ವಿಜಯೇಂದ್ರ ಮತ್ತೆ ಬಿಜೆಪಿ ಅಧ್ಯಕ್ಷ ಸೂರ್ಯ-ಚಂದ್ರರಷ್ಟೇ ಸತ್ಯ: ರೇಣುಕಾಚಾರ್ಯ

Published : Feb 05, 2025, 11:46 AM IST
ವಿಜಯೇಂದ್ರ ಮತ್ತೆ ಬಿಜೆಪಿ ಅಧ್ಯಕ್ಷ ಸೂರ್ಯ-ಚಂದ್ರರಷ್ಟೇ ಸತ್ಯ: ರೇಣುಕಾಚಾರ್ಯ

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏನೆಂಬುದು ದೆಹಲಿ ನಾಯಕರಿಗೂ ಗೊತ್ತಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವ ಕೆಲಸವನ್ನು ವಿಜಯೇಂದ್ರ ಮಾಡುತ್ತಿದ್ದರೆ, ಭಿನ್ನಮತೀ ಯರ ಗುಂಪು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡುವ ಬದಲಿಗೆ ಸ್ವಪಕ್ಷದವರ ವಿರುದ್ಧವೇ ಮಾತನಾಡುತ್ತಿದೆ ಎಂದು ಕಿಡಿಕಾರಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ   

ದಾವಣಗೆರೆ(ಫೆ.05): ಭಿನ್ನಮತೀಯರು ದೆಹಲಿ ದಂಡಯಾತ್ರೆ ಮಾಡಿದರೂ ಬಿ.ವೈ.ವಿಜಯೇಂದ್ರ ಏನೆಂಬುದು ರಾಷ್ಟ್ರೀಯ ನಾಯಕರಿಗೂ ಗೊತ್ತಿದ್ದು, ಹಾದಿಬೀದಿಯಲ್ಲಿ ಮಾತನಾಡುವ ಮೂಲಕ ಭಿನ್ನಮತೀಯರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ ವಿರುದ್ಧ ವ್ಯಂಗ್ಯವಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏನೆಂಬುದು ದೆಹಲಿ ನಾಯಕರಿಗೂ ಗೊತ್ತಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವ ಕೆಲಸವನ್ನು ವಿಜಯೇಂದ್ರ ಮಾಡುತ್ತಿದ್ದರೆ, ಭಿನ್ನಮತೀ ಯರ ಗುಂಪು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡುವ ಬದಲಿಗೆ ಸ್ವಪಕ್ಷದವರ ವಿರುದ್ಧವೇ ಮಾತನಾಡುತ್ತಿದೆ ಎಂದು ಕಿಡಿಕಾರಿದರು.

ಕರ್ನಾಟಕ ಬೇಡಿಕೆಗಳೆಲ್ಲ ಮೂಲೆಗೆಸೆದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ವರ್ಷವಾದರೂ ಇನ್ನೂ ಸರ್ಕಾರ ಟೇಕಾಫ್ ಆಗಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧಮಾತನಾಡದೇ, ಬಿಜೆಪಿಯವರ ವಿರುದ್ಧವೇ ಭಿನ್ನಮತೀಯರು ಮಾತನಾಡುತ್ತಿದ್ದಾರೆ. ಕೇವಲ ನಾಲೈದು ಜನ ದೆಹಲಿಗೆ ಓಡಾಡುತ್ತಿದ್ದಾರೆ. ಹಿಂದೆ ಬಿ.ಎಸ್ ಯಡಿಯೂರಪ್ಪನವರಿಗೆ ತೊಂದರೆ ಕೊಟ್ಟಾಗ ಬಿಜೆಪಿಗೆ ಯಾವ ಸ್ಥಿತಿ ಬಂದಿತೆಂಬ ಸಂಗತಿಯನ್ನು ಮರೆಯಬಾರದು ಎಂದು ಹೇಳಿದರು. 

ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯು ವುದೂ ಅಷ್ಟೇ ಸತ್ಯ. ಕಾಂಗ್ರೆಸ್ ಪಕ್ಷದ ವಿರುದ್ಧ ಭಿನ್ನಮತೀಯರ ಪೈಕಿ ಯಾರೂ ಮಾತನಾಡುತ್ತಿಲ್ಲ. ನಿಮಗೆ ಮನ ಮರ್ಯಾದೆಯೆಂಬುದು ಇದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಿ. ಒಬ್ಬನಾಯಕ ಎಲ್ಲಾ ಬಿಚ್ಚಿಸುತ್ತೇನೆ ಎಂದು ಹೇಳುತ್ತೀ ಯಲ್ಲ, ಮಾಡಬಾರದ ಭ್ರಷ್ಟಾಚಾರ ನೀನು ಮಾಡಿ ದ್ದೀಯಾ ಎಂದು ಏಕವಚನದಲ್ಲಿ ಕಿಡಿಕಾರಿದರು.

ಭಿನ್ನಮತೀಯರು ಇಷ್ಟೆಲ್ಲಾ ಮಾತನಾಡುತ್ತಿರು ವುದು, ಮಾಡುತ್ತಿರುವುದು ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ. ನಮಗೂ ದೆಹಲಿಗೆ ಹೋಗುವುದು ಗೊತ್ತು. ಸಭೆ ಮಾಡುವುದೂ ನಮಗೆ ಗೊತ್ತು. ಬಿಜೆಪಿಯನ್ನು ಹಾಳು ಮಾಡುವುದಕ್ಕೆ ಭಿನ್ನಮತೀ ಯರು ಹೀಗೆಲ್ಲಾ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಭಿನ್ನಮತೀಯರೆಲ್ಲಾ ಚುನಾವಣೆಗೆ ಸ್ಪರ್ಧೆ ಮಾಡಲಿ, ಯಾರ ಯೋಗ್ಯತೆ ಏನೆಂಬುದು ಆಗ ಗೊತ್ತಾಗುತ್ತದೆ ಎಂದು ಅವರು ತಿಳಿಸಿದರು.

ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಬಂಡವಾಳ ಬಿಚ್ಚಿಡ್ತೀನಿ: ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶ್ರೀರಾಮುಲುಗೆ ಎತ್ತಿ ಕಟ್ಟಲು ಪ್ರಯತ್ನಿಸಿದರಾದರೂ, ರಾಮುಲು ಇಕ್ಕೆಲ್ಲಾ ತಲೆ ಕೆಡಿಸಿಕೊಳ್ಳಲಿಲ್ಲ. ಈಗ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ ಹೆಸರುಗಳನ್ನು ಸುಮ್ಮನೇ ಎಳೆದು ತರುತ್ತಿದ್ದಾರೆ. ನಾವು ಎಲ್ಲರೂ ಸೇರಿಕೊಂಡು, ದೆಹಲಿಗೆ ಹೋಗುವುದಕ್ಕೆ ಸಿದ್ದರಿದ್ದೇವೆ. ನಮಗೇನು ದೆಹಲಿ ದಾರಿಯೇನು ಗೊತ್ತಿಲ್ಲವೇ? ಇಂತಹ ಭಿನ್ನಮತೀಯರ ತಲೆ ಹರಟೆ ಹೆಚ್ಚಾಗಿದೆ. ಇದರಿಂದ ಪಕ್ಷದ ವರ್ಚಸ್ಸುಸಹ ಕಡಿಮೆಯಾಗುತ್ತಿದೆ ಎಂದು ದೂರಿದರು. ಬಿಜೆಪಿ ಸಂಘಟನೆಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರಮಿಸುತ್ತಿದ್ದಾರೆ. ಭಿನ್ನಮತೀಯರ ವಿರುದ್ಧ ಬೆಂಗಳೂರಿನಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಫೆ.5ರಂದು ನಾವೂ ಸಭೆ ಸೇರಲಿದ್ದೇವೆ. ಭಿನ್ನಮತೀಯರ ವಿರುದ ಹೇಗೆ ಹೋರಾಟ ಮಾಡಬೇಕೆಂಬ ಬಗ್ಗೆ ಬುಧವಾರದ ಸಭೆಯಲ್ಲಿ ನಾವೆಲ್ಲರೂ ತೀರ್ಮಾನ ಮಾಡುತ್ತೇವೆ. ನಾವೆಲ್ಲಾ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆನ್ನಿಗೆ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಗೊಂದಲ ಹುಟ್ಟು ಹಾಕುತ್ತಿದ್ದು, ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿರುವ ಭಿನ್ನಮತೀಯರ ವಿರುದ್ಧ ಪಕ್ಷದ ರಾಷ್ಟ್ರೀಯ ನಾಯಕರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಭಿನ್ನಮತೀಯರವನ್ನು ಪಕ್ಷದಿಂದ ಉಚ್ಚಾಟಿಸುವಂತೆಯೂನಾಳೆಬೆಂಗಳೂರಿನ ಸಭೆಯಲ್ಲಿ ನಾವೆಲ್ಲರೂ ಸೇರಿ ಚರ್ಚಿಸಿ, ವರಿಷ್ಠರಿಗೆ ಒತ್ತಾಯಿಸಲಿದ್ದೇವೆ ಎಂದು ಮಾಹಿತಿ ನೀಡಿದರು. ಪಕ್ಷದ ಯುವ ಮುಖಂಡರಾದ ರಾಜು ವೀರಣ್ಣ, ಪ್ರವೀಣ ಜಾಧವ್, ಪಂಜು ಪೈಲ್ವಾನ್ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ