ನನ್ನನ್ನು ರಾಜಕೀಯವಾಗಿ ಮುಗಿಸ್ತೇನೆ ಅನ್ನೋದು ಮೂರ್ಖತನ: ಎಚ್‌ಡಿಕೆ, ಬಿಎಸ್‌ವೈಗೆ ಸಿದ್ದು ಟಾಂಗ್‌

Published : Sep 17, 2024, 05:30 AM IST
ನನ್ನನ್ನು ರಾಜಕೀಯವಾಗಿ ಮುಗಿಸ್ತೇನೆ ಅನ್ನೋದು ಮೂರ್ಖತನ: ಎಚ್‌ಡಿಕೆ, ಬಿಎಸ್‌ವೈಗೆ ಸಿದ್ದು ಟಾಂಗ್‌

ಸಾರಾಂಶ

ಹಿಂದೆಂದೂ ಸಣ್ಣ ತಪ್ಪು ಮಾಡದವ ಇಂದು ತಪ್ಪು ಮಾಡಲು ಸಾಧ್ಯವೇ? ನಾನು ಹಿಂದೆಯೂ ತಪ್ಪು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳಿ ವಿಪಕ್ಷಗಳು ತಮ್ಮ ವಿರುದ್ದ ಮಾಡುತ್ತಿರುವ ಆರೋಪಗಳ ವಿರುದ್ಧ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಕಲಬುರಗಿ(ಸೆ.17): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನ್ನನ್ನು ರಾಜಕೀಯವಾಗಿ ಮುಗಿಸು ತೇನೆ ಎಂದು ಅಂದುಕೊಂಡಿ ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ. 

ಕಲಬುರಗಿ ತಾಲೂಕಿನ ಕವಲಗಿ (ಕೆ) ಗ್ರಾಮದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಉದ್ಘಾಟಿಸಿ ಹಾಗೂ ರಾಯಣ್ಣನಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ತಮ್ಮ ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಬದುಕು ತೆರೆದ ಪುಸ್ತಕ ಎಂದು ಬಣ್ಣಿಸಿದರು. ಜತೆಗೆ, ಹಿಂದೆಂದೂ ಸಣ್ಣ ತಪ್ಪು ಮಾಡದವ ಇಂದು ತಪ್ಪು ಮಾಡಲು ಸಾಧ್ಯವೇ? ನಾನು ಹಿಂದೆಯೂ ತಪ್ಪು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳಿ ವಿಪಕ್ಷಗಳು ತಮ್ಮ ವಿರುದ್ದ ಮಾಡುತ್ತಿರುವ ಆರೋಪಗಳ ವಿರುದ್ಧ ತಿರುಗೇಟು ನೀಡಿದರು. 

ವಿಚ್ಛಿದ್ರಕಾರಿ ಶಕ್ತಿಗಳ ದಮನ ಮಾಡಲು ಎದ್ದು ನಿಲ್ಲಿ: ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಿಎಂ ಕರೆ

ಮುಡಾ ಪ್ರಕರಣದಲ್ಲಿ ಏನೇನೂ ಇಲ್ಲ. ಆದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರು ದಿಲ್ಲಿಯಿಂದ ರಾಜಭವನ ದವರೆಗೂ ನನ್ನ ವಿರುದ್ಧ ಪಿತೂರಿ ಹೆಣೆಯುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿ ಆಗಲು ಬಿಡಬಾರದು. ಸಂಗೊಳ್ಳಿ ರಾಯಣ್ಣನ ಹೋರಾಟದ ನಮ್ಮೊಳಗಿದೆ ಕಿಚ್ಚು ಎಂದು ಆರೋಪ ಮಾಡುವವರು ಮೊದಲು ಅರಿತುಕೊಳ್ಳಲಿ ಎಂದು ಎಚ್ಚರಿಸಿದರು. ಬ್ರಿಟಿಷರ ಜೊತೆ ನಮ್ಮವರು ಕೈಜೋಡಿ ಸಿದ್ದರಿಂದಲೇ 200 ವರ್ಷ ಗುಲಾಮಗಿರಿ ಅನುಭವಿಸಿ ದೆವು. ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರಿಗೆ ನಮ್ಮ ಮನೆಮುರುಕರೇ ಹಿಡಿದುಕೊಟ್ಟರು. ನಮ್ಮ ಸಮಾಜದಲ್ಲೇ ಇಂಥ ಮನೆ ಮುರುಕರು ಹಿಂದೆಯೂ ಇದ್ದರು, ಮುಂದೆಯೂ ಇರುತ್ತಾರೆ. ಇಂಥವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?