Karnataka Bypolls: ಮುಸ್ಲಿಮರ ಪರ ಮಾತನಾಡಿದ್ರೆ ಕೋಮುವಾದವಲ್ಲವೇ?: ಕೆ.ಎಸ್.ಈಶ್ವರಪ್ಪ

Kannadaprabha News   | Kannada Prabha
Published : Mar 28, 2026, 10:00 AM IST
Is it Not Communalism to Speak Only for Muslims KS Eshwarappa Questions Opponents

ಸಾರಾಂಶ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಹಿಂದೂಗಳ ಪರ ಮಾತನಾಡಿದರೆ ಕೋಮುವಾದ ಎನ್ನುವುದಾದರೆ, ಮುಸ್ಲಿಮರ ಪರ ಮಾತನಾಡುವುದು ಕೋಮುವಾದವಲ್ಲವೇ ಎಂದು ಪ್ರಶ್ನಿಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಮತ ವಿಭಜನೆ ಮಾಡುತ್ತಿದೆ ಎಂದು ಆರೋಪಿಸಿದರು.

ಶಿವಮೊಗ್ಗ (ಮಾ.28): ಹಿಂದೂಗಳ ಪರವಾಗಿ ಮಾತನಾಡಿದರೆ ಕೋಮುವಾದ, ಮುಸ್ಲಿಮರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತೀವ್ರವಾಗಿ ಪ್ರಶ್ನೆ ಮಾಡಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರೆ ಅದು ಕೋಮುವಾದ ಆಗುವುದಾದರೆ, ದಾವಣಗೆರೆಯಲ್ಲಿ ಮುಸ್ಲಿಂ ಬಾಂಧವರಿಗೆ ಕಾಂಗ್ರೆಸ್ ಪಕ್ಷದವರಿಗೆ ಟಿಕೆಟ್ ಕೊಡಬೇಕೆಂದು ಒತ್ತಾಯಿಸಿದ್ದು, ಕೋಮುವಾದವಲ್ಲವೇ? ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮವನ್ನು ಆಧಾರವಾಗಿಟ್ಟುಕೊಂಡು ಮತದಾರರಲ್ಲಿ ಧರ್ಮಾಂದತೆಯನ್ನು ಮೂಡಿಸಿ ಮತ ವಿಭಜನೆ ಮಾಡಿ ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲುವ ಹುನ್ನಾರವನ್ನು ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ಇದಕ್ಕಾಗಿ ಸರ್ಕಾರವನ್ನೇ ಬ್ಲಾಕ್‌ಮೇಲ್ ಮಾಡಿ ಹಿಂದೂ-ಮುಸ್ಲಿಂ ಎಂದು ಸಮಾಜದಲ್ಲಿ ಒಡಕು ಮೂಡಿಸಿ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಲು ಸಿದ್ಧರಾಗಿದ್ದ ಸಚಿವ ಜಮೀರ್ ಅಹಮದ್ ಮೇಲೆ ಕೋಮುಸೌಹಾರ್ಧತೆಗೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಪಶ್ಚಿಮಘಟ್ಟ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಹೊರಟಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಹಲವು ಹೋರಾಟಗಳು ನಡೆದಿದ್ದು, ಇವು ಕೇಂದ್ರ ಸರ್ಕಾರದ ಗಮನ ಸೆಳೆಯಲು ಯಶಸ್ವಿಯಾಗಿವೆ. ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸರ್ಕಾರದ ಈ ಯೋಜನೆಗೆ ಇದುವರೆಗೂ ಅನುಮತಿ ಕೊಟ್ಟಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದರು.

ಪರಿಸರ ರಕ್ಷಣೆ ಮಾಡುವ ವಿಚಾರದಲ್ಲೂ ಕೂಡ ಅವರು ಈ ಯೋಜನೆಯನ್ನು ವಿರೋಧಿಸಿ ಕೇಂದ್ರಕ್ಕೆ ಪರಿಸರವಾದಿಗಳ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿ ಮೋದಿ ಜೊತೆಗೆ ಚರ್ಚೆ ನಡೆಸಬೇಕು. ಇದು ಅವರ ಕರ್ತವ್ಯವೂ ಹೌದು ಎಂದರು.

ಈಗಾಗಲೇ ಈ ಯೋಜನೆಯ ವಿರುದ್ಧ ಹಲವು ಗಣ್ಯರು, ಮಠಾಧೀಶರು, ಪರಿಸರ ಪ್ರೇಮಿಗಳು, ಹೋರಾಟದ ಧ್ವನಿಯನ್ನು ಎತ್ತಿದ್ದಾರೆ. ರಾಷ್ಟ್ರಭಕ್ತ ಬಳಗವೂ ಅಹೋರಾತ್ರಿ ಧರಣಿ ನಡೆಸಿದೆ. ಹೈಕೋರ್ಟ್ ಕೂಡಾ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಛೀಮಾರಿ ಹಾಕಿದೆ. ಸ್ವಾಮೀಜಿಗಳು ಕೂಡಾ ನಮ್ಮ ಹೆಣದ ಮೇಲೆ ಈ ಯೋಜನೆ ಜಾರಿಯಾಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದರು.

ನಾವೂ ಕೂಡಾ ಅದನ್ನೇ ಹೇಳುತ್ತೇವೆ. ಹಣದ ದಾಹಕ್ಕಾಗಿ ರೂಪಿಸಿರುವ ಈ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಡೆದ್ದ ಪೈಲ್ವಾನ್‌ ಹಿಂದೆ ಸರಿದ್ರೂ ಕಾಂಗ್ರೆಸ್‌ಗೆ ಮತ್ತೊಂದು ತಲೆನೋವು, ಇನ್ನೂ 10 ಅಭ್ಯರ್ಥಿಗಳು ಕಣದಲ್ಲಿದ್ದೇವೆ, ನಮ್ಮ ತಂತ್ರ ಹೇಳೋಲ್ಲ ಎಂದ ಮನ್ಸೂರ್ ಅಲಿ
ಮುಸ್ಲಿಂ ನಾಯಕರಿಂದಲೇ ಆಪರೇಷನ್ ಪೈಲ್ವಾನ್ ಯಶಸ್ವಿ,ಪರಮಾತ್ಮ ಬಂದ್ರೂ ಹಿಂದೆ ಸರಿಯೊಲ್ಲ ಎಂದಿದ್ದ ಸಾದಿಕ್, ಈಗ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ!