ಬಿಜೆಪಿ ನೀಡಿದ್ದ ಭರವಸೆ ಹುಸಿ, ಮತ್ತೆ ಕಾಂಗ್ರೆಸ್ ಬಾಗಿಲು ಬಡಿದ ಮಾಜಿ ಸಚಿವ..!

By Suvarna News  |  First Published May 10, 2022, 12:02 PM IST

* ಆಪರಮೇಷನ್ ಕಲಮದ ವೇಳೆ ನೀಡಿದ್ದ ಭರವಸೆ ಹುಸಿ
* ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ರಾ ಮಾಜಿ ಸಚಿವ?
* ಸಿದ್ದರಾಮಯ್ಯರನ್ನ ಭೇಟಿ ಮಾಡಿ ಮಾತುಕತೆ


ಬೆಂಗಳೂರು, (ಮೇ.10): 2023ರ ವಿಧಾನಸಭಾ ಚುನಾವಣಗೆ ಒಂದು ವರ್ಷ ಬಾಕಿ ಇದೆ. ಆಗಲೇ ಪಕ್ಷಾಂತರ ಪರ್ವ ಶುರುವಾಗಿದೆ. ಇದಕ್ಕೆ ಪೂರಕ ಎಂಬಂತೆ ಬಿಜೆಪಿ ನಾಯಕ, ಮಾಜಿ ಸಚಿವ ನಾಗೇಶ್  ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಹೌದು.... ಸಚಿವ ಸ್ಥಾನ ಕಿತ್ತುಕೊಂಡಿದ್ದರಿಂದ ಅಸಮಾಧಾನಗೊಂಡಿರುವ ಮುಳಬಾಗಿಲು ಪಕ್ಷೇತರ ಶಾಸಕ ಎಚ್‌ ನಾಗೇಶ್,  ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Tap to resize

Latest Videos

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ನಾಗೇಶ್, ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳೂ ಅಲ್ಲ, ಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ನನಗೆ ಬೇಸರವೂ ಇಲ್ಲ ಎಂದು ಹೇಳಿದರು.

ಮಧ್ವರಾಜ್‌, ವರ್ತೂರ್‌ ಸೇರಿದಂತೆ ಸಪ್ತ ನಾಯಕರು ಕಮಲ ತೆಕ್ಕೆಗೆ!

ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ಕೊಡುತ್ತೇವೆ ಅಂತ ಹೇಳಿದರು. ಈವರೆಗೂ ಕೊಟ್ಟಿಲ್ಲ. ಏನಾಗುತ್ತೆ ಕಾದುನೋಡಬೇಕಿದೆ. ಕ್ಷೇತ್ರದ ಮುಖಂಡರನ್ನು ಭೇಟಿಯಾಗಿ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.  ಈ ಮೂಲಕ ಮಾಜಿ ಸಚಿವ ನಾಗೇಶ್ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರಾ ಎಂಬ ಕುತೂಹಲ ಹೆಚ್ಚಿದೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ಪತನವಾಗುವಲ್ಲಿ ಎಚ್‌. ನಾಗೇಶ್‌ ಅವರು ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ, ಮೊದಲು ಸಚಿವ ಸ್ಥಾನ ನೀಡಲಾಗಿತ್ತಾದರೂ, ಉಪಚುನಾವಣೆ ಬಳಿಕ ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ನಾಗೇಶ್‌ರನ್ನು ಸಂಪುಟದಿಂದ ಕೈಬಿಡಲಾಗಿತ್ತು.

ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಾಗ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ರು.  ಭರವಸೆ ಹುಸಿಯಾದ ಹಿನ್ನೆಲೆಯಲ್ಲಿ ನಾಗೇಶ್ ಕಾಂಗ್ರೆಸ್‌ ಬಾಗಿಲು ತಟ್ಟುತ್ತಿದ್ದಾರೆ. ಇದರಿಂದ ಮುಂದಿನ ಚುನಾವಣೆಗೆ ಟಿಕೆಟ್ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವೇಳೆ ಮುಳುಬಾಗಿಲು ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಒಪ್ಪಿಗೆ ಸೂಚಿಸಿದ್ರೆ, ನಾಗೇಶ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. 

ಕಳೆದ ಚುನಾವಣೆಯಲ್ಲಿ ಕೊತ್ತೂರು ಮಂಜುನಾಥ್‌ ಅವರ ಬೆಂಬಲದಿಂದ ನಾಗೇಶ್‌ ಅವರು ಗೆಲುವು ಸಾಧಿಸಿದ್ದರು. ಅದರಂತೆ ಆರಂಭದಲ್ಲಿ ಸ್ನೇಹದಿಂದಿದ್ದ ನಾಗೇಶ್‌ ನಂತರದಲ್ಲಿ ತಮ್ಮ ಬೆಂಬಲಿಗರಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲವೆಂದು ಬೇಸರ ವ್ಯಕ್ತ ಪಡಿಸಿದ್ದ ಕೊತ್ತೂರು ಮಂಜುನಾಥ್‌ ಅವರು, ನಾಗೇಶ್‌ ಜತೆಗಿನ ಸ್ನೇಹ ಬಂಧವನ್ನು ಕಡಿದುಕೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರ ಬೆಂಬಲ ಯಾರಿಗೆ ಎಂಬುದು ಪ್ರಶ್ನೆಯಾಗಿದೆ.

ಆಪರೇಷನ್ ಕಮಲ
ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಈಗಾಗಲೇ ತಂತ್ರಗಾರಿಕೆ ಆರಂಭಿಸಿದೆ. ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಕಡೆಗಳಲ್ಲಿ ಮತಬೇಟೆಗಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಖಾಡಕ್ಕಿಳಿದಿದ್ದಾರೆ.

ಹೌದು....ಸಿಎಂ ಬೊಮ್ಮಾಯಿ ಸೈಲೆಂಟ್ ಆಗಿಯೇ ಎಲೆಕ್ಷನ್ ತಯಾರಿ ನಡೆಸಿದ್ದಾರೆ. ಎಲ್ಲಾ ಕ್ಷೇತ್ರಗಳ ಲೆಕ್ಕಾಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ತಯಾರಿ ನಡೆಸಿದ್ದಾರೆ. ಹಾಗೇ ಸೈಲೆಂಟ್ ಆಗಿ ಆಪರೇಷನ್ ಕಮಲ ಮಾಡುತ್ತಿದ್ದಾರೆ. 

ಇದರ ಭಾಗವಾಗಿ ಶನಿವಾರ ಮಾಜಿ ಸಚಿವ ಮತ್ತು ಕಾಂಗ್ರೆಸ್‌ ಮುಖಂಡ ಪ್ರಮೋದ್‌ ಮಧ್ವರಾಜ್‌ (Pramod Madhwaraj ), ಮಾಜಿ ಸಚಿವ ವರ್ತೂರು ಪ್ರಕಾಶ್‌ (Varthur Prakash), ಜೆಡಿಎಸ್‌ನ ಸಂದೇಶ್‌ ನಾಗರಾಜ್‌ (Sandesh Nagaraj) ಸೇರಿದಂತೆ ಏಳು ಮಂದಿ ನಾಯಕರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

click me!