
ಕಲಬುರಗಿ (ಮಾ.08): ಪಂಚಾಯತಿಯಿಂದ ಪಾರ್ಲಿಮೆಂಟ್ ವರೆಗೂ ಹೆಣ್ಣು ಮಕ್ಕಳಿಗೆ ಮೀಸಲಾತಿ ಕಲ್ಪಿಸಿದೆ. ಮುಂದಿನ ದಿನದಲ್ಲಿ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಸಿಗುವುದು ಶತಸಿದ್ಧ, ಅಧಿಕಾರ ಚಲಾಯಿಸಲು ನೀವು ಸಿದ್ಧರಾಗಿ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹಿಳೆಯರಿಗೆ ಕರೆ ನೀಡಿದರು. ಶನಿವಾರ ಇಲ್ಲಿನ ಪಿ.ಡಿ.ಎ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ "ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಹಿಳೆಯರ ಉನ್ನತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಹೆಣ್ಣನ್ನು ತಾಯಿಗೆ ಮತ್ತು ಭೂಮಿ ತಾಯಿಗೆ ಹೋಲಿಸಿ ಗೌರವ ನೀಡುವ ಸಂಸ್ಕೃತಿ ನಮ್ಮದಾಗಿದೆ. ಹೆಣ್ಣು ಬೆಳೆದರೆ ಸಮಾಜ ಬೆಳೆಯುತ್ತದೆ ಎಂಬ ನಂಬಿಕೆಯಿಂದಲೆ ಮಹಿಳಾ ಕೇಂದ್ರಿತವಾಗಿ ಆರ್ಥಿಕ ಶಕ್ತಿ ತುಂಬುವ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದ ಅವರು, ಹೆಣ್ಣು ಬೆಳೆದರೆ ಒಂದು ಕುಟುಂಬ ಬೆಳೆದಂತೆ ಎಂದರು.
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ಆಗಿಲ್ಲ: ಡಿ.ಕೆ. ಶಿವಕುಮಾರ್
ವಾಪಸ್ ಹೋದ ಡಿಸಿಎಂ ಡಿಕೆಶಿ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚಿಸಲು ಬಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗದೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತೊಮ್ಮೆ ಮುನಿಸು ಹೊರಹಾಕಿದ್ದಾರೆ. ವಿಧಾನಸೌಧದಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚಿಸುವಂತೆ ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜಣ್ಣ ಅವರ ಕಚೇರಿಗೆ ತೆರಳಿದ್ದರು. ಈ ವೇಳೆ ತಮ್ಮೊಂದಿಗೆ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಶಾಸಕರನ್ನೂ ಕರೆದುಕೊಂಡು ಹೋಗಿದ್ದರು.
3 ತಿಂಗಳಲ್ಲಿ ಪಕ್ಷ ಸಂಘಟಿಸದಿದ್ದರೆ ಅಭ್ಯರ್ಥಿ ಬದಲಾವಣೆ: ಡಿ.ಕೆ. ಶಿವಕುಮಾರ್
ಆದರೆ, ಸಂಜೆ 6 ಗಂಟೆವರೆಗೂ ಕಚೇರಿಯಲ್ಲೇ ಇದ್ದ ರಾಜಣ್ಣ ಅವರು, ಡಿ.ಕೆ.ಶಿವಕುಮಾರ್ ತಮ್ಮ ಕೊಠಡಿಗೆ ಬರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಕಚೇರಿಯಿಂದ ಹೊರಗೆ ತೆರಳಿದವರು ಮತ್ತೆ ಬರಲೇ ಇಲ್ಲ. ಆ ನಂತರ ಶಿವಕುಮಾರ್ ಮತ್ತು ಸಹಕಾರಿ ಕ್ಷೇತ್ರ ಶಾಸಕರು ರಾಜಣ್ಣ ಅವರಿಗಾಗಿ ಕಾದು ಕುಳಿತರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ನಂತರ ಶಿವಕುಮಾರ್ ಅವರೇ ಅಪೆಕ್ಸ್‌ಬ್ಯಾಂಕ್ ನಿರ್ದೇಶಕರೊಂದಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ಕೆಲಹೊತ್ತು ಮಾತುಕತೆ ನಡೆಸಿದರು ಎನ್ನಲಾಗಿದೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.