ಇಡೀ ಕರ್ನಾಟಕದಲ್ಲಿ ಬಿಜೆಪಿ ಶಕ್ತಿಶಾಲಿಯಾಗಿದೆ. ಆದರೆ ಹೈಕಮಾಂಡ್ಗೆ ರಾಜ್ಯ ಬಿಜೆಪಿ ಮೇಲೆ ಬೇಸರ ಇರುವುದು ನಿಜ. ರಾಜ್ಯ ಬಿಜೆಪಿ ಸ್ಥಿತಿಗತಿ ಬಗ್ಗೆ ರಾಷ್ಟ್ರೀಯ ಮುಖಂಡರು ಬೇಸರಗೊಂಡಿದ್ದಾರೆ. ಆದರೆ, ಅವರಿಗೆ ರಾಜ್ಯದ ಮೇಲೆ ನಿಯಂತ್ರಣ ಇಲ್ಲ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.
ಹುಬ್ಬಳ್ಳಿ (ಡಿ.14): ಇಡೀ ಕರ್ನಾಟಕದಲ್ಲಿ ಬಿಜೆಪಿ ಶಕ್ತಿಶಾಲಿಯಾಗಿದೆ. ಆದರೆ ಹೈಕಮಾಂಡ್ಗೆ ರಾಜ್ಯ ಬಿಜೆಪಿ ಮೇಲೆ ಬೇಸರ ಇರುವುದು ನಿಜ. ರಾಜ್ಯ ಬಿಜೆಪಿ ಸ್ಥಿತಿಗತಿ ಬಗ್ಗೆ ರಾಷ್ಟ್ರೀಯ ಮುಖಂಡರು ಬೇಸರಗೊಂಡಿದ್ದಾರೆ. ಆದರೆ, ಅವರಿಗೆ ರಾಜ್ಯದ ಮೇಲೆ ನಿಯಂತ್ರಣ ಇಲ್ಲ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ಕೆಲವರಲ್ಲಿ ಅಸಮಾಧಾನ ಇರುವುದೂ ನಿಜ. ಆದರೆ ಅವರೆಲ್ಲರು ಪಕ್ಷ ನಿಷ್ಠರೇ ಹೊರತು ಬಂಡಾಯಗಾರರಲ್ಲ. ಅವರು ವೈಯಕ್ತಿಕ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದಾರೆಯೇ ಹೊರತು ಪಕ್ಷದ ಕುರಿತಲ್ಲ. ಹೀಗಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಮುಂದಿನ ದಿನಗಳಲ್ಲಿ ಹೈಕಮಾಂಡ್ ನಾಯಕರು ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.
ರಾಷ್ಟ್ರದ ಅಭಿವೃದ್ಧಿಗೆ ನರೇಂದ್ರ ಮೋದಿ ಬೇಕು: ಮಾಜಿ ಸಚಿವ ವಿ.ಸೋಮಣ್ಣ ಅಭಿಮತ
ಶೆಟ್ಟರ್ ಮರಳಿ ಬಿಜೆಪಿಗೆ: ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್‌ನಲ್ಲಿನ ಸಂಸ್ಕೃತಿ, ಸಚಿವ ಜಮೀರ್ ಅಹಮದ್ ಅವರ ಧೋರಣೆ ಹೊಂದಿಕೊಳ್ಳಲ್ಲ. ಅವರು ಬಿಜೆಪಿಗೆ ಮರಳಿ ಬರುವುದು ಖಂಡಿತ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್‌ರದು ಸುಸಂಸ್ಕೃತ ಕುಟುಂಬ ಮಾತ್ರವಲ್ಲದೇ, ಹಿಂದೂ ಸಮಾಜ ರಕ್ತಗತ ಮಾಡಿಕೊಂಡ ಕುಟುಂಬ. ಜಗದೀಶ್ ಶೆಟ್ಟರ್ ತಂದೆ ಹುಬ್ಬಳ್ಳಿ ಮೇಯರ್ ಮತ್ತು ಶಾಸಕರಾಗಿದ್ದರು. ಆದರೆ, ಕೆಲ ಕಾರಣಗಳಿಂದ ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿದ್ದಾರೆ. ಖಂಡಿತ ಅವರು ಬಿಜೆಪಿಗೆ ಹಿಂದಿರುಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಗೆಲುವು: ಮತದಾನೋತ್ತರ ಸಮೀಕ್ಷೆ ಪ್ರಕಾರ ಮಧ್ಯಪ್ರದೇಶ, ರಾಜಸ್ತಾನದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಇನ್ನು ತೆಲಂಗಾಣದಲ್ಲಿ ಡಿ.ಕೆ.ಶಿವಕುಮಾರ ಎಟಿಎಂ ಮತ್ತು ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆಯಿಂದ ಫಲಿತಾಂಶ ಏರುಪೇರಾಗಿದೆ ಎಂದವರು ವಿಶ್ಲೇಷಿಸಿದರು.
ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡೋಣ: ಬಿ.ಎಸ್.ಯಡಿಯೂರಪ್ಪ
ಶೀಘ್ರ ಡಿಕೆಶಿ ಜೈಲಿಗೆ: ಚಾರ್ಜ್ ಶೀಟ್ ಹಾಕುವ ಸಂದರ್ಭದಲ್ಲಿ ಜೈಲಿಗೆ ಹೋಗುವ ಭೀತಿಯಿಂದ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮೇಲೆ ಒತ್ತಡ ಹಾಕಿ ಸಿದ್ದರಾಮಯ್ಯ ಮೂಲಕ ಡಿಕೆಶಿ ಪ್ರಕರಣ ಹಿಂಪಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಲೋಕಸಭೆ ಚುನಾವಣೆಗೆ ಮೊದಲು ಜೈಲಿಗೆ ಹೋಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರಲ್ಲದೆ, ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ಯಾವುದೇ ಕಾರಣಕ್ಕೂ ಈ ಸರ್ಕಾರ ಇರಲ್ಲ ಎಂದೂ ಭವಿಷ್ಯ ನುಡಿದರು.