
ಬೆಂಗಳೂರು, [ಫೆ.13]: ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಮರಳಿದ್ದಾರೆ.
ಮೈತ್ರಿ ಸರ್ಕಾರದ ಕಾರ್ಯವೈಖರಿ ತೃಪ್ತಿ ನೀಡಿಲ್ಲ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡು ಕಾಂಗ್ರೆಸ್, ಜೆಡಿಎಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದರು.
‘ಕೈ ನಾಯಕರಿಂದ ಮೋಸ’ ಡಿಕೆಶಿ ವಿರುದ್ಧ ಇನ್ನೋರ್ವ ಶಾಸಕ ಗರಂ!
ಇದೀಗ ಮತ್ತೆ ಕಾಂಗ್ರೆಸ್‌ನ ಸಹ ಸದಸ್ಯತ್ವವನ್ನು ಶಾಸಕ ನಾಗೇಶ್ ಸ್ವೀಕರಿಸಿದ್ದು, ಈ ಸಂಬಂಧ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಪತ್ರವನ್ನು ನೀಡಿದ್ದಾರೆ.
ಕಳೆದೊಂದು ತಿಂಗಳಿನಿಂದ ನಡೆದ ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾದಲ್ಲಿ ರಾಣೇಬೆನ್ನೂರು ಪಕ್ಷೇತರ ಶಾಸಕ ಆರ್. ಶಂಕರ್ ಹಾಗೂ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಇವರಿಬ್ಬರು ದೋಸ್ತಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದರು.
ಬಳಿಕ ಬಿಜೆಪಿ ನಾಯಕರ ಜೊತೆ ಸೇರಿಕೊಂಡು ಮೈತ್ರಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದರು. ಆದ್ರೆ ಈಗ ಬದಲಾದ ರಾಜಕೀಯ ಬೆಳವಣಿಗೆಯಿಂದ ಪುನಃ ಬೆಂಬಲ ಪತ್ರ ಹಿಡಿದು ಸಿದ್ದರಾಮಯ್ಯ ಮನೆ ಬಾಗಿಲಿಗೆ ಬಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.