ಬಿಜೆಪಿ ಸೇರಲು ವರಿಷ್ಟರಿಂದ ಆಹ್ವಾನ ಬಂದಿದೆ: ಈಶ್ವರಪ್ಪ

By Kannadaprabha News  |  First Published Jul 2, 2024, 11:04 AM IST

ಬಿಜೆಪಿ ಸೇರಲು ನನಗೆ ಪಕ್ಷದ ವರಿಷ್ಟರಿಂದ ಆಹ್ವಾನ ಬಂದಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಇನ್ನಷ್ಟೇ ಮಾತುಕತೆ ನಡೆಯಬೇಕಿದೆ. ಆದರೆ, ಬಿಜೆಪಿ ಸೇರುವುದಂತೂ ಖಚಿತ. ಆದರೆ, ಯಾವಾಗ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಹೇಳಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ 


ಶಿವಮೊಗ್ಗ(ಜು.02):  ಬಿಜೆಪಿ ಸೇರಲು ತಮಗೆ ಪಕ್ಷದ ವರಿಷ್ಟರಿಂದ ಆಹ್ವಾನ ಬಂದಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಈ ವಿಷಯ ತಿಳಿಸಿದರು. ಬಿಜೆಪಿ ಸೇರಲು ನನಗೆ ಪಕ್ಷದ ವರಿಷ್ಟರಿಂದ ಆಹ್ವಾನ ಬಂದಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಇನ್ನಷ್ಟೇ ಮಾತುಕತೆ ನಡೆಯ ಬೇಕಿದೆ. ಆದರೆ, ಬಿಜೆಪಿ ಸೇರುವುದಂತೂ ಖಚಿತ. ಆದರೆ, ಯಾವಾಗ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಹೇಳಿದರು.

Latest Videos

undefined

ಕಾಂಗ್ರೆಸ್ ನಾಯಕರ ಜಾತಿವಾದಿತನ ಬಜಾರದಲ್ಲಿ ಬೆತ್ತಲಾಗಿದೆ; ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಿಂದ ತಮ್ಮ ಪುತ್ರನಿಗೆ ಟಿಕೆಟ್ ಸಿಗದಿ ದ್ದಕ್ಕೆ ಆಕ್ರೋಶಗೊಂಡು ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ದಲ್ಲಿ ಬಂಡಾಯ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿತ್ತು. ಬಳಿಕ, ಚುನಾವಣೆಯಲ್ಲಿ ಅವರು ಬಿಜೆಪಿಯ ಬಿ. ವೈ.ರಾಘವೇಂದ್ರ ವಿರುದ್ಧ ಸೋಲು ಅನುಭವಿಸಿದ್ದರು.

click me!