
ನವದೆಹಲಿ: ‘ಮೊಹಬ್ಬತ್ ಕಿ ದುಕಾನ್ (ಪ್ರೀತಿಯ ಅಂಗಡಿ) ಬಗ್ಗೆ ಮಾತನಾಡುವವರು ಮೋದಿಯ ಸಮಾಧಿ ತೋಡುತ್ತೇವೆ ಎಂಬ ಘೋಷಣೆ ಕೂಗುತ್ತಿದ್ದಾರೆ. ಇದು ಚುನಾವಣಾ ಸೋಲುಗಳ ಬಗ್ಗೆ ಅವರ ಹತಾಶೆ ಎತ್ತಿ ತೋರಿಸುತ್ತದೆ. ಅವರು ಎಂದಿಗೂ ನನ್ನ ಸಮಾಧಿ ಅಗೆಯಲು ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ನಿನ್ನೆ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಕುರಿತು ಚರ್ಚೆ ನಡೆಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ರಾಷ್ಟ್ರಪತಿಗಳನ್ನು ಅವಮಾನಿಸಿದೆ. ಇದು ಭಾರತದ ಬಡ ಬುಡಕಟ್ಟು ಮಹಿಳೆಯೊಬ್ಬಳು ರಾಷ್ಟ್ರಪತಿಯಾಗಿದ್ದರ ನಿಂದನೆ ಮಾತ್ರವಲ್ಲ, ಅವರು ಹೊಂದಿರುವ ಉನ್ನತ ಸಾಂವಿಧಾನಿಕ ಹುದ್ದೆ ಮತ್ತು ಭಾರತದ ಸಂವಿಧಾನಕ್ಕೂ ಮಾಡಿದ ಅವಮಾನ. ಕಾಂಗ್ರೆಸ್ಸಿಗರಿಗೆ ಸಂವಿಧಾನದ ಬಗ್ಗೆ ಮಾತನಾಡುವ ಹಕ್ಕಿಲ್ಲ’ ಎಂದು ಕಿಡಿ ಕಾರಿದರು.
‘ಕಾಂಗ್ರೆಸ್ಸಿನ ಮೊದಲ ಕುಟುಂಬವು ಪ್ರಧಾನಿ ಹುದ್ದೆಯನ್ನು ತಮ್ಮ ಕುಟುಂಬದ ಆಸ್ತಿ ಎಂದು ಭಾವಿಸುತ್ತದೆ. ನನ್ನಂತಹ ಬಡವ ಆ ಹುದ್ದೆಯನ್ನು ಅಲಂಕರಿಸಿರುವುದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದೆ ಅವರು ನನ್ನನ್ನು ಪ್ರತಿದಿನ ನಿಂದಿಸುತ್ತಾರೆ. ವಿಪಕ್ಷಗಳು ನನ್ನ ಸಮಾಧಿ ಅಗೆಯಲು ಸಾಧ್ಯವಿಲ್ಲ. ಏಕೆಂದರೆ ನಾನು ನಿಃಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ದೇಶದ ಕೋಟ್ಯಂತರ ಮಾತೆಯರು, ಸಹೋದರಿಯರು ಮತ್ತು ಬಡವರ ಆಶೀರ್ವಾದ ನನ್ನ ಮೇಲಿದೆ’ ಎಂದು ಚಾಟಿ ಬೀಸಿದರು.
ನಾನು ಪ್ರತಿದಿನ 2 ಕೆ.ಜಿ. ಬೈಗುಳ ತಿನ್ನುತ್ತೇನೆ. ಇದೇ ನನ್ನ ಆರೋಗ್ಯದ ಗುಟ್ಟು’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.