
ಬೆಂಗಳೂರು (ಏ.19): ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಿಸುವ ಉದ್ದೇಶದಿಂದಲೇ ಅವರ ವಿರುದ್ಧದ ಸಿಬಿಐ ತನಿಖೆಗೆ ಅನುಮತಿಯನ್ನು ನೀಡಿದ್ದ ಸರ್ಕಾರ ಹಿಂಪಡೆದಿದೆ ಎಂದು ಸಿಬಿಐ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರ ವಕೀಲರು ಗುರುವಾರ ಹೈಕೋರ್ಟ್ ಮುಂದೆ ಬಲವಾಗಿ ಪ್ರತಿಪಾದಿಸಿದರು.
ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದು ಕಾಂಗ್ರೆಸ್ ಸರ್ಕಾರ 2023ರ ನ.28ರಂದು ಹೊರಡಿಸಿದ ಆದೇಶ ರದ್ದುಪಡಿಸುವಂತೆ ಕೋರಿ ಸಿಬಿಐ ಮತ್ತು ಯತ್ನಾಳ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಗಳಾದ ಕೆ.ಸೋಮಶೇಖರ್‌ಮತ್ತು ಉಮೇಶ್ ಎಂ.ಅಡಿಗ ಅವರಿದ್ದ ವಿಭಾ ಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಒಮ್ಮೆ ಸಿಬಿಐ ತನಿಖೆಗೆ ನೀಡಿದ ಅನುಮತಿ ಹಿಂಪಡೆಯಲು ಅವಕಾಶವಿಲ್ಲ.
ಹಾಗಾಗಿ, ಸರ್ಕಾರದ ಕ್ರಮ ಕಾನೂನು ಬಾಹಿರ. ಡಿ.ಕೆ. ಶಿವಕುಮಾರ್ ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ಸರ್ಕಾರ ಸುಪ್ರೀಂ ಕೋರ್ಟ್ ಮತ್ತು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಶಾಸಕ ಯತ್ನಾಳ ಪರ ವಕೀಲ ವೆಂಕಟೇಶ್ ಪಿ. ದಳವಾಯಿ, ಸರ್ಕಾರದ ಆದೇಶ ಪ್ರಶ್ನಿಸುವ ಅವಕಾಶ ಅರ್ಜಿದಾರರಿಗೆ ಇದೆ. 20230 ನ.28 ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದಿತ್ತು.
ಮೋದಿ ಸರ್ಕಾರದಿಂದ ಕಾಂಗ್ರೆಸ್‌ಗೆ ಐಟಿ ದಾಳಿ ಬೆದರಿಕೆ: ಸಂಸದ ಡಿ.ಕೆ.ಸುರೇಶ್ ಆಕ್ರೋಶ
ಈ ಕ್ರಮ ಪ್ರಶ್ನಿಸಿ ಡಿ.5ರಂದು ಹೈಕೋಟ್೯ಗೆ ಯತ್ನಾಳ ಅರ್ಜಿ ಸಲ್ಲಿಸಿದ್ದಾರೆ. ನಂತರ ಡಿ.22 ರಂದು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಸರ್ಕಾರ ವರ್ಗಾಯಿಸಿದೆ. ಸಿಬಿಐ ತನಿಖೆಗೆ ಒಮ್ಮೆ ವಹಿಸಿದ ಪ್ರಕರಣವನ್ನು ಬಳಿಕ ಹಿಂಪಡೆಯಲು ಸಾಧ್ಯವಿಲ್ಲ. ಆದ್ದ ರಿಂದ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು. ನ್ಯಾಯಪೀಠ ವಿಚಾ ರಣೆಯನ್ನು ಮೇ 27ಕ್ಕೆ ಮುಂದೂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.