇಳ್ತಾರೆ?: ಬೊಮ್ಮಾಯಿ

ಈ ಜಿಲ್ಲೆಯ ಜನ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದರು. ಕಾಂಗ್ರೆಸ್ ಪಕ್ಷ ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿತು. ನೀವೆಲ್ಲರೂ ಸೇರಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದಿರಿ. ನಂತರ ನಾವು ಅವರಿಗೆ ಬೆಂಬಲ ನೀಡಿ ಒಂದು ಬಾರಿ ಮುಖ್ಯಮಂತ್ರಿ ಮಾಡಿದೆವು. ಆದರೂ ಅವರ ಕುಟುಂಬದ ಸದಸ್ಯರನ್ನು ಬಿಜೆಪಿ ಪಕ್ಷದಿಂದ ಕಣಕ್ಕಿಳಿಸುತ್ತಿದ್ದಾರೆ. ಇದರಿಂದಾಗಿ ನಮಗೆ ಯಾವುದೇ ಬೇಸರವಿಲ್ಲ. ಈ ಹೋರಾಟ ನಮಗೆ ಹೊಸತಲ್ಲ. ಅಂದೂ ಹೋರಾಟ ಮಾಡಿದ್ದೆವು, ಇಂದೂ ಹೋರಾಡುತ್ತಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ