ವಿಧಾನಪರಿಷತ್ತಿಗೂ ಬಿಜೆಪಿ, ಜೆಡಿಎಸ್‌ ದೋಸ್ತಿ ನಿಶ್ಚಿತ?

Published : May 11, 2024, 04:59 AM IST
ವಿಧಾನಪರಿಷತ್ತಿಗೂ ಬಿಜೆಪಿ, ಜೆಡಿಎಸ್‌ ದೋಸ್ತಿ ನಿಶ್ಚಿತ?

ಸಾರಾಂಶ

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಮೇಲ್ಮನೆ ಚುನಾವಣೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇದು ಹುಸಿಯಾಗಿದ್ದು, ಮೈತ್ರಿ ಮುಂದುವರಿಸಲು ಉಭಯ ಪಕ್ಷಗಳು ಒಲವು ಹೊಂದಿವೆ. ವಿಧಾನಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯುವುದರಿಂದ ಸೀಟು ಹಂಚಿಕೆ ವಿಚಾರವಾಗಿ ಶೀಘ್ರದಲ್ಲಿಯೇ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಒಮ್ಮತ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು(ಮೇ.11): ಲೋಕಸಭಾ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಆರು ಸ್ಥಾನಗಳ ಪೈಕಿ ಎರಡು ಸ್ಥಾನಗಳ ನಿರೀಕ್ಷೆಯನ್ನು ಜೆಡಿಎಸ್‌ ಹೊಂದಿದೆ.

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಮೇಲ್ಮನೆ ಚುನಾವಣೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇದು ಹುಸಿಯಾಗಿದ್ದು, ಮೈತ್ರಿ ಮುಂದುವರಿಸಲು ಉಭಯ ಪಕ್ಷಗಳು ಒಲವು ಹೊಂದಿವೆ. ವಿಧಾನಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯುವುದರಿಂದ ಸೀಟು ಹಂಚಿಕೆ ವಿಚಾರವಾಗಿ ಶೀಘ್ರದಲ್ಲಿಯೇ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಒಮ್ಮತ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.
ಚುನಾವಣೆ ನಡೆಯುವ ಆರು ಸ್ಥಾನಗಳ ಪೈಕಿ ಹಾಲಿ ಹೊಂದಿರುವ ಎರಡು ಸ್ಥಾನಗಳನ್ನು ನೀಡುವಂತೆ ಬಿಜೆಪಿಯ ಮುಂದೆ ಜೆಡಿಎಸ್‌ ಪ್ರಸ್ತಾಪವಿಡಲು ಮುಂದಾಗಿದೆ. ಇನ್ನುಳಿದ ನಾಲ್ಕು ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟು, ಆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ದಳಪತಿಗಳು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ವಿಧಾನಪರಿಷತ್‌ 7 ಸ್ಥಾನಗಳ ಎಲೆಕ್ಷನ್‌ಗೆ ಚುನಾವಣಾ ಆಯೋಗದ ಸಿದ್ಧತೆ

ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಜೂ.3ರಂದು ಮತದಾನ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಇದೇ ತಿಂಗಳು 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಹೀಗಾಗಿ ಅಷ್ಟರೊಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಉಭಯ ಪಕ್ಷಗಳ ಮುಖಂಡರು ಕಾರ್ಯೋನ್ಮುಖರಾಗಿದ್ದಾರೆ.

ಪ್ರಸ್ತುತ ನೈಋತ್ಯ ಕ್ಷೇತ್ರದಿಂದ ಎಸ್‌.ಎಲ್‌.ಭೋಜೇಗೌಡ ಆಯ್ಕೆಯಾಗಿದ್ದು, ಈ ಬಾರಿಯೂ ಅವರಿಗೆ ಟಿಕೆಟ್‌ ನೀಡುವುದು ಬಹುತೇಕ ಖಚಿತವಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಆಯ್ಕೆಯಾಗಿದ್ದರು. ಆದರೆ, ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದರಿಂದ ಆ ಸ್ಥಾನಕ್ಕೆ ಜೆಡಿಎಸ್‌ ಮುಖಂಡ ಶ್ರೀಕಂಠೇಗೌಡ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಟಿಕೆಟ್‌ ಲಭಿಸುವ ಸಾಧ್ಯತೆಯೂ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಇನ್ನುಳಿದಂತೆ ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ ಬಿಜೆಪಿ ಬಿಟ್ಟುಕೊಡುವ ಬಗ್ಗೆ ಜೆಡಿಎಸ್‌ ಚಿಂತನೆ ನಡೆಸಿದೆ. ಬುಧವಾರ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿಯೂ ಈ ಕುರಿತು ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸದನದ ಗೌರವ ಎತ್ತಿಹಿಡಿಯಿರಿ: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಕಿವಿಮಾತು
ಎಂಎಸ್ಪಿ ಅಡಿಯಲ್ಲಿ ತೊಗರಿ ಖರೀದಿ ಆರಂಭಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ