ವಿಕಸಿತ ಭಾರತ ಸಂಕಲ್ಪ ಯಾತ್ರೆಯಿಂದ ಕೇಂದ್ರದ ಯೋಜನೆಗಳ ಪರಿಚಯ: ಸಚಿವ ನಾರಾಯಣಸ್ವಾಮಿ

Published : Dec 10, 2023, 09:43 PM IST
ವಿಕಸಿತ ಭಾರತ ಸಂಕಲ್ಪ ಯಾತ್ರೆಯಿಂದ ಕೇಂದ್ರದ ಯೋಜನೆಗಳ ಪರಿಚಯ: ಸಚಿವ ನಾರಾಯಣಸ್ವಾಮಿ

ಸಾರಾಂಶ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಜನಪ್ರಿಯ ಯೋಜನೆಗಳನ್ನು ದೇಶದ ಎಲ್ಲಾ ಮನೆಗಳಿಗೆ ತಲುಪಿಸುವ ಉದ್ದೇಶವನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ಹೊಂದಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. 

ಸಿರಿಗೆರೆ (ಡಿ.10): ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಜನಪ್ರಿಯ ಯೋಜನೆಗಳನ್ನು ದೇಶದ ಎಲ್ಲಾ ಮನೆಗಳಿಗೆ ತಲುಪಿಸುವ ಉದ್ದೇಶವನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ಹೊಂದಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದರು. ಸಮೀಪದ ಚಿಕ್ಕಬೆನ್ನೂರು ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ದೇಶದ ಎಲ್ಲಾ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶ ಎಂದರು.

ದೇಶದಲ್ಲಿ ಒಂಬತ್ತು ವರ್ಷದಲ್ಲಿ ೭೪ ವಿಮಾನ ನಿಲ್ದಾಣಗಳನ್ನು ಆರಂಭಿಸಲಾಗಿದೆ. ಗುಣಮಟ್ಟದ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಆಗಿದೆ. ಐಐಟಿ, ಮೆಡಿಕಲ್‌ ಕಾಲೇಜುಗಳ ಆರಂಭವಾಗಿವೆ. ದೇಶದ ಬಡವರ ಸಂಕಷ್ಟ, ರೈತರ ಸಮಸ್ಯೆಗಳನ್ನು ಅರಿತು ಪಿಎಂ ಕೃಷಿ ಸಮ್ಮಾನ್‌, ಫಸಲ್‌ ಬಿಮಾ, ರಸಾಯನಿಕ ಗೊಬ್ಬರದ ಸಬ್ಸಿಡಿ, ಪ್ರತಿ ಮನೆಗೂ ಶೌಚಾಲಯ, ಪಿಎಂ ಆವಾಜ್‌ ಯೋಜನೆ, ಉಜ್ವಲ ಯೋಜನೆಯಡಿ ಉಚಿತ ಅಡಿಗೆ ಅನಿಲ ಸಂಪರ್ಕ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸಲು ರಥಯಾತ್ರೆ: ಸಂಸದ ಮುನಿಸ್ವಾಮಿ

ಕಾರ್ಯಕ್ರಮದಲ್ಲಿ ಚಿಕ್ಕಬೆನ್ನೂರು ಗ್ರಾಪಂ ಅಧ್ಯಕ್ಷೆ ಮಂಜುಳಾ, ಕರ್ನಾಟಕ ಗ್ರಾಮೀಣ ಬ್ಯಾಂಕ ಕೇಂದ್ರ ಕಚೇರಿ ಬಳ್ಳಾರಿಯ ಪ್ರಧಾನ ವ್ಯವಸ್ಥಾಪಕಿ ಭಾಗ್ಯ ರೇಖಾ, ಬೆಂಗಳೂರು ದೂರದರ್ಶನದ ಡಿಡಿಜಿ ಮಾಧವ ರೆಡ್ಡಿ, ಚಿತ್ರದುರ್ಗದ ವಿಶ್ವಬಂಧು ಸಹಕಾರ ಬ್ಯಾಂಕಿನ ಅಧ್ಯಕ್ಷ ಜಿ.ಬಿ. ತೀರ್ಥಪ್ಪ, ಬಿಜೆಪಿ ಯುವ ಮೋರ್ಚಾದ ಶೈಲೇಶ್‌ ಕುಮಾರ್‌, ಚಿತ್ರದುರ್ಗ ಕೆನರಾ ಬ್ಯಾಂಕಿನ ವ್ಯವಸ್ಥಾಪಕ ವೈ.ಎನ್.‌ ಶಿವಪ್ರಸಾದ್‌, ಪ್ರಾದೇಶಿಕ ವ್ಯವಸ್ಥಾಪಕ ಹರಿಪ್ರಸಾದ್‌, ಲೀಡ್‌ ಬ್ಯಾಂಕ್‌ ಜಿಲ್ಲಾ ವ್ಯವಸ್ಥಾಪಕ ತಿಪ್ಪೇಶ್‌ ಸೇರಿದಂತೆ ಇತರರು ಭಾಗವಹಿಸಿದ್ದರು.

ಕೆಂಪೇಗೌಡರ ಊರಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ: ಪ್ರಧಾನಿ ನರೇಂದ್ರ ಮೋದಿರವರ ಕನಸೆಂದರೆ ಅದು ವಿಶ್ವ ಭೂಪಟದಲ್ಲಿ ನಮ್ಮ ಭಾರತ ವಿಶ್ವಗುರುವಾಗಬೇಕು ಎಂಬುದಾಗಿದೆ. ಇದಕ್ಕೆ ಭಾರತೀಯ ಪ್ರಜೆಗಳ ಸಹಕಾರ ಮುಖ್ಯ ಎಂದು ಕೇಂದ್ರ ವಿಮಾನಯಾನ ಸಚಿವ ಹಾಗೂ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯ ತಿಳಿಸಿದರು. ನಾಡ ಪ್ರಭು ಕೆಂಪೇಗೌಡರ ಪೂರ್ವಜರ ಊರು ಆವತಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಪ್ರಧಾನಿಯ ಜನ ಪರ ಯೋಜನೆಗಳಾದ ಮುದ್ರಾ, ಜನ್‌ಧನ್‌, ವಿಶ್ವಕರ್ಮ ಯೋಜನೆಗಳು ಸೇರಿದಂತೆ ಅನೇಕ ಜನಪರ, ಜನತಾ ಕಲ್ಯಾಣ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಬೇಕು ಎಂದವರು ಸಲಹೆ ನೀಡಿದರು.

ಸ್ವಾತಂತ್ರ್ಯಬಂದ 58 ವರ್ಷಗಳಲ್ಲಿ ಕಾಂಗ್ರೆಸ್‌ ಸರ್ಕಾರ 3 ಕೋಟಿ ಆವಾಜ್‌ ಯೋಜನೆ ನೀಡಿದ್ದಾರೆ. ಆದರೆ ನರೇಂದ್ರ ಮೋದಿ ಸರ್ಕಾರದಿಂದ ಕೇವಲ ಒಂಬತ್ತು ವರ್ಷಗಳಲ್ಲಿ 3500 ಪ್ರಧಾನ ಮಂತ್ರಿ ಆವಾಜ್‌ ಯೋಜನೆ ನೀಡಲಾಗಿದೆ ಎಂದರಲ್ಲದೆ, ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಬಡವನಿಗೆ ಶೇ.15 ರು. ಮಾತ್ರ ತಲುಪುತ್ತಿತ್ತು. ಆದರೆ, ಮೋದಿ ಸರ್ಕಾರದಲ್ಲಿ ನೂರಕ್ಕೇ ನೂರು ಬಡವನಿಗೆ ತಲುಪುತ್ತಿದೆ. ಇನ್ನೂ ಅನೇಕ ಜನಪರ ಯೋಜನೆಗಳಿಂದ ವಂಚಿತರಾದವರಿಗೆ ಫಲಾನುಭವಿಗಳಿಗೆ ಅದರ ಲಾಭ ದೊರೆಯ ಬೇಕು ಎಂದು ಹೇಳಿದರು.

ನಮ್ಮ ಸಮಸ್ಯೆ ನಾವು ಪಕ್ಷದಲ್ಲಿಯೇ ಪರಿಹರಿಸಿಕೊಳ್ಳುತ್ತೇವೆ: ಸಚಿವ ಎಂ.ಬಿ.ಪಾಟೀಲ್‌

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿರವರ ಕನಸು ಈ ದೇಶದ ಕಟ್ಟಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಸವಲತ್ತುಗಳು ದೊರಕಬೇಕು ಎಂಬುದು. ಈ ದೇಶದ ಪ್ರತಿ ಹಳ್ಳಿಯೂ ಅಭಿವೃದ್ಧಿಯಾದರೆ ಮಾತ್ರವೇ ದೇಶ ಅಭಿವೃದ್ಧಿಯಾಗಲು ಸಾಧ್ಯ. ಈ ಪರಿಕಲ್ಪನೆಯನ್ನು ಇಟ್ಟುಕೊಂಡು ಮೋದಿ ರವರು ಕಳೆದ ಒಂಬತ್ತುವರೆ ವರ್ಷಗಳಿಂದ ನಿರಂತರವಾಗಿ ತೊಡಗಿದ್ದಾರೆ, ಒಂದು ದಿನವೂ ರಜೆ ಪಡೆಯದೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ