ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ಹೈಕಮಾಂಡ್‌ಗೆ ಬಿಟ್ಟನಿರ್ಧಾರ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಮೈಸೂರು (ಏ.01): ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ಹೈಕಮಾಂಡ್‌ಗೆ ಬಿಟ್ಟನಿರ್ಧಾರ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ನಾನು ಚುನಾವಣೆಯಲ್ಲಿ ನಿಲ್ಲಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣ ಪ್ರಕ್ರಿಯೆ ನಡೆಯುತ್ತಿದೆ. ವರುಣ ಕ್ಷೇತ್ರದ ಬಗ್ಗೆ ಹೆಚ್ಚ ಚರ್ಚೆಯಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ಬಗ್ಗೆ ಘೋಷಿಸಿದ್ದಾರೆ ಎಂದರು. ಶಿಕಾರಿಪುರ ತಾಲೂಕಿನ ಜನತೆ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಜ್ಯ ಮಾತ್ರವಲ್ಲ ದೇಶಕ್ಕೆ ಪರಿಚಯಿಸಿದರು.
ಅದೇ ರೀತಿ ವರುಣ ಕ್ಷೇತ್ರದ ಪಕ್ಷದ ಕಾರ್ಯಕರ್ತರು, ಮತದಾರರು ನನ್ನನ್ನು ರಾಜ್ಯಾದ್ಯಂತ ಪರಿಚಯಿಸಿದ್ದಾರೆ. ನನ್ನ ಮೇಲೆ ಪ್ರೀತಿ ತೋರಿಸಿದ್ದಾರೆ. ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸಾಧ್ಯವೇ ಎಂಬ ಪ್ರಶ್ನೆಗೆ, ಯಾವುದು ಕೂಡ ಅಸಾಧ್ಯವಲ್ಲ. ಕೆ.ಆರ್.ಪೇಟೆಯಲ್ಲಿ ಗೆಲ್ಲುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಅದೇ ರೀತಿ ಶಿರಾ ಉಪ ಚುನಾವಣೆಯಲ್ಲೂ ಮತದಾರರು ಬಿಜೆಪಿ ಕೈ ಹಿಡಿದರು ಎಂದರು. ವರುಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ಗೆಲ್ಲುವ ಅವಕಾಶ ಇದೆ. ವಿಜಯೇಂದ್ರ ಅಪ್ರಸ್ತುತ. ಬಿಜೆಪಿ ಗೆಲ್ಲುವುದು ನಮ್ಮ ಗುರಿ. ವರುಣ ಜನರ ಋುಣವನ್ನು ಯಾವ ರೀತಿ ತೀರಿಸಲಾಗುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ.
undefined
ದಾವಣಗೆರೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಆಧರಿಸಿ, ಟಿಕೆಟ್ ಹಂಚಿಕೆ: ಶೋಭಾ ಕರಂದ್ಲಾಜೆ
ವರುಣ ಮಾತ್ರವಲ್ಲ ರಾಜ್ಯದ 224 ಕ್ಷೇತ್ರಗಳ ಎಲ್ಲರ ಬಗ್ಗೆಯೂ ಉತ್ಸಾಹ ಇದೆ. ಮತ್ತೊಮ್ಮೆ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ಅಧಿಕಾರ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಒಂದು ಕಡೆ ಟಿಕೆಟ್ ಅಂತಿಮವಾಗಿಲ್ಲ. ಎರಡು ಕಡೆ ಸ್ಪರ್ಧೆಯ ಪ್ರಶ್ನೆಯೇ ಇಲ್ಲ. ಶಿಕಾರಿಪುರ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಒಂದು ಬಾರಿ ಭೇಟಿ ನೀಡಿದ್ದೇನೆ. ಏ. 3 ರಿಂದ ಮತ್ತೊಮ್ಮೆ ಪ್ರಚಾರ ಆರಂಭಿಸುತ್ತಿದ್ದೇನೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಟಿಕೆಟ್‌ಗಾಗಿ ಮನವಿ: ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಜಯಪ್ರಕಾಶ್ ಅವರಿಗೆ ಟಿಕೆಟ್ ನೀಡುವಂತೆ ಅಭಿಮಾನಿಗಳು ಬಿ.ವೈ. ವಿಜಯೇಂದ್ರ ಅವರಿಗೆ ಮನವಿ ಸಲ್ಲಿಸಿದರು.
Chamarajanagar: ಏ.9ಕ್ಕೆ ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ?: ಸಫಾರಿಗೆ ಹೋಗ್ತಾರಂತೆ ಮೋದಿ
ವರುಣದಲ್ಲಿ ಸ್ಪರ್ಧಿಸಲು ಆಗ್ರಹ: ವಿಜಯೇಂದ್ರ ಅವರು ಮೈಸೂರು ಭೇಟಿ ವಿಚಾರ ತಿಳಿದ ವರುಣ ಕ್ಷೇತ್ರದ ವಿವಿಧ ಗ್ರಾಮಗಳ ಮುಖಂಡರು ಆಗಮಿಸಿ ವಿಜಯೇಂದ್ರ ಪರವಾಗಿ ಜೈಕಾರ ಕೂಗಿದರು. ವರುಣಾದಿಂದಲೇ ಸ್ಪರ್ಧಿಸಬೇಕು ಎಂದು ಆಗ್ರಹಿಸಿದರು. ಮುಖಂಡರಾದ ಕೌಟಿಲ್ಯ ರಘು, ಹೇಮಂತ್‌ಕುಮಾರ್ ಗೌಡ ಇದ್ದರು.