ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ-ಸೋಮಣ್ಣ?

By Kannadaprabha News  |  First Published Mar 17, 2023, 12:40 PM IST

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ಚರ ಬೆಟ್ಟದಲ್ಲಿ ಶನಿವಾರ ನಡೆಯಲಿರುವ 108 ಅಡಿ ಎತ್ತರದ ಮಲೆಮಹದೇಶ್ವರ ಸ್ವಾಮಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅವರನ್ನು ಅಹ್ವಾನಿಸುವ ಮೂಲಕ ಇಬ್ಬರೂ ನಾಯಕರನ್ನು ಒಂದುಗೂಡಿಸಲು ವೇದಿಕೆ ಸಿದ್ಧಪಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ. 


ಚಾಮರಾಜನಗರ(ಮಾ.17):  ಬಿಜೆಪಿಯಲ್ಲಿ ತೀವ್ರ ಚರ್ಚೆ ಹುಟ್ಟಿಸಿದ್ದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಡುವಿನ ಮುನಿಸು ಶಮನವಾಗಿದ್ದು, ಉಭಯ ಮುಖಂಡರು ಮಾದಪ್ಪನ ಬೆಟ್ಟದಲ್ಲಿ ಒಂದಾಗಲು ವೇದಿಕೆ ಸಿದ್ಧವಾಗಿದೆ. ಜಿಲ್ಲಾಭಿವೃದ್ಧಿಗೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಸಿಗಲಿಲ್ಲ ಮತ್ತು ಪಕ್ಷದಲ್ಲಿ ಕಡಗಣಿಸಲಾಗುತ್ತಿದೆ ಎಂದು ಮಹದೇಶ್ವರ ಬೆಟ್ಟದಿಂದ ಆರಂಭವಾದ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿದ್ದರೂ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಾರ್ಯಕ್ರಮದಿಂದ ದೂರ ಉಳಿದು ಮುನಿಸು ಪ್ರದರ್ಶಿಸಿದ್ದರು.

ಇದೀಗ ಹನೂರು ತಾಲೂಕಿನ ಮಲೆಮಹದೇಶ್ಚರ ಬೆಟ್ಟದಲ್ಲಿ ಶನಿವಾರ ನಡೆಯಲಿರುವ 108 ಅಡಿ ಎತ್ತರದ ಮಲೆಮಹದೇಶ್ವರ ಸ್ವಾಮಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅವರನ್ನು ಅಹ್ವಾನಿಸುವ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಇಬ್ಬರೂ ನಾಯಕರನ್ನು ಒಂದುಗೂಡಿಸಲು ವೇದಿಕೆ ಸಿದ್ಧಪಡಿಸಿದ್ದಾರೆ. ಆಹ್ವಾನ ಪತ್ರಿಕೆಯನ್ನು ಫೈನಲ್‌ ಮಾಡಿರುವುದು ಸಚಿವ ಸೋಮಣ್ಣ ಎಂದೇ ಅಧಿಕಾರಿಗಳು ತಿಳಿಸಿದ್ದಾರೆ.

Tap to resize

Latest Videos

undefined

ಬಿಎಸ್‌ವೈ ನಮಗೂ ನಾಯಕರು: ವಿಜಯೇಂದ್ರಗೆ ಸಚಿವ ಸೋಮಣ್ಣ ಚಾಟಿ

ಶಿಷ್ಟಾಚಾರ ಮೀರಿ ಹೆಸರು ಸೇರ್ಪಡೆಗೊಂಡಿರುವುದು ಯಡಿಯೂರಪ್ಪ ಹಾಗೂ ಸೋಮಣ್ಣ ಒಂದಾಗಲು ವೇದಿಕೆ ಸಿದ್ಧಪಡಿಸಲು ಎಂಬ ಗುಸುಗುಸು ಕೇಳಿ ಬಂದಿದೆ.

ಬಿ.ಎಸ್‌.ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕ. ಅವರ ಬಗ್ಗೆ ಅಪಾರ ಗೌರವವಿದೆ. ನಾಲ್ಕು ಭಾರಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಸಾಕಷ್ಟುಸೇವೆ ಸಲ್ಲಿಸಿದ್ದಾರೆ. ನನ್ನ ಮತ್ತು ಅವರ ನಡುವೆ ಯಾವುದೇ ಮುನಿಸಿಲ್ಲ. ಎಲ್ಲರಿಗೂ ಅವರ ಮಾರ್ಗದರ್ಶನದ ಅವಶ್ಯಕತೆ ಇದೆ ಅಂತ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. 

ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ: ಬಿಎಸ್‌ವೈ

ಬೆಂಗಳೂರು: ಸೋಮಣ್ಣ ಅವರನ್ನು ವರಿಷ್ಠರು ದೆಹಲಿಗೆ ಕರೆಸಿ ಮಾತುಕತೆ ನಡೆಸಿದ್ದಾರೆ. ಎಲ್ಲರೂ ಸರಿ ಹೋಗುತ್ತದೆ. ಯಾವುದೇ ಗೊಂದಲವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ರಾಜಾಹುಲಿ ಪರ ಘರ್ಜಿಸಿದ ಮರಿಹುಲಿ: ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ ವಿಜಯೇಂದ್ರ!

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾನು ಸೋಮಣ್ಣ ಅವರನ್ನು ಭೇಟಿ ಮಾಡಿ ಮೂರು ತಿಂಗಳಾಗಿದೆ. ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು. ವಿಜಯೇಂದ್ರನೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾನೆ. ಸೋಮಣ್ಣನೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಒಂದು ಅಂಶದ ಮೇಲೆ ಗಮನಹರಿಸಿದ್ದೇವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ವಿ.ಸೋಮಣ್ಣ ಅವರು, ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ಅವರು ಯಾವಾಗ ಕರೆದರೂ ಹೋಗಿ ಭೇಟಿ ಮಾಡುತ್ತೇನೆ. ಹೇಳಬೇಕಾದುದನ್ನು ಹೇಳುತ್ತೇನೆ. ನನಗೆ ಅವರ ಬಗ್ಗೆ ಯಾವುದೇ ಬೇಸರವಿಲ್ಲ ಎಂದು ಹೇಳಿದರು.

click me!