ನೀಟ್ ಪರೀಕ್ಷೆ ಮತ್ತು ಫಲಿತಾಂಶದಲ್ಲಿ ಭಾರೀ ಅಕ್ರಮದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಲಕ್ಷಾಂತರ ಯುವಕರು ತಮ್ಮ ಭವಿಷ್ಯ ಮಣ್ಣುಪಾಲಾಗುವ ಆತಂಕದಲ್ಲಿದ್ದಾರೆ.
ಬೆಂಗಳೂರು (ಜೂ.08): ನೀಟ್ ಪರೀಕ್ಷೆ ಮತ್ತು ಫಲಿತಾಂಶದಲ್ಲಿ ಭಾರೀ ಅಕ್ರಮದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಲಕ್ಷಾಂತರ ಯುವಕರು ತಮ್ಮ ಭವಿಷ್ಯ ಮಣ್ಣುಪಾಲಾಗುವ ಆತಂಕದಲ್ಲಿದ್ದಾರೆ. ಪ್ರಧಾನಿ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ. ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ ಮಾಡಿಸಲಿ... ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಕ್ರಮಗಳನ್ನು ಮುಚ್ಚಿಹಾಕುವಸಲುವಾಗಿಯೇ ಜೂ.4ರಂದು ಲೋಕಸಭೆ ಚುನಾವಣೆ ಫಲಿತಾಂಶ ಬರುವ ದಿನ ತರಾತುರಿಯಲ್ಲಿ ನೀಟ್ ಫಲಿತಾಂಶ ಪ್ರಕಟಿಸಿದ್ದೀರಾ ಎಂದು ಅವರು ಪ್ರಶ್ನಿಸಿದ್ದಾರೆ.
ಹಠ ಮಾಡಿ ಟಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು ಬಿಡು: ಏನಯ್ಯಾ ಎಲ್ಲರೂ ಸೇರಿ ಗೆಲ್ಸಿದ್ರಾ, ಏನೇ ಆಗಲಿ, ಕೊನೆಗೂ ಗೆದ್ದಿಯಲ್ಲ, ಹಠ ಮಾಡಿ ಟಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು ಬಿಡು. ಇದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು. ಕೊಪ್ಪಳ ಲೋಕಸಭಾ ಕ್ಷೇತ್ರದ ನೂತನ ಸಂಸದ ರಾಜಶೇಖರ ಹಿಟ್ನಾಳ ಜಿಲ್ಲೆಯ ನಾಯಕರೊಂದಿಗೆ ಬೆಂಗಳೂರಿನ ಸಿಎಂ ಗೃಹಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ವೇಳೆಯಲ್ಲಿ ಈ ಮೇಲಿನಂತೆ ಹೇಳಿದರು.
ಎಲ್ಲರೂ ಒಟ್ಟಿಗೆ ಕೆಲಸ ಮಾಡಿದ್ದರಿಂದಲೇ ಗೆಲ್ಲಲು ಸಾಧ್ಯವಾಯಿತು. ಯಾರು ಕೈಕೊಟ್ಟಿಲ್ಲ ತಾನೆ ಎಂದಾಗ ಎಲ್ಲರೂ ನಗಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಭಯ್ಯಾಪುರ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಿ.ಎಂ. ನಾಗರಾಜ, ಬಸನಗೌಡ ತುರ್ವಿಹಾಳ, ವಿಪ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಸಂಸದ ಸಂಗಣ್ಣ ಕರಡಿ ಇದ್ದರು. ಸಿಎಂ ಸಿದ್ದರಾಮಯ್ಯ ಬಳಿ ಕ್ಷೇತ್ರದ ಗೆಲುವಿನ ಸಂತಸ ಹಂಚಿಕೊಂಡು, ಹದಿನೈದು ವರ್ಷಗಳ ಬಳಿಕ ಕ್ಷೇತ್ರ ಮರಳಿ ಕಾಂಗ್ರೆಸ್ ತೆಕ್ಕೆಗೆ ಬಂದಿರುವ ಬಗ್ಗೆ ಸಿಎಂ ಗಮನಕ್ಕೆ ತರಲಾಯಿತು.
ಮಂಡ್ಯದಲ್ಲಿ ಹಣ ಬಲವಲ್ಲ, ಜನ ಬಲ ಗೆದ್ದಿದೆ: ಶಾಸಕ ಎಚ್.ಟಿ.ಮಂಜು
ಇದಾದ ಮೇಲೆ ಎಲ್ಲ ನಾಯಕರನ್ನೊಳಗೊಂಡ ತಂಡ ಡಿಸಿಎಂ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿ ಗೆಲುವಿನ ಲೆಕ್ಕಾಚಾರ ಒಪ್ಪಿಸಿತು. ಡಿ.ಕೆ. ಶಿವಕುಮಾರ ಸಹ ಗೆಲುವಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿಮ್ಮ ಆದೇಶ ಪಾಲಿಸಿದ್ದೇವೆ: ನಿಮ್ಮ ಆದೇಶದಂತೆ ಗೆಲ್ಲಿಸಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಕ್ಷೇತ್ರದ ಹಾಲಿ, ಮಾಜಿ ಶಾಸಕರು, ಪಕ್ಷದ ಅಧ್ಯಕ್ಷರು ಶಕ್ತಿಮೀರಿ ಶ್ರಮಿಸಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಗೆಲುವಿನ ವಿವರಣೆಯನ್ನು ಸಿಎಂ ಹಾಗೂ ಡಿಸಿಎಂ ಅವರಿಗೆ ನೀಡಿದರು.