
ಬೆಂಗಳೂರು (ಜು.19): ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯ ದಾಳಿಯಿಂದ ವಿಪತ್ತಿನಲ್ಲಿರುವ ದೇಶವನ್ನು ರಕ್ಷಿಸಲು ಒಟ್ಟಾಗಿದ್ದೇವೆ. ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟಕ್ಕೆ ಇಂಡಿಯಾಗೆ (ಐಎನ್‌ಡಿಐಎ ಕೂಟ) ಸವಾಲು ಹಾಕಲು ಸಾಧ್ಯವೇ? ಎನ್‌ಡಿಎ ವಿರುದ್ಧ ಇಂಡಿಯಾ ಗೆಲ್ಲಲಿದೆ. ನಿಮ್ಮ ಕೈಲಾದರೆ ನಮ್ಮನ್ನು ಹಿಡಿಯಿರಿ’ ಎಂದು ಟಿಎಂಸಿ ವರಿಷ್ಠೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜನರಿಂದ ಆಯ್ಕೆಯಾದ ಪ್ರಜಾಸತ್ತಾತ್ಮಕ ಸರ್ಕಾರ ಬೀಳಿಸುವುದು, ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದೇ ಕೇಂದ್ರದ ಕೆಲಸವಾಗಿದೆ.
ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಾತ್ಮಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಇಂದು ನಾವೆಲ್ಲರೂ ಸೇರಿ ‘ಇಂಡಿಯಾ’ - (ಐಎನ್‌ಡಿಐಎ) ಹೆಸರಿನ ಮೈತ್ರಿಕೂಟವನ್ನು ಸ್ಥಾಪಿಸಿದ್ದೇವೆ. ಬಿಜೆಪಿ ಹಾಗೂ ಎನ್‌ಡಿಎ ಇಂಡಿಯಾ ಸವಾಲನ್ನು ಎದುರಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. ಈ ಹೋರಾಟದಲ್ಲಿ ಇಂಡಿಯಾ ಗೆಲ್ಲಲಿದೆ ಎನ್‌ಡಿಎ ಸೋಲಲಿದೆ. ಭಾರತ ಗೆಲ್ಲಲಿದೆ, ಬಿಜೆಪಿ ಸೋಲಲಿದೆ. ಬಿಜೆಪಿ ಸೋಲಿಗೆ ಇಂದಿನಿಂದ ನಾಂದಿ ಶುರುವಾಗಿದೆ. ನಿಮ್ಮ ಕೈಲಾದರೆ ನಮ್ಮನ್ನು ಹಿಡಿಯರಿ. ನಿಜವಾದ ತಾಯಿ ನೆಲದ ಮೇಲಿನ ಪ್ರೀತಿ ಹಾಗೂ ದೇಶಭಕ್ತಿ ಇರುವವರು ನಾವು.
ಮದ್ಯದ ಬೆಲೆ ಹೆಚ್ಚಳದಿಂದ ಬಡವರಿಗೆ ಸಮಸ್ಯೆ: ಶಾಸಕ ಕೃಷ್ಣಪ್ಪ
ಹೀಗಾಗಿ ದೇಶದ ಉಳಿವಾಗಿ ಒಂದಾಗಿದ್ದೇವೆ ಎಂದರು. ನಮ್ಮ ಮೈತ್ರಿ 26 ಪಕ್ಷಗಳ ನಡುವೆ ನಡೆದಿದೆ. ಮೊದಲು ಯುಪಿಎ ಹೆಸರಿನಲ್ಲಿ ಇತ್ತು. ಈಗ ಹೊಸ ಹೆಸರಿನಿಂದ ಬಂದಿದ್ದೇವೆ. ಎನ್‌ಡಿಎ ಈ ಹಿಂದೆ ಇತ್ತು, ಆದರೆ ಇಷ್ಟುದಿನ ಅಸ್ತಿತ್ವದಲ್ಲಿ ಇರಲಿಲ್ಲ. ದಲಿತರು, ಅಲ್ಪಸಂಖ್ಯಾತರು, ಹಿಂದೂ, ಮುಸಲ್ಮಾನ, ಸಿಖ್ ಸಮುದಾಯಗಳಲ್ಲಿ, ಅರುಣಾಚಲ ಪ್ರದೇಶ, ಮಣಿಪುರ, ಉತ್ತರ ಪ್ರದೇಶ, ದೆಹಲಿ, ಬಂಗಾಳ, ಬಿಹಾರ, ಮಹಾರಾಷ್ಟ್ರ ಎಲ್ಲ ಕಡೆ ಅಪಾಯವಿದೆ. ಇವುಗಳಿಂದ ಅಪಾಯದ ಸ್ಥಿತಿಯಲ್ಲಿರುವ ದೇಶ ಉಳಿಸಬೇಕಿದೆ ಎಂದರು.
‘ಇದು ಬಿಜೆಪಿ ಹಾಗೂ ವಿರೋಧಪಕ್ಷಗಳ ನಡುವಿನ ಹೋರಾಟವಲ್ಲ. ದೇಶದ ಧ್ವನಿಯಾಗಿ ಹೋರಾಟ ಮಾಡುತ್ತಿರುವುದರಿಂದ ಈ ಹೆಸರು (ಇಂಡಿಯಾ) ಆಯ್ದುಕೊಳ್ಳಲಾಗಿದೆ. ಇದು ಎನ್‌ಡಿಎ ಹಾಗೂ ಇಂಡಿಯಾ ನಡುವಿನ ಹೋರಾಟ. ಹಿಂದೂಸ್ತಾನದ ವಿರುದ್ಧ ಯಾರೇ ಹೋರಾಟ ಮಾಡಿದರೂ ಗೆಲುವು ಯಾರದ್ದಾಗಲಿದೆ ಎಂಬುದು ಈಗಾಗಲೇ ಸಾಬೀತಾಗಿದೆ. ಈ ನಿಟ್ಟಿನಲ್ಲಿ ಮುಂಬೈ ಸಭೆಯಲ್ಲಿ ಕಾರ್ಯಸೂಚಿ ಸಿದ್ಧಪಡಿಸುತ್ತೇವೆ.
- ರಾಹುಲ್‌ಗಾಂಧಿ, ಕಾಂಗ್ರೆಸ್ ನಾಯಕ
ಒಂಬತ್ತು ವರ್ಷಗಳ ಆಡಳಿತದಲ್ಲಿ ಬಿಜೆಪಿಗೆ ದೇಶಕ್ಕಾಗಿ ಕೆಲಸ ಮಾಡಲು ಅವಕಾಶಗಳಿದ್ದವು. ಆದರೆ ಅವರು ಎಲ್ಲಾ ಕ್ಷೇತ್ರಗಳನ್ನು ಬರ್ಬಾದ್ ಮಾಡಿದರು. ರೈಲ್ವೇ, ಆರ್ಥಿಕತೆ, ವಿಮಾನ ನಿಲ್ದಾಣ, ಭೂಮಿ, ಆಕಾಶ, ಪಾತಾಳ ಎಲ್ಲವನ್ನೂ ಮಾರಿದ್ದಾರೆ. ಇದರಿಂದ ದೇಶದಲ್ಲಿ ಯುವಕರು, ರೈತರು, ಕೈಗಾರಿಕೆ, ಮಹಿಳೆಯರು, ಕಾರ್ಮಿಕರು ಎಲ್ಲರೂ ಬೇಸತ್ತಿದ್ದಾರೆ. ಇಂತಹ ದೇಶವಿರೋಧಿ ಸರ್ಕಾರವನ್ನು ಕಿತ್ತೊಗೆಯಲು 26 ಪಕ್ಷಗಳು ಒಂದಾಗಿದ್ದೇವೆ.
- ಅರವಿಂದ ಕೇಜ್ರಿವಾಲ್, ಆಪ್ ಸಂಚಾಲಕ
ಸಿದ್ದು ಸಿಎಂ ಆಗಿದ್ದಕ್ಕೆ ಸೌದಿಯಿಂದ ಬಂದು ಹರಕೆ ತೀರಿಸಿದ ಅಭಿಮಾನಿ(https://kannada.asianetnews.com/state/fan-offered-vow-to-god-because-siddaramaiah-become-cm-again-gvd-ry126b)
ನಮ್ಮ ರಾಜತಂತ್ರದಲ್ಲಿ ವಿಭಿನ್ನ ವಿಚಾರಧಾರೆಗಳು ಇರಬೇಕು. ಈ ವಿಭಿನ್ನತೆ ನಡುವೆ ನಾವು ಒಂದಾಗಿರುವುದಕ್ಕೆ ಕಾರಣ ನಮಗಾಗಿ ಅಲ್ಲ, ನಮ್ಮ ಪರಿವಾರದಂತಿರುವ ದೇಶವನ್ನು ರಕ್ಷಿಸಲು. ಮುಂದೇನಾಗಲಿದೆ ಎಂದು ಭಯಭೀತರಾಗಿರುವ ಜನರಲ್ಲಿ ವಿಶ್ವಾಸ ಮೂಡಿಸಲು ನಾವು ಇಲ್ಲಿ ಸೇರಿದ್ದೇವೆ. ಓರ್ವ ವ್ಯಕ್ತಿ ಅಥವಾ ಪಕ್ಷ ಇಡೀ ದೇಶವಾಗಲು ಸಾಧ್ಯವಿಲ್ಲ. ನಾವೆಲ್ಲರೂ ಸೇರಿ ದೇಶವನ್ನು ಸುರಕ್ಷಿತವಾಗಿಡುತ್ತೇವೆ.
- ಉದ್ಧವ್ ಠಾಕ್ರೆ, ಶಿವಸೇನೆ (ಉದ್ಧವ್ ಬಣ) ನಾಯಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.