
ಬೆಂಗಳೂರು (ಜೂ, 30); ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (National General Secretary of the Indian Youth Congress) ಎಂ.ಎಸ್. ರಕ್ಷಾ ರಾಮಯ್ಯ ( Raksha Ramaiah) ಅವರಿಗೆ ಆಂಧ್ರ ಪ್ರದೇಶ ರಾಜ್ಯದ ಉಸ್ತುವಾರಿ ನೀಡಲಾಗಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ನ ಹಲವು ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ ಕೊಟ್ಟಿದ್ದು, ರಕ್ಷಾ ರಾಮಯ್ಯ ಅವರಿಗೆ ಪಕ್ಕದ ಆಂಧ್ರಪ್ರದೇಶದಲ್ಲಿ ಯುವ ಕಾಂಗ್ರೆಸ್ ವ್ಯವಹಾರಗಳನ್ನು ನೋಡಿಕೊಳ್ಳುವ ಉಸ್ತುವಾರಿ ವಹಿಸಲಾಗಿದೆ.
ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಬೇರುಗಳು ಗಟ್ಟಿಯಾಗಿದ್ದು, ಯುವ ಕಾಂಗ್ರೆಸ್ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢ ಮತ್ತು ಪ್ರಬಲವಾಗಿ ಸಂಘಟಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ರಕ್ಷಾ ರಾಮಯ್ಯ ಹೇಳಿದ್ದಾರೆ.
ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್‌ಗೆ 120+ ಸೀಟು: ಬಿಜೆಪಿಗೆ ಕೇವಲ 70, ಆಂತರಿಕ ಸಮೀಕ್ಷೆ
ತಮಗೆ ನೂತನ ಜವಾಬ್ದಾರಿ ವಹಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲವಾರು ಅವರಿಗೆ ರಕ್ಷಾ ರಾಮಯ್ಯ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ. ಒಂದು ವರ್ಷ ರಕ್ಷಾ ರಾಮಯ್ಯ ಭಾರತೀಯ ಯುವ ಕಾಂಗ್ರೆಸ್‌ನ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಜೂನ್ ತಿಂಗಳ ಮೊದಲ ವಾರದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.