ಶಕ್ತಿ ಯೋಜನೆ ಆರಂಭಕ್ಕೂ ಮೊದಲು ಪ್ರತಿನಿತ್ಯ 85 ಲಕ್ಷ ಪ್ರಯಾಣಕರು ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದು, ಯೋಜನೆ ಜಾರಿಗೆ ಬಂದ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಇದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಚನ್ನಪಟ್ಟಣ (ಮಾ.03): ಶಕ್ತಿ ಯೋಜನೆ ಆರಂಭಕ್ಕೂ ಮೊದಲು ಪ್ರತಿನಿತ್ಯ 85 ಲಕ್ಷ ಪ್ರಯಾಣಕರು ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದು, ಯೋಜನೆ ಜಾರಿಗೆ ಬಂದ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಇದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿ, ಯೋಜನೆ ಜಾರಿಯಾದಾಗ ಇನ್ನು ಸಾರಿಗೆ ನೌಕರಿಗೆ ಸಂಬಳವೇ ಕೊಡುವುದಿಲ್ಲ ಎಂದರು.
ಆದರೆ, ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರಿಗೆ ಸಾಲದ ಗ್ಯಾರಂಟಿ ನೀಡಿದೆ. ಈ ಹಿಂದೆ 2014ರವರೆಗೆ 54 ಲಕ್ಷ ಕೋಟಿ ಇತ್ತು. ಆದರೆ, ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹತ್ತು ವರ್ಷದಲ್ಲಿ 134 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದೀಗ ಪ್ರಚಾರಕ್ಕಾಗಿ 29 ರು.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸುತ್ತಿದ್ದಾರೆ. ಆದರೆ, ಅಕ್ಕಿಯೇ ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪಾಪ ಕುಮಾರಣ್ಣ ಹೆದರಿ ಮಂಡ್ಯಕ್ಕೆ ಓಟ: ಶಾಸಕ ಬಾಲಕೃಷ್ಣ ಲೇವಡಿ
ಕುಡಿವ ನೀರು, ಜಾನುವಾರು ಮೇವಿಗೆ ಆದ್ಯತೆ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ಮೇಲೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುಡಿವ ನೀರು ಪೂರೈಕೆ ಹಾಗೂ ಮೇವಿನ ವ್ಯವಸ್ಥೆಗಾಗಿ ಪ್ರತಿ ಪಂಚಾಯಿತಿಗೆ 10 ಲಕ್ಷ ರು, ತಾಲೂಕಿಗೆ 1 ಕೋಟಿ ರು.ಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳ ಖಾತೆಗೆ 10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮಕ್ಕೆ ಕಳೆದ ಸಾಲಿನಲ್ಲಿ 1 ಕೋಟಿ ರು. ಅನುದಾನ ನೀಡಲಾಗಿತ್ತು. ಇದರಲ್ಲಿ 49 ಹೊಸ ಬೋರ್‌ವೆಲ್ ಕೊರೆಸಲಾಗಿದೆ. ಅದೇ ರೀತಿ ಕೊಳವೆಬಾವಿ ದುರಸ್ತಿಗಾಗಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಕುಡಿಯುವ ನೀರು ಸರಬರಾಜು ಮಾಡಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್‌ನಲ್ಲಿ ಯಾವುದೇ ಸಂಸ್ಥೆಗಳು ಭಾಗವಹಿಸಿಲ್ಲ. ಆದ್ದರಿಂದ ತಾಪಂವಾರು ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮವಹಿಸಬೇಕು. ಯಾವುದೇ ಲೋಪದೋಷ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿ ಕ್ರಮವಹಿಸಲಾಗುವುದು ಎಂದರು.
ನಾನು ಉಡಾಫೆ ರಾಜಕಾರಣ ಮಾಡಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ
ಆನೆದಾಳಿ ನಿಯಂತ್ರಿಸಲು ಕ್ರಮ: ಜಿಲ್ಲೆಯು ಕಾವೇರಿ ಮತ್ತು ಬನ್ನೇರುಘಟ್ಟ ಅರಣ್ಯ ಪ್ರದೇಶಗಳನ್ನು ಒಳಗೊಂಡಿದ್ದು ಅಂದಾಜು 400 ಆನೆಗಳು ಇರುವುದಾಗಿ ಇವುಗಳಲ್ಲಿ 30ರಿಂದ 40 ಆನೆಗಳು ಹೆಚ್ಚಾಗಿ ಕಾವೇರಿ ಅರಣ್ಯ ಪ್ರದೇಶದಲ್ಲಿ ಓಡಾಟವಿರುತ್ತದೆ. ಈವೆರೆಗೆ 10 ಜನರು ಆನೆದಾಳಿಗೆ ಒಳಪಟ್ಟು ಮೃತಪಟ್ಟಿದ್ದಾರೆ. ಮೃತರಿಗೆ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೆ 33 ಕಿಮೀ ಬ್ಯಾರಿಕೇಡ್ ನಿರ್ಮಿಸಲು ಅನುಮತಿ ದೊರಕಿದ್ದು ಈ ಕಾಮಗಾರಿಯು ಪ್ರಗತಿಯಲಿದೆ ಎಂದು ತಿಳಿಸಿದರು.