ಕಾಂಗ್ರೆಸ್‌ ಗೆದ್ರೆ ಬಿಜೆಪಿ ಬಿ-ರಿಪೋರ್ಟ್‌ಗಳ ತನಿಖೆ: ಡಿ.ಕೆ.ಶಿವಕುಮಾರ್‌

By Kannadaprabha NewsFirst Published Jan 18, 2023, 3:30 AM IST
Highlights

ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಹಗರಣ ಮಾಡಲಾಗಿದೆ. ಅವರನ್ನು ಹಿಡಿದು ಈಗ ನಾವು ಜೈಲಿಗೆ ಕಳುಹಿಸಿದ್ದೇವೆ. ದಲ್ಲಾಳಿಗಳಾಗಿ ಕೆಲಸ ಮಾಡಿದ ಮಂತ್ರಿಗಳು ಹಾಗೂ ಶಾಸಕರು ಹೊರಗಿದ್ದಾರೆ. ಈಗಾಗಲೇ ಗುತ್ತಿಗೆದಾರರು ಶಾಸಕರು ಹಾಗೂ ಮಂತ್ರಿಗಳು ಲಂಚ ಪಡೆದಿದ್ದಾರೆಂದು ಆರೋಪಿಸಿದ ಡಿಕೆಶಿ 

ಹೊಸಪೇಟೆ(ಜ.18):  ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. 40 ಪರ್ಸೆಂಟ್‌ ಕಮಿಷನ್‌ ಸರ್ಕಾರದಲ್ಲಿ ಬರೀ ರಿಪೋರ್ಟ್‌ ಹಾಕಲಾಗುತ್ತಿದೆ. ಇದೊಂದು ಬಿ-ರಿಪೋರ್ಟ್‌ ಸರ್ಕಾರವಾಗಿದೆ. ನಾವು ಅಧಿಕಾರಕ್ಕೆ ಬಂದರೆ ಯಾವ್ಯಾವ ಪ್ರಕರಣದಲ್ಲಿ ಬಿ-ರಿಪೋರ್ಟ್‌ ಹಾಕಲಾಗಿದೆ. ಅವುಗಳ ಮರು ತನಿಖೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಜಾಧ್ವನಿ ಬಸ್‌ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿ, ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಹಗರಣ ಮಾಡಲಾಗಿದೆ. ಅವರನ್ನು ಹಿಡಿದು ಈಗ ನಾವು ಜೈಲಿಗೆ ಕಳುಹಿಸಿದ್ದೇವೆ. ದಲ್ಲಾಳಿಗಳಾಗಿ ಕೆಲಸ ಮಾಡಿದ ಮಂತ್ರಿಗಳು ಹಾಗೂ ಶಾಸಕರು ಹೊರಗಿದ್ದಾರೆ. ಈಗಾಗಲೇ ಗುತ್ತಿಗೆದಾರರು ಶಾಸಕರು ಹಾಗೂ ಮಂತ್ರಿಗಳು ಲಂಚ ಪಡೆದಿದ್ದಾರೆಂದು ಆರೋಪಿಸಿದ್ದಾರೆ ಎಂದರು.

'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ಕೊಡುತ್ತೇವೆ. ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ಕೊಡುತ್ತೇವೆ. ಪ್ರಿಯಾಂಕಾ ಗಾಂಧಿ ಮಹಿಳೆಯರ ಕಷ್ಟಕ್ಕೆ ಸ್ಪಂದಿಸಿ ಘೋಷಣೆ ಮಾಡಿದ್ದಾರೆ. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಕ್ರಾಂತಿ ಮುಗಿದ ಮೇಲೂ ಶುಭಾಶಯಗಳ ಜಾಹೀರಾತು ಕೊಟ್ಟಿದ್ದಾರೆ ಎಂದರು.

ಪ್ರಧಾನಿ ಮೋದಿಗೆ ಕೇಳಿ: ಸಚಿವ ಆರ್‌.ಅಶೋಕ್‌ ಡಿ.ಕೆ.ಶಿವಕುಮಾರ್‌ ಅವರು ಇಂಧನ ಸಚಿವರಾಗಿದ್ದಾಗ ಏನು ಮಾಡಿದ್ರು ಅಂತ ಕೇಳುತ್ತಿದ್ದಾರೆ. ನಾನು ಮಿನಿಷ್ಟರ್‌ ಇದ್ದಾಗ ಏನೂ ಮಾಡಿದೆ ಎಂಬುದನ್ನು ಪ್ರಧಾನಿ ಮೋದಿ ಅವರಿಗೆ ಕೇಳಲಿ. ಅವರೇ ಕರೆದು ಪ್ರಶಸ್ತಿ ನೀಡಿದ್ದಾರೆ. ಎಷ್ಟು ದಿನ ಬದುಕಿರುತ್ತೇನೋ, ಸಾಯ್ತಿನೋ ಗೊತ್ತಿಲ್ಲ. ಆದ್ರೆ ಒಳ್ಳೆಯದು ಮಾಡ್ತೇನೆ ಎಂದರು.

ಪ್ರತಿ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡೋದು ಹೇಗೆ ಎಂದು ಬಿಜೆಪಿಯವರು ವ್ಯಂಗ್ಯ ಮಾಡುತ್ತಿದ್ದಾರೆ. ಅವರು ಬಹಿರಂಗ ಚರ್ಚೆಗೆ ಬರಲಿ. ಇಲ್ಲವೇ ಯಾವುದಾದರೂ ಟಿವಿ ಚಾನೆಲ್‌ಗೆ ಕರೆಯಲಿ. ನಾನು ತಕ್ಕ ಉತ್ತರ ನೀಡುವೆ ಎಂದರು.
ಉಚಿತ ಘೋಷಣೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಬಹುದು, ನಾವು ಮಾಡೋಕೆ ಅಗಲ್ಲಾ? ನಮ್ಮದು ಲೆಕ್ಕಾಚಾರ ಇರಲ್ವಾ?. ನಿಮಗಿಂತ ನಾವು ಬುದ್ಧಿವಂತರಿದ್ದೇವೆ ಎಂದರು.

click me!