ಲೋಕಸಭೆ ಚುನಾವಣೆಯಲ್ಲಿ ನಾನು ಸೇರಿ ಸಚಿವರು ಪ್ರತಿನಿಧಿಸುವ 17 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ಕ್ಷೇತ್ರಗಳ ಕುರಿತು ಆತ್ಮಾವಲೋಕನ ಅಗತ್ಯ. ಈ ಬಗ್ಗೆ ಪಕ್ಷದ ಸೂಚನೆಯನ್ನು ಎಲ್ಲರೂ ಪಾಲಿಸುತ್ತೇವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು (ಜೂ.10): ಲೋಕಸಭೆ ಚುನಾವಣೆಯಲ್ಲಿ ನಾನು ಸೇರಿ ಸಚಿವರು ಪ್ರತಿನಿಧಿಸುವ 17 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ಕ್ಷೇತ್ರಗಳ ಕುರಿತು ಆತ್ಮಾವಲೋಕನ ಅಗತ್ಯ. ಈ ಬಗ್ಗೆ ಪಕ್ಷದ ಸೂಚನೆಯನ್ನು ಎಲ್ಲರೂ ಪಾಲಿಸುತ್ತೇವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಚುನಾವಣೆಯಲ್ಲಿ ಸ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲೀಡ್ ಕೊಡಿಸಲು 17 ಸಚಿವರು ವಿಫಲರಾಗಿದ್ದು, ಈ ಬಗ್ಗೆ ರಾಹುಲ್ ಗಾಂಧಿ ವರದಿ ನೀಡುವಂತೆ ಸೂಚಿಸಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಸಚಿವರ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿರುವ ಬಗ್ಗೆ ಪರಿಶೀಲನೆ, ಆತ್ಮಾವಲೋಕನ ಅಗತ್ಯ. ನಾವೆಲ್ಲರೂ ಇದನ್ನು ಒಪ್ಪಿದ್ದೇವೆ. ಈ ಬಗ್ಗೆ ಪಕ್ಷದ ಸೂಚನೆಯನ್ನು ಪಾಲಿಸುತ್ತೇವೆ ಎಂದು ಹೇಳಿದರು.
ವಾಲ್ಮೀಕಿ ಕೇಸ್ ಹಸ್ತಾಂತರಕ್ಕೆ ಸಿಬಿಐ ಪತ್ರ ಬಂದಿಲ್ಲ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ತನಿಖೆ ಹಸ್ತಾಂತರ ಕುರಿತಂತೆ ಸಿಬಿಐನಿಂದ ಈವ ರೆಗೂ ಅಧಿಕೃತ ಪತ್ರ ಬಂದಿಲ್ಲ. ಬಂದರೆ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಹೇಳಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಶೀಘ್ರ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇವೆ ಎಂದೂ ಅವರು ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಅವರು, ಪ್ರಕರಣಕ್ಕೆ ಮಾತನಾಡಿದ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ.
undefined
ವಾಲ್ಮೀಕಿ ನಿಗಮ ಕೇಸ್ ತನಿಖೆಗೆ ಸಿಬಿಐನಿಂದ ಪತ್ರ ಬಂದಿಲ್ಲ: ಸಚಿವ ಪರಮೇಶ್ವರ್
ಹೀಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ರಾಜೀನಾಮೆಗೆ ಒತ್ತಾಯಿಸುವುದು ಸರಿಯಲ್ಲ ತನಿಖಾವರದಿ ಬರುವವರೆಗೂ ತಾಳ್ಮೆ ಅಗತ್ಯ ಎಂದು ಹೇಳಿದರು. ಎಸ್‌ಐಟಿಗೆ ಯಾವುದೇ ಕಾಲಮಿತಿ ನಿಗದಿ ಮಾಡಿಲ್ಲ. ಪ್ರಕರಣ ಸಂಬಂಧ ಹೇಳಿಕೆಗಳು, ಆರೋಪಿಗಳ ಹೇಳಿಕೆಗಳು, ಬಂಧಿತರ ಹೇಳಿಕೆ ಎಲ್ಲವನ್ನು ಪರಿಶೀಲಿಸಲಿದೆ. ಸಾಕ್ಷ್ಯ ನಾಶ ಸಂಬಂಧ ಸಚಿವ ಶರಣಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಭೆ ನಡೆದಿದೆ ಎಂದರೆ ಅದನ್ನು ಪರಿಶೀಲನೆ ಮಾಡುತ್ತಾರೆ. ಸಿಸಿಟಿವಿ ದೃಶ್ಯಾವಳಿ ಎಲ್ಲವೂ ಇರುತ್ತದೆ. ಎಸ್‌ಐಟಿಗೆ ಅಗತ್ಯ ಎನಿಸಿದರೆ ಅದರ ಬಗ್ಗೆ ನಡೆಸುತ್ತದೆ. ಅದಕ್ಕೂ ಪರಿಶೀಲನೆ ಮೊದಲೇ ಸುಳ್ಳು ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದರು.