ಕರ್ನಾಟಕಕ್ಕೆ ಕೇಂದ್ರದಿಂದ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್‌

By Kannadaprabha News  |  First Published Feb 6, 2024, 9:57 PM IST

ದೆಹಲಿಯ ಪ್ರತಿಭಟನೆಗೆ ಬೆಳಗಾವಿ ಜಿಲ್ಲೆಯಿಂದ 11 ಶಾಸಕರು, ಇಬ್ಬರು ವಿಧಾನಪರಿಷತ್‌ ಸದಸ್ಯರು ಸೇರಿದಂತೆ ನಾನು ಮತ್ತು ಸಚಿವ ಸತೀಶ್‌ ಜಾರಕಿಹೊಳಿಯವರು ತೆರಳುತ್ತಿದ್ದೇವೆ. ರಾಜ್ಯ ಕಾಂಗ್ರೆಸ್ಸಿನ 136 ಶಾಸಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಎಲ್ಲರೂ ಒಟ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್‌ 
 


ಬೆಳಗಾವಿ(ಫೆ.06): ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ ವಿರೋಧಿಸಿ ಫೆ.7ರಂದು ದೆಹಲಿಯ ಜಂತರ್‌ ಮಂತರ್‌ ಮುಂದೆ ರಾಜ್ಯ ಸರ್ಕಾರ ನಡೆಸಲು ನಿರ್ಧರಿಸಿರುವ ಪ್ರತಿಭಟನೆಯಲ್ಲಿ ತಾವು ಕೂಡ ಭಾಗವಹಿಸುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್‌ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿಯ ಪ್ರತಿಭಟನೆಗೆ ಬೆಳಗಾವಿ ಜಿಲ್ಲೆಯಿಂದ 11 ಶಾಸಕರು, ಇಬ್ಬರು ವಿಧಾನಪರಿಷತ್‌ ಸದಸ್ಯರು ಸೇರಿದಂತೆ ನಾನು ಮತ್ತು ಸಚಿವ ಸತೀಶ್‌ ಜಾರಕಿಹೊಳಿಯವರು ತೆರಳುತ್ತಿದ್ದೇವೆ. ರಾಜ್ಯ ಕಾಂಗ್ರೆಸ್ಸಿನ 136 ಶಾಸಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಎಲ್ಲರೂ ಒಟ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

Tap to resize

Latest Videos

ಕಾಂಗ್ರೆಸ್‌ ಪಂಚ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ: ಸಚಿವ ಸತೀಶ್‌ ಜಾರಕಿಹೊಳಿ

ರಾಜ್ಯಕ್ಕೆ ಕೇಂದ್ರದಿಂದ ಪದೇ ಪದೇ ಅನ್ಯಾಯವಾಗುತ್ತಿದೆ. ಅಂಕಿ ಅಂಶಗಳ ಸಮೇತ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ, ರಾಜ್ಯದಲ್ಲಿ ಸದ್ಯ ಉಂಟಾಗಿರುವ ಬರ ಪರಿಸ್ಥಿತಿಯಲ್ಲೂ ಜನರ ಸಹಾಯ, ಸಹಕಾರಕ್ಕೆ ಕೇಂದ್ರ ಬರಲಿಲ್ಲವೆಂದರೆ ಹೇಗೆ? ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವಾ ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದರು.

ಕೇಂದ್ರ ಸರ್ಕಾರ 3 ಕೋಟಿ ಮನೆಗೆ ಉಚಿತ ವಿದ್ಯುತ್‌ ನೀಡುವ ಗ್ಯಾರಂಟಿ ಯೋಜನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ 165 ಗ್ಯಾರಂಟಿಗಳನ್ನು ಅಂದರೆ ಭಾಗ್ಯಗಳನ್ನು ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದರು. ಆ ಐದು ವರ್ಷದಲ್ಲಿ 158 ಗ್ಯಾರಂಟಿಗಳನ್ನು ಈಡೇರಿಸಿದ್ದರು. ಈಗ ಪಂಚ ಗ್ಯಾರಂಟಿಗಳನ್ನು ಘೋಷಿಸಿ, ಸಮರ್ಪಕವಾಗಿ ಜನರಿಗೆ ನೀಡಿದ್ದೇವೆ. ಈ ಗ್ಯಾರಂಟಿ ಎನ್ನುವ ಶಬ್ಧ ಯಾರಿಂದ ಬಂತು? ಕಾಂಗ್ರೆಸ್ಸಿನಿಂದಲೇ ಅದೂ ಕರ್ನಾಟಕದಿಂದಲೇ ಬಂತು. ಈಗ ದೊಡ್ಡ ದೊಡ್ಡ ಪೋಸ್ಟರ್‌ಗಳಲ್ಲಿ ಮೋದಿ ಗ್ಯಾರಂಟಿ- ಓಟು ಗ್ಯಾರಂಟಿ ಎಂದೆಲ್ಲ ಬರೆದುಕೊಳ್ಳುತ್ತಿದ್ದಾರಲ್ಲ? ಇದು ಯಾರ ಗ್ಯಾರಂಟಿ. ಇದನ್ನು ನಾವು ಕಳ್ಳತನ ಎನ್ನುವುದಿಲ್ಲ. ಎಲ್ಲರಿಗೂ ಗ್ಯಾರಂಟಿಯೇ ಅಸ್ತ್ರ ಆಗಿದೆ ಹೇಳಲು ಇಚ್ಚಿಸುತ್ತೇನೆ ಅಷ್ಟೇ ಎಂದು ಸಚಿವರು ಹೇಳಿದರು.

ಲಕ್ಷ್ಮಣ ಸವದಿ ಕಾಂಗ್ರೆಸ್‌ ಬಿಡುವುದಿಲ್ಲ:

ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ಸೇರುತ್ತಾರೆಂಬ ಚರ್ಚೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಈ ವಿಷಯ ಖಂಡಿತ ತಮ್ಮ ಗಮನಕ್ಕೆ ಬಂದಿಲ್ಲ. ಅವರು ಕಾಂಗ್ರೆಸ್ಸಿಗೆ ಬರುವ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಪಾತ್ರ ನಿರ್ವಹಿಸಿದ್ದೆವು. ಏನೇ ಹೇಳಿ, ಯಾವುದೇ ಕಾರಣಕ್ಕೂ ಲಕ್ಷ್ಮಣ ಸವದಿಯವರು ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

click me!